ಕಾನ್ಪುರ (ಜು.3): ಕುಖ್ಯಾತ ಗ್ಯಾಂಗಸ್ಟರ್ನನ್ನು ಬಂಧಿಸಲು ಹೋದವರ ಮೇಲೆಯೇ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಎಸ್ಪಿ ಸೇರಿ 8 ಜನ ಪೊಲೀಸರು ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ.
ಕಾನ್ಪುರದ ಬಿಕ್ರಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಕುಖ್ಯಾತ ಗ್ಯಾಂಗಸ್ಟರ್ ವಿಕಾಸ್ ಡೂಬೆಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಆತ ಅಡಗಿದ್ದ ಮನೆಯೊಳಗೆ ನುಗ್ಗಿ ಆತನನ್ನು ಹಿಡಿದೇ ತರುತ್ತೇವೆ ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದರು.
ಪೊಲೀಸರು ವಿಕಾಸ್ ಅಡಗಿ ಕೂತಿದ್ದ ಮನೆ ತಲುಪುತ್ತಿದ್ದಂತೆ ಟೆರೇಸ್ ಮೇಲಿನಿಂದ 8-10 ಜನರು ಗುಂಡಿನ ದಾಳಿ ನಡೆಸಿದ್ದಾರೆ. ಶಿವರಾಜ್ಪುರ ಪೊಲೀಸ್ ಠಾಣಾಧಿಕಾರಿ ಮಹೇಶ್ ಯಾದವ್, ಸಬ್ ಇನ್ಸ್ಪೆಕ್ಟರ್, ಐದು ಕಾನ್ಸ್ಟೇಬಲ್ ಹಾಗೂ ಮತ್ತೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಕಾಸ್ ಡೂಬೆಯನ್ನು ಬಂಧಿಸಲು ಮುಂದಾದಾಗ ಈ ಘಟನೆ ನಡೆದಿದೆ. 8 ಪೊಲೀಸರು ಸ್ಥಳದಲ್ಲೇ ಮೃತಪಟ್ಟರೆ, ನಾಲ್ಕು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಜಿಲ್ಲೆಗಳಿಂದ ಪೊಲೀಸರಿಗೆ ಬರುವಂತೆ ನಾವು ಹೇಳಿದ್ದೇವೆ ಎಂದು ಕಾನ್ಪುರ್ ಎಡಿಜಿ ಜೆಎನ್ ಸಿಂಗ್ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ