Sri Lanka: ಗೋತಬಯ ರಾಜೀನಾಮೆ ಅಂಗೀಕಾರ, ಮುಂದಿನ ವಾರದೊಳಗೆ ಲಂಕಾಕ್ಕೆ ಹೊಸ ಅಧ್ಯಕ್ಷರ ಆಯ್ಕೆ

ಸಿಂಗಾಪುರದಿಂದಲೇ ಗೋತಬಯ ರಾಜಪಕ್ಸ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶ್ರೀಲಂಕಾ ಸಂಸತ್ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಅವರಿಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ.

ಶ್ರೀಲಂಕಾ ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸ

ಶ್ರೀಲಂಕಾ ಮಾಜಿ ಅಧ್ಯಕ್ಷ ಗೋತಬಯ ರಾಜಪಕ್ಸ

  • Share this:
ಶ್ರೀಲಂಕಾ: ಶ್ರೀಲಂಕಾದಲ್ಲಿ (Sri Lanka) ಆರ್ಥಿಕ ಬಿಕ್ಕಟ್ಟಿನ (Economic Crisis) ಜೊತೆಗೆ ರಾಜಕೀಯ ಬಿಕ್ಕಟ್ಟು (Political Crisis) ಸಹ ಮುಂದುವರೆದಿದೆ. ಜನರ ದಂಗೆಗೆ (revolt) ಹೆದರಿ ದೇಶವನ್ನು ತೊರೆದು, ಹೆಂಡತಿ (Wife) ಜೊತೆ ರಾತ್ರೋರಾತ್ರಿ ದೇಶ ಬಿಟ್ಟು ಓಡಿ ಹೋಗಿದ್ದ ಶ್ರೀಲಂಕಾ ಅಧ್ಯಕ್ಷ (Sri Lanka Preseident) ಗೋತಬಯ ರಾಜಪಕ್ಸ (Gotabaya Rajapaksa) ತಮ್ಮ ಸ್ಥಾನಕ್ಕೆ ರಾಜೀನಾಮೆ (Resign) ನೀಡಿದ್ದಾರೆ. ಸದ್ಯ ಅವರು ಸಿಂಗಾಪುರದಲ್ಲಿ (Singapore) ಆಶ್ರಯ ಪಡೆದ್ದಾರೆ ಎನ್ನಲಾಗಿದ್ದು, ಅಲ್ಲಿಂದಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಅವರ ರಾಜೀನಾಮೆಯನ್ನು ಶ್ರೀಲಂಕಾ ಸಂಸತ್ ಸ್ಪೀಕರ್ (Parliament Speaker) ಮಹಿಂದಾ ಯಾಪಾ ಅಬೇವರ್ದನ (Mahinda Yapa Abeywardena) ಸ್ವೀಕರಿಸಿದ್ದಾರೆ. ಜೊತೆಗೆ ಈ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ.

ಸಿಂಗಾಪುರದಲ್ಲಿ ಇರುವ ಗೋತಬಯ ರಾಜಪಕ್ಸ

ಕೆಲ ದಿನಗಳ ಹಿಂದಷ್ಟೇ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸ ತಮ್ಮ ಹೆಂಡತಿ ಹಾಗೂ ಇಬ್ಬರು ಅಂಗರಕ್ಷಕರ ಜೊತೆ ರಾತ್ರೋ ರಾತ್ರಿ ದೇಶ ತೊರೆದು ಓಡಿ ಹೋಗಿದ್ದರು. ಅವರು ಮಾಲ್ಡೀವ್ಸ್‌ನಲ್ಲಿ ಇದ್ದಾರೆ ಎನ್ನಲಾಗಿತ್ತು. ಆದರೆ ಅವರು ಸಿಂಗಾಪುರದಲ್ಲಿ ಇರುವುದು ಪತ್ತೆಯಾಗಿದೆ. ಶ್ರೀಲಂಕಾದಿಂದ ನೇರವಾಗಿ ಮಾಲ್ಡೀವ್ಸ್‌ಗೆ ತೆರಳಿದ ಅವರು, ಅಲ್ಲಿಂದ ಸೌದಿ ಏರ್ ಲೈನ್ಸ್ ವಿಮಾನದಲ್ಲಿ ರಾತ್ರಿ 7-17ಕ್ಕೆ ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಸಿಂಗಾಪುರದಿಂದಲೇ ಗೋತಬಯ ರಾಜಪಕ್ಸ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶ್ರೀಲಂಕಾ ಸಂಸತ್ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಅವರಿಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ, ಅಧ್ಯಕ್ಷ ರಾಜಪಕ್ಸ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ: Gotabaya Rajapaksa: ರಾತ್ರೋ ರಾತ್ರಿ ದೇಶ ತೊರೆದಿದ್ದು ಗೋತಬಯ ಒಬ್ಬರೇ ಅಲ್ಲ! ಪಲಾಯನ ಮಾಡಿದವರ ಲಿಸ್ಟ್ ದೊಡ್ಡದಿದೆ ನೋಡಿ

 ಮುಂದಿನ ವಾರದೊಳಗೆ ಹೊಸ ಅಧ್ಯಕ್ಷರ ಆಯ್ಕೆ

ಗೋತಬಯ ರಾಜಪಕ್ಸ ಅಂವರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ವಾರದೊಳಗೆ ಚುನಾವಣೆ ನಡೆಯಲಿದೆ. ಬಳಿಕ ಹೊಸ ಅಧ್ಯಕ್ಷರು ಆಯ್ಕೆಯಾಗಲಿದ್ದಾರೆ ಅಂತ ಮೂಲಗಳು ತಿಳಿಸಿವೆ. ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸ್ಪೀಕರ್ ಅವರು ತಮ್ಮ ಸಂಕ್ಷಿಪ್ತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಮುಂದಿನ 7 ದಿನಗಳಲ್ಲಿ ಹೊಸ ನಾಯಕನ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲಾ ಶಾಸಕರು ಭಾಗವಹಿಸಲು ಶಾಂತಿಯುತ ವಾತಾವರಣಕ್ಕೆ ಸಾರ್ವಜನಿಕರು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಭದ್ರತೆ ಪಡೆಯದೇ ಸಿಂಗಾಪುರದಲ್ಲಿರುವ ರಾಜಪಕ್ಸ

ಗೋತಬಯ ರಾಜಪಕ್ಸ ಅವರು ಸಿಂಗಾಪುರ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಆದರೆ ಅದು ಖಾಸಗಿ ಭೇಟಿಯಾಗಿರುತ್ತದೆ. ಅವರು ಯಾವುದೇ ಭದ್ರತೆಯನ್ನು ಕೇಳಿಲ್ಲ, ನಾವು ಕೊಟ್ಟಿಲ್ಲ, ಸಿಂಗಾಪುರದಲ್ಲಿ ಸಾಮಾನ್ಯವಾಗಿ ಭದ್ರತೆ ಮನೆಗೆ ಅವಕಾಶವಿಲ್ಲ ಎಂದು ಸಿಂಗಾಪುರ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ. ಸಿಂಗಾಪುರದಲ್ಲಿ ಕೆಲವು ದಿನಗಳ ಕಾಲ ರಾಜಪಕ್ಸ ತಂಗಲಿದ್ದಾರೆ ಎಂದು ಶ್ರೀಲಂಕಾ ಭದ್ರತಾ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Ram Setu: ರಾಷ್ಟ್ರೀಯ ಸ್ಮಾರಕವಾಗಲಿದೆಯೇ ರಾಮಸೇತು? ಜುಲೈ 26ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಗೋತಬಯ ರಾಜಪಕ್ಸ ಆಗಮನ ನಂತರ ಪ್ರಕಟಣೆ ಹೊರಡಿಸಿರುವ ಸಿಂಗಾಪುರ ಪೊಲೀಸರು,ರಾಜಪಕ್ಸ ವಿರುದ್ಧ ಇಲ್ಲಿ ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಅಂತ ತಿಳಿಸಿದ್ದಾರೆ. ಜನರು ನಮ್ಮ ಸ್ಥಳೀಯ ಕಾನೂನಿಗೆ ವಿಧೇಯರಾಗಿರಬೇಕು, ಅಕ್ರಮವಾಗಿ ಗುಂಪುಗೂಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Published by:Annappa Achari
First published: