ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 8 ಮಂದಿ ಸಾವು, 20 ಜನರಿಗೆ ಗಾಯ

ಬಸ್​ನಲ್ಲಿದ್ದ ಪ್ರಯಾಣಿಕರು ದಿನಗೂಲಿ ಕಾರ್ಮಿಕರಾಗಿದ್ದು, ಗುಜರಾತ್​​​ನ ಪಾಲಂಪುರ್​ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. 

Latha CG | news18-kannada
Updated:September 23, 2019, 7:45 AM IST
ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 8 ಮಂದಿ ಸಾವು, 20 ಜನರಿಗೆ ಗಾಯ
ಪ್ರಾತಿನಿಧಿಕ ಚಿತ್ರ
  • Share this:
ಅಜ್ಮೀರ್​(ಸೆ.23): ಬಸ್​ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸುಮಾರು 8 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಲಮಾನ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡವರನ್ನು ಜವಾಹರ್ ಲಾಲ್​ ನೆಹರು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನುಳಿದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಟ್ರಕ್​ ಚಾಲಕನೇ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಭಾರತದಲ್ಲಿ ಎಲ್ಲವೂ ಬದಲಾಗುತ್ತಿದೆ, ಬಲಿಷ್ಠವಾಗುತ್ತಿದೆ ಇಡೀ ದೇಶ ವಿಶ್ವನಾಯಕನಾಗುವತ್ತ ಹೆಜ್ಜೆ ಇಟ್ಟಿದೆ; ಪ್ರಧಾನಿ ನರೇಂದ್ರ ಮೋದಿ

ಅಪಘಾತಕ್ಕೊಳಗಾದ ಬಸ್​ ಜೈಪುರದಿಂದ ಗುಜರಾತ್​​ಗೆ ತೆರಳುತ್ತಿತ್ತು. ಬಸ್​ನಲ್ಲಿ ಸುಮಾರು 85 ಮಂದಿ ಪ್ರಯಾಣಿಸುತ್ತಿದ್ದರು. ಎರಡು ಟ್ರಕ್​​ಗಳು ಬಸ್​ನ ಅಕ್ಕಪಕ್ಕದಲ್ಲಿ ಹೋಗುತ್ತಿದ್ದವು. ಆಗ 2 ಟ್ರಕ್​ಗಳ ನಡುವೆ ಬಸ್​ ಸಿಲುಕಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಸುಮಾರು 8 ಮಂದಿ ಮೃತಪಟ್ಟಿದ್ದಾರೆ. 20 ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್​ನಲ್ಲಿದ್ದ ಪ್ರಯಾಣಿಕರು ದಿನಗೂಲಿ ಕಾರ್ಮಿಕರಾಗಿದ್ದು, ಗುಜರಾತ್​​​ನ ಪಾಲಂಪುರ್​ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

First published: September 23, 2019, 7:40 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading