Secunderabad Fire Accident: ಸಿಕಂದರಾಬಾದ್ ಹೋಟೆಲ್‌ನಲ್ಲಿ ಅಗ್ನಿ ಅವಘಡ: 8 ಸಾವು, ಕಟ್ಟಡದಿಂದ ಜಿಗಿದ ಹಲವರಿಗೆ ಗಾಯ!

ಈ ಶೋರೂಂನ ಚಾರ್ಜಿಂಗ್ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡು ಕಟ್ಟಡದ ತುಂಬೆಲ್ಲಾ ಹೊಗೆ ವ್ಯಾಪಿಸಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿಸಿಪಿ ಆತಂಕ ವ್ಯಕ್ತಪಡಿಸಿದ್ದಾರೆ.

Secunderabad

Secunderabad

  • Share this:
fಹೈದರಾಬಾದ್(ಸೆ.13): ಮಂಗಳವಾರ ಮುಂಜಾನೆ ತೆಲಂಗಾಣದ (Telangana) ಸಿಕಂದರಾಬಾದ್‌ನ (Secunderabad) ಹೋಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಎಂಟು ಜನರು ಸಾವನ್ನಪ್ಪಿದ್ದಾರೆ. ನೆಲ ಮಹಡಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ರೀಚಾರ್ಜಿಂಗ್ (Electric Showroom) ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೊಗೆಯಿಂದಾಗಿ ಮೊದಲ ಮತ್ತು ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದ ಜನರಿಗೆ ಉಸಿರುಗಟ್ಟಿದೆ. ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದಿದ್ದಾರೆ ಎಂದು ಹೈದರಾಬಾದ್ ಕಮಿಷನರ್ ಸಿವಿ ಆನಂದ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ. ಕೆಲವರನ್ನು ಆಸ್ಪತ್ರೆಗೆ ಕೂಡ ದಾಖಲಿಸಲಾಗಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ರೂಬಿ ಹೋಟೆಲ್ ಕಟ್ಟಡದ ನೆಲಮಾಳಿಗೆಯಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಶೋರೂಂ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಾಯಂಡಹಳ್ಳಿಯಲ್ಲಿ ಅಗ್ನಿಅವಘಡ: 20 ಗುಡಿಸಲು ಬೆಂಕಿಗೆ ಭಸ್ಮ

ಈ ಶೋರೂಂನ ಚಾರ್ಜಿಂಗ್ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡು ಕಟ್ಟಡದ ತುಂಬೆಲ್ಲಾ ಹೊಗೆ ವ್ಯಾಪಿಸಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿಸಿಪಿ ಆತಂಕ ವ್ಯಕ್ತಪಡಿಸಿದ್ದಾರೆ. ಹೋಟೆಲ್​ನಲ್ಲಿ ಸುಮಾರು 20-25 ಮಂದಿ ತಂಗಿದ್ದರು. ಮೃತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಬೆಂಕಿ ಮತ್ತು ಹೊಗೆಯನ್ನು ನೋಡಿ ಜನರು ಭಯಭೀತರಾದರು, ಹೀಗಾಗಿ ಕಿಟಕಿಯಿಂದ ಕೆಳಗೆ ಜಿಗಿಯಲು ಪ್ರಾರಂಭಿಸಿದರು. ಇದರಲ್ಲಿ ಸುಮಾರು 10 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯರು ಅನೇಕ ಜನರನ್ನು ಸುರಕ್ಷಿತವಾಗಿ ಹೋಟೆಲ್‌ನಿಂದ ಹೊರಬರಲು ಸಹಾಯ ಮಾಡಿದರು.


ಈ ಶೋರೂಂನ ಚಾರ್ಜಿಂಗ್ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡು ಕಟ್ಟಡದ ತುಂಬೆಲ್ಲಾ ಹೊಗೆ ವ್ಯಾಪಿಸಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಡಿಸಿಪಿ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೇವರಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್​​ನಲ್ಲಿ ಬೆಂಕಿ ಅನಾಹುತ; ಇಬ್ಬರ ಸಾವು

ಹೋಟೆಲ್ ನಲ್ಲಿ ಸುಮಾರು 20-25 ಮಂದಿ ತಂಗಿದ್ದರು. ಮೃತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಬೆಂಕಿ ಮತ್ತು ಹೊಗೆಯನ್ನು ನೋಡಿದ ಜನರು ಭಯಭೀತರಾದರು ಮತ್ತು ಅವರು ಕಿಟಕಿಗಳಿಂದ ಕೆಳಗೆ ಜಿಗಿಯಲು ಪ್ರಾರಂಭಿಸಿದರು, ಇದರಲ್ಲಿ ಸುಮಾರು 10 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯರು ಅನೇಕ ಜನರನ್ನು ಸುರಕ್ಷಿತವಾಗಿ ಹೋಟೆಲ್‌ನಿಂದ ಹೊರಬರಲು ಸಹಾಯ ಮಾಡಿದರು.

ಮೋದಿ ಟ್ವೀಟ್​


ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, 'ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಬೆಂಕಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಪ್ರತಿ ಮೃತರ ಕುಟುಂಬಕ್ಕೆ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುತ್ತದೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.
Published by:Precilla Olivia Dias
First published: