ಲಕ್ನೋ: ಉತ್ತರ ಪ್ರದೇಶ (Uttar Pradesh) ಸಿಎಂ ಯೋಗಿ ಆದಿತ್ಯನಾಥ್ ಅವರ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ಭದ್ರತಾ ಕೆಲಸಕ್ಕೆ ಹಾಜರಾಗುವ ಒಂದು ದಿನಕ್ಕೆ ಮುಂಚಿತವಾಗಿ ಈ ಘಟನೆ ನಡೆದಿದ್ದು, ಪೊಲೀಸರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೃತ ಪೊಲೀಸ್ ಸಿಬ್ಬಂದಿ ಸಂದೀಪ್ ಯಾದವ್ ಎಂದು ತಿಳಿದು ಬಂದಿದ್ದು, ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆಗಿರುವ ಸಂದೀಪ್ ಅವರು ತನ್ನ ಜೊತೆ ಕರ್ತವ್ಯದ ಕಾರಣಕ್ಕೆ ಸರ್ವೀಸ್ ರಿವಾಲ್ವರ್ ಇಟ್ಟುಕೊಂಡಿದ್ದರು. ಉತ್ತರ ಪ್ರದೇಶದ ಮಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ತಮ್ಮ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ರಿವಾಲ್ವರ್‌ನಿಂದ ಗುಂಡು ಹಾರಿದೆ. ಈ ವೇಳೆ ಗುಂಡು ಸಂದೀಪ್ ಯಾದವ್ ಅವರ ತಲೆಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸಂದೀಪ್ ಯಾದವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: Yogi Adityanath Interview: ಭಾರತದಲ್ಲಿ ಮುಸ್ಲಿಮರು ಭಯಪಡುವ ಅಗತ್ಯವಿಲ್ಲ; ಯೋಗಿ ಆದಿತ್ಯನಾಥ್ ಅಭಯ
ಯೋಗಿ ಆದಿತ್ಯನಾಥ್ ವಿರುದ್ಧ ಕೋರ್ಟ್‌ಗೆ ಹೋದವನಿಗೆ 1 ಲಕ್ಷ ರೂಪಾಯಿ ದಂಡ!
ಅಲಹಾಬಾದ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪದೇ ಪದೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಲಹಾಬಾದ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. 2007ರಲ್ಲಿ ಎರಡು ಗುಂಪುಗಳ ನಡುವೆ ನಡೆದ ಗೋರಖ್‌ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ನ್ಯಾಯಾಲಯ ದಂಡ ವಿಧಿಸಿದೆ.
2007 ರ ಜನವರಿ 27 ರಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮುಸ್ಲಿಮರ ಹಬ್ಬವಾದ ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿತ್ತು. ವಿಪರೀತ ಮಟ್ಟಕ್ಕೆ ಏರಿದ್ದ ಈ ಗಲಭೆಯಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಪರ್ವೇಜ್ ಪರ್ವಾಜ್ ಅವರು 2008 ರ ಸೆಪ್ಟೆಂಬರ್ 26 ರಂದು ದೂರು ಸಲ್ಲಿಸಿ ಯೋಗಿ ಆದಿತ್ಯನಾಥ್ ಅವರು ಯುವಕನ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳುವ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪ ಮಾಡಿದ್ದರು.
ಪ್ರಕರಣ ಸಂಬಂಧ ಪರ್ವೇಜ್ ಪರ್ವಾಜ್ ಸಲ್ಲಿಸಿದ್ದ ಅರ್ಜಿ ಆಧರಿಸಿ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪರ್ವೇಜ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಅಲಹಾಬಾದ್ ಹೈಕೊರ್ಟ್‍ಗೆ ಅರ್ಜಿ ಸಲ್ಲಿಸಿದರು. ಆದರೆ ಆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೀಗಾಗಿ ಪರ್ವೇಜ್ ಅವರು ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಕೂಡ ಈ ಪ್ರಕರಣದ ಅರ್ಜಿಯನ್ನು ವಜಾಗೊಳಿಸಿತ್ತು.
ಅರ್ಜಿದಾರರಿಗೆ ಒಂದು ಲಕ್ಷ ದಂಡ
ಬಳಿಕ ಪರ್ವೇಜ್ ಪರ್ವಾಜ್ ಅವರು 2022ರ ಅಕ್ಟೋಬರ್ 11 ರಂದು ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಆಗ ನ್ಯಾಯಾಲಯವು ಗಲಭೆ ಪ್ರಕರಣದಲ್ಲಿ ಪೊಲೀಸರ ಅಂತಿಮ ವರದಿಯ ವಿರುದ್ಧದ ಪ್ರತಿಭಟನಾ ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೇ, ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈಗಾಗಲೇ ಸುಪ್ರೀಂ ಕೋರ್ಟ್‍ನಲ್ಲಿ ಪ್ರಕರಣ ಇತ್ಯರ್ಥವಾಗಿದೆ. ಪುನಃ ಮೇಲ್ಮನವಿ ಸಲ್ಲಿಸುವ ಅಗತ್ಯವೇನಿದೆ ಎಂದು ಅರ್ಜಿದಾರರಿಗೆ ಪ್ರಶ್ನಿಸಿದಲ್ಲದೇ, ಅರ್ಜಿಯನ್ನು ತಿರಸ್ಕರಿಸಿ 1 ಲಕ್ಷ ರೂ. ದಂಡವನ್ನು ವಿಧಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ