ಉತ್ತರಪ್ರದೇಶ; ಮರಳು ತುಂಬಿದ ಲಾರಿ ಕಾರಿನ ಮೇಲೆ ಬಿದ್ದು ಒಂದೇ ಕುಟುಂಬದ 8 ಜನ ಸಾವು

ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ, ಲಾರಿ ಅಡಿಯಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಘಟನೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಅಪಘಾತವಾಗಿರುವ ದೃಶ್ಯ.

ಅಪಘಾತವಾಗಿರುವ ದೃಶ್ಯ.

 • Share this:
  ಉತ್ತರಪ್ರದೇಶ (ನವೆಂಬರ್​ 02); ಸಂಬಂಧಿಕರ ಮದುವೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾರಿನ ಮೇಲೆ ಮರಳು ತುಂಬಿದ್ದ ಲಾರಿಯೊಂದು ಬಿದ್ದ ಕಾರಣ ಒಂದೇ ಕುಟುಂಬದ 8 ಜನ ಸಾವನ್ನಪ್ಪಿರುವ ದುರ್ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು ನಡೆದಿದೆ. ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಲಾಗಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಕಾರಿನಲ್ಲಿದ್ದ ಎಂಟು ಪ್ರಯಾಣಿಕರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕನಿಷ್ಠ ಇಬ್ಬರು ಪ್ರಯಾಣಿಕರು ಲಾರಿಯ ಕೆಳಗೆ ಸಿಲುಕಿರಬಹುದಾದ ಶಂಕೆ ವ್ಯಕ್ತವಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

  "ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಕಾರ್ಪಿಯೋ ಕಾರಿನೊಳಗೆ 8 ಜನರು ಇದ್ದರು, ಅದರ ಮೇಲೆ ಲಾರಿ ಪಲ್ಟಿಯಾಗಿದೆ. ಚಾಲಕ ಸೇರಿದಂತೆ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮರಳು ತುಂಬಿದ್ದ ಲಾರಿಯ ಟೈರ್ ಸ್ಫೋಟಗೊಂಡಿದ್ದರಿಂದ ಅಪಘಾತ ಸಂಭವಿಸಿದೆ. ಘಟನೆ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ" ಎಂದು ಕೌಶಂಬಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿಕೆಯನ್ನು ಎಎನ್ಐ ಉಲ್ಲೇಖಿಸಿದೆ.  ಮೃತರೆಲ್ಲರೂ ಒಂದೇ ಹಳ್ಳಿ ಮತ್ತು ಕುಟುಂಬದವರಾಗಿದ್ದು, ವಿವಾಹ ಸಮಾರಂಭದಿಂದ ಹಳ್ಳಿಗೆ ಹಿಂದಿರುಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ, ಲಾರಿ ಅಡಿಯಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಘಟನೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಲಾಗಿದೆ.
  Published by:MAshok Kumar
  First published: