ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮತ್ತೆ ಗ್ರೆನೇಡ್​​​ ದಾಳಿ: 7 ಮಂದಿಗೆ ತೀವ್ರ ಗಾಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಣೆವೆ ರಾಜ್ಯದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮೂರನೇ ದಾಳಿ ಇದಾಗಿದೆ.

news18-kannada
Updated:October 12, 2019, 4:07 PM IST
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮತ್ತೆ ಗ್ರೆನೇಡ್​​​ ದಾಳಿ: 7 ಮಂದಿಗೆ ತೀವ್ರ ಗಾಯ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಅ.12): ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಗ್ರೆನೇಡ್​​ ದಾಳಿ ನಡೆದಿದೆ. ಈ ದಾಳಿಯಲ್ಲಿ ಬರೀ ಏಳು ಮಂದಿಗೆ ತೀವ್ರ ಗಾಯಗಳಾಗಿವೆ. ಶ್ರೀನಗರದ ಹರಿ ಸಿಂಗ್ ಹೈ ರಸ್ತೆ ಸಮೀಪ ಈ ಗ್ರೆನೇಡ್​​ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಗ್ರೆನೇಡ್ ದಾಳಿ ನಡೆಯುತ್ತಿದ್ದಂತೆ ಶ್ರೀನಗರದ  ಸುತ್ತ ಭಾರೀ ಪೊಲೀಸ್​​ ಬಿಗಿ ಬಂದೋಬಸ್ತ್​​ ಏರ್ಪಡಿಸಲಾಗಿದೆ. ಹಾಗೆಯೇ ಸಿಆರ್​ಪಿಎಫ್ ಪೊಲೀಸರು ಈ ದಾಳಿಗೆ ಕಾರಣವಾದ ಉಗ್ರರನ್ನು ಬಂಧಿಸಲು ಮುಂದಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಇದಾದ ನಂತರ ಉಗ್ರರು ಕಣೆವೆ ರಾಜ್ಯದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಮೂರನೇ ದಾಳಿ ಇದಾಗಿದೆ.

ಇದನ್ನೂ ಓದಿ: 2 ತಿಂಗಳ ಬಳಿಕ ಜಮ್ಮು ಕಾಶ್ಮೀರದಲ್ಲಿ ಮೊಬೈಲ್ ಸಂಪರ್ಕ; ಸೋಮವಾರದಿಂದ ಪೋಸ್ಟ್​ಪೇಯ್ಡ್​ ಸೇವೆ ಆರಂಭ

ಈ ಹಿಂದೆಯೂ ಶಂಕಿತ ಉಗ್ರರು ಜಮ್ಮು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಿದ್ದರು. ಅಂದಿನ ಉಗ್ರರು ನಡೆದ ಈ ಗ್ರೆನೇಡ್ ದಾಳಿಯಲ್ಲಿ ಓರ್ವ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು 8 ಜನರಿಗೆ ತೀವ್ರ ಗಾಯಗಳಾಗಿದ್ದವು. ಅಲ್ಲದೇ ಗಾಯಾಳುಗಳ ಪೈಕಿ ಒಬ್ಬರ ಎದೆಗೆ ತೀವ್ರ ತೆರನಾದ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದರು.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ...
----------
Loading...

First published:October 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...