ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘ ಸ್ಪೋಟ ಉಂಟಾಗಿದ್ದು, ಭಾರೀ ಮಳೆಯಿಂದಾಗಿ ಕಣಿವೆ ಜನರು ಸಾವನ್ನಪ್ಪಿದ್ದಾರೆ. ಮಳೆ ಅಬ್ಬರದಿಂದ ಉಂಟಾಗಿರುವ ಪ್ರವಾಹದಿಂದ ಏಳು ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಕಿಶ್ತವರ್ ಜಿಲ್ಲೆಯ ಹಂಜಾರ್ ಗ್ರಾಮದಲ್ಲಿ ಅನೇಕ ಮನೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈ ವೇಳೆ ಗಾಯಗೊಂಡ 12 ಜನರನ್ನು ಎಸ್ಎಚ್ಒ ನೇತೃತ್ವದ ಪೊಲೀಸ್ ತಂಡ ರಕ್ಷಿಸಿದೆ. ಹಂಜಾರ್ ಗ್ರಾಮ ಸೇರಿದಂತೆ ಜಿಲ್ಲೆಯಲ್ಲಿ ಬೆಳಗಿನ ಜಾವ ಮೇಘ ಸ್ಪೋಟ ಉಂಟಾಗಿದೆ. ಜನರು ಮಲಗಿದ್ದ ವೇಳೆ ಮಳೆ ಅಬ್ಬರ ಹೆಚ್ಚಾಗಿರುವ ಹಿನ್ನೆಲೆ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ಗ್ರಾಮದ ಐದು ಆರು ಮನೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. 30 ರಿಂದ 40 ಜನರು ಇದರಿಂದ ಹಾನಿಗೊಂಡಿದ್ದಾರೆ. ಇವರೆಗೆ ನಾವು 7 ಶವಗಳು ಮಾತ್ರ ಪತ್ತೆಯಾಗಿದ್ದು, 30ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಹಾನಿಗೊಳಗಾದ ಪ್ರದೇಶದಲ್ಲಿ ಈಗಾಗಲೇ ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ನೈಸರ್ಗಿಕ ವಿಪತ್ತು ತಂಡ ಮತ್ತು ಸೇನಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿವೆ. ಈ ನಡುವೆ ನಿರಂತರವಾಗಿ ಮಳೆಯಾಗುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಜೊತೆಗೆ ಈ ಪ್ರದೇಶಕ್ಕೆ ತಲುಪಲು ರಸ್ತೆ ಸಂಪರ್ಕ ಇಲ್ಲದಿರುವುದು ಮತ್ತೊಂದು ಸವಾಲ್ ಆಗಿದೆ, ಮೊಬೈಲ್ ಸಂಪರ್ಕ ಕೂಡ ಇಲ್ಲದಿರುವುದರಿದ ರಕ್ಷಣಾ ಕಾರ್ಯ ನಡೆಸಲು ತಂಡ ಹರಸಾಹಸ ನಡೆಸಿದೆ. ಈವರೆಗೆ ನಾಲ್ಕು ಶವಗಳು ಪತ್ತೆಯಾಗಿದ್ದು, ಉಳಿದವರ ಪತ್ತೆ ಕಾರ್ಯ ಸಾಗಿದೆ.
ಘಟನೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕಿಶ್ತವರ್ ಮತ್ತು ಕಾರ್ಗಿಲ್ನಲ್ಲಿ ಉಂಟಾಗಿರುವ ಮೇಘ ಸ್ಪೋಟ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡಲಾಗುವುದು. ಪ್ರವಾಹದಲಲಿ ಸಿಲುಕಿರುವ ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಘಟನೆ ಕುರಿತು ಲೆಫ್ಟಿನಂಟ್ ಗವರ್ನರ್ ಮತ್ತು ಪೊಲೀಸ್ ಮಹಾನಿರ್ದೇಶಕರ ಜೊತೆ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ವರದಿ ಪಡೆದಿದ್ದಾರೆ. ಪ್ರವಾಹ ಪೀಡಿತ ಸ್ಥಳದಲ್ಲಿ ಎಸ್ಡಿಆರ್ಎಫ್, ಸೇನೆ ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಎನ್ಡಿಆರ್ಎಫ್ ಕೂಡ ಶೀಘ್ರವೇ ತಲುಪಲಿದೆ. ನಮ್ಮ ಆದ್ಯತೆಯೆಂದರೆ ಸಾಧ್ಯವಾದಷ್ಟು ಜೀವಗಳನ್ನು ಉಳಿಸುವುದು ಎಂದಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ