ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವಂತೆ ಮನವಿ ಮಾಡಿ 154 ನಾಗರಿಕರ ನಿಯೋಗದಿಂದ ರಾಷ್ಟ್ರಪತಿ ಕೋವಿಂದ್ ಭೇಟಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹೆಸರಿನಲ್ಲಿ ಕೆಲವರು ರಾಜಕೀಯ ದುರುದ್ದೇಶದಿಂದ ಜನರನ್ನು ಪ್ರಚೋದಿಸಿ ಸಮಾಜದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಷ್ಟ್ರಪತಿ ಕೋವಿಂದ್ ಅವರಿಗೆ ಮನವಿ ಮಾಡಿದರು.

HR Ramesh | news18-kannada
Updated:January 24, 2020, 7:19 PM IST
ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವಂತೆ ಮನವಿ ಮಾಡಿ 154 ನಾಗರಿಕರ ನಿಯೋಗದಿಂದ ರಾಷ್ಟ್ರಪತಿ ಕೋವಿಂದ್ ಭೇಟಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ನಿಯೋಗ.
  • Share this:
ನವದೆಹಲಿ: ನಿವೃತ್ತ ನ್ಯಾಯಮೂರ್ತಿಗಳು, ನಾಗರಿಕ ಸೇವಾ ಅಧಿಕಾರಿಗಳು, ಸೇನಾಧಿಕಾರಿಗಳು ಸೇರಿದಂತೆ 154 ಮಂದಿ ನಾಗರಿಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಿ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವಂತೆ ಮನವಿ ಮಾಡಿದರು. ಮತ್ತು ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹೆಸರಿನಲ್ಲಿ ಸಮಾಜದಲ್ಲಿ ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣದ ಅಧ್ಯಕ್ಷ ಮತ್ತು ನಿವೃತ್ತ ನ್ಯಾಯಮೂರ್ತಿ ಪೆರ್ಮೊಡ್ ಕೊಹ್ಲಿ ಅವರು ಈ ನಿಯೋಗದ ನೇತೃತ್ವ ವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹೆಸರಿನಲ್ಲಿ ಕೆಲವರು ರಾಜಕೀಯ ದುರುದ್ದೇಶದಿಂದ ಜನರನ್ನು ಪ್ರಚೋದಿಸಿ ಸಮಾಜದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಷ್ಟ್ರಪತಿ ಕೋವಿಂದ್ ಅವರಿಗೆ ಮನವಿ ಮಾಡಿದರು.
ಇದನ್ನು ಓದಿ: ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಲಿದೆ; ಪ್ರಣಬ್ ಮುಖರ್ಜಿ
First published: January 24, 2020, 7:19 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading