HOME » NEWS » National-international » A MOURNING DAY CELEBRATION AT NEW DELHI WHO DIED IN FARMERS PROTEST DBDEL LG

Mourning Day: ರೈತರ ಪ್ರತಿಭಟನೆಯಲ್ಲಿ ಮೃತಪಟ್ಟವರ ಗೌರವಾರ್ಥ ಇಂದು ಶೋಕ ದಿನ ಆಚರಣೆ

ಶೋಕ ದಿನ ಆಚರಣೆ ಅಂಗವಾಗಿ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಹಳ್ಳಿಗಳಲ್ಲಿ ಇಂದು ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

news18-kannada
Updated:December 20, 2020, 10:55 AM IST
Mourning Day: ರೈತರ ಪ್ರತಿಭಟನೆಯಲ್ಲಿ ಮೃತಪಟ್ಟವರ ಗೌರವಾರ್ಥ ಇಂದು ಶೋಕ ದಿನ ಆಚರಣೆ
ಪಂಜಾಬ್ ರೈತರ ಪ್ರತಿಭಟನೆಯ ಚಿತ್ರ
  • Share this:
ನವದೆಹಲಿ(ಡಿ. 20): ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರ ಪಾಲಿಗೆ ಮರಣ ಶಾಸನವಾಗಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು 'ಶೋಕ ದಿನ' ಆಚರಣೆ ನಡೆಸಲು ಸಂಯುಕ್ತ್ ಕಿಸಾನ್ ಮೋರ್ಚಾ ಕರೆ ಕೊಟ್ಟಿದೆ. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್ 26ರಿಂದ  ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಂಘು ಗಡಿಯಲ್ಲಿ 32ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಈ‌ ಹೋರಾಟದ ನೊಗ ಹೊತ್ತಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಈಗ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಗೌರವಾರ್ಥ ಶೋಕ ದಿನ ಆಚರಣೆ ನಡೆಸಲು ಕರೆ ಕೊಟ್ಟಿದೆ. 'ಶೋಕ ದಿನ' ಆಚರಣೆ ಅಂಗವಾಗಿ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಹಳ್ಳಿಗಳಲ್ಲಿ ಇಂದು ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ಅಲ್ಲದೆ ಕಳೆದ 25 ದಿನಗಳಿಂದ ದೆಹಲಿ ಗಡಿಗಳಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು ಈವರೆಗೆ 25 ಮಂದಿ ಮೃತಪಟ್ಟಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ. ಜೊತೆಗೆ ರೈತರು ಸಾವನ್ನಪ್ಪಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಎಚ್ಚರಿಸಿದೆ.

ಪಟ್ಟಣ ಪಂಚಾಯತಿ ಬೇಡ, ಸ್ವತಂತ್ರ ಗ್ರಾಮ ಪಂಚಾಯತಿ ರಚಿಸುವಂತೆ ಆಗ್ರಹಿಸಿ ಚುನಾವಣೆ ಬಹಿಷ್ಕಾರ

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಚಳಿಯಿಂದ ತೀವ್ರತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಏಕೆಂದರೆ ದೆಹಲಿಯ ತಾಪಮಾನ ರಾತ್ರಿ ವೇಳೆ 4 ಡಿಗ್ರಿ ಸೆಲ್ಷಿಯಸ್ ಗಿಂತಲೂ ಕಡಿಮೆಯಾಗುತ್ತಿದೆ. ಇದರಿಂದ ಸಹಜವಾಗಿ ಗಡಿಯಲ್ಲಿ, ಅಂದರೆ ಬಯಲಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅದರಲ್ಲೂ ವಯಸ್ಸಾದವರು ಅಥವಾ ಇನ್ನಿತರ ಆರೋಗ್ಯದ ಸಮಸ್ಯೆ ಇರುವವರ ಮೇಲೆ ಶೀತ ಗಾಳಿಯು ತುಂಬಾನೇ ದುಷ್ಪರಿಣಾಮ ಬೀರುತ್ತದೆ.

ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೆ ನಡೆದ 5 ಸುತ್ತಿನ ಸಭೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಅನೌಪಚಾರಿಕ ಮಾತುಕತೆಗಳೆಲ್ಲವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆದಿದ್ದು 25ನೇ ದಿನಕ್ಕೆ ಕಾಲಿಟ್ಟಿದೆ.

ಕೇಂದ್ರ ಸಚಿವರು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Youtube Video
ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.
Published by: Latha CG
First published: December 20, 2020, 10:08 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories