• Home
  • »
  • News
  • »
  • national-international
  • »
  • Bharat Jodo Yatra: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಸಾಥ್‌ ನೀಡಿದ ಆದಿತ್ಯ ಠಾಕ್ರೆ

Bharat Jodo Yatra: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಸಾಥ್‌ ನೀಡಿದ ಆದಿತ್ಯ ಠಾಕ್ರೆ

ಆದಿತ್ಯಾ ಠಾಕ್ರೆ ಮತ್ತು ರಾಹುಲ್ ಗಾಂಧಿ

ಆದಿತ್ಯಾ ಠಾಕ್ರೆ ಮತ್ತು ರಾಹುಲ್ ಗಾಂಧಿ

ಈ 2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮಗಳನ್ನು ನಡೆಸಲು ಒಪ್ಪಿಕೊಂಡಿವೆ.

  • News18 Kannada
  • Last Updated :
  • Mumbai, India
  • Share this:

ಮುಂಬೈ: 2024ರ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್‌ ದೇಶಾದ್ಯಂತ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ನೇತೃತ್ವದ ಭಾರತ್ ಜೋಡೋ ಯಾತ್ರೆ  ಮಹಾರಾಷ್ಟ್ರದ ಹಿಂಗೋಲಿಯ ಕಲಮ್ನೂರಿಯಲ್ಲಿ ಸಾಗುತ್ತಿದ್ದು, ಈ ವೇಳೆ ಶಿವಸೇನೆ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ (Aaditya Thackeray)  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi)  ಸಾಥ್‌ ನೀಡಿದ್ದಾರೆ. ದಾರಿಯಲ್ಲಿ ನಿಂತಿದ್ದ ಜನರತ್ತ ಕೈ ಬೀಸುತ್ತಾ ಇಬ್ಬರು ನಾಯಕರು ಪಾದಯಾತ್ರೆಯಲ್ಲಿ (Congress Bharat Jodo Yatra) ಹೆಜ್ಜೆ ಹಾಕಿದರು.


"ಭಾರತ್ ಜೋಡೋ ಯಾತ್ರೆ ರಾಜಕೀಯಕ್ಕಿಂತ ಹೆಚ್ಚು"
ಈ ವೇಳೆ ಮಾತನಾಡಿದ ಆದಿತ್ಯ ಠಾಕ್ರೆ "ಭಾರತ್ ಜೋಡೋ ಯಾತ್ರೆಯು ರಾಜಕೀಯಕ್ಕಿಂತ ಹೆಚ್ಚು. ಇದು ಭಾರತದ ಕಲ್ಪನೆಗೆ ಸಂಬಂಧಿಸಿದೆ" ಎಂದು ಎರಡು ಗಂಟೆಗಳ ಕಾಲ ಮೆರವಣಿಗೆ ನಡೆಸಿದ ನಂತರ ಸುದ್ದಿ ಮಾಧ್ಯಮಗಳಿಗೆ ತಿಳಿಸಿದರು. "ಈ ಯಾತ್ರೆ ಪ್ರಜಾಪ್ರಭುತ್ವಕ್ಕಾಗಿ, ದೇಶಕ್ಕಾಗಿ, ಪ್ರಜಾಪ್ರಭುತ್ವದ ಕಲ್ಪನೆಗಾಗಿ ಉದ್ದೇಶಿಸಿದ ರೋಚಕ ಯಾತ್ರೆ" ಎಂದು ಅವರು ಹೇಳಿದರು.


2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮ
ಆದಿತ್ಯ ಠಾಕ್ರೆ ಅವರನ್ನು ಪಕ್ಷದ ಸಹೋದ್ಯೋಗಿಗಳಾದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಹಾಗೂ ಮಾಜಿ ಶಾಸಕ ಸಚಿನ್ ಅಹಿರ್ ಸ್ವಾಗತಿಸಿ ಬರಮಾಡಿಕೊಂಡರು. ಇನ್ನೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡಾ ಲೇಹ್‌ನ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಈ ಮೂಲಕ ಈ 2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮಗಳನ್ನು ನಡೆಸಲು ಒಪ್ಪಿಕೊಂಡಿವೆ.


ಬಿಜೆಪಿ ವಿರುದ್ಧ ಗುಡುಗಿದ ರಾಹುಲ್
ಯಾತ್ರೆಯಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಮಹಾರಾಷ್ಟ್ರದ ಕೆಲವು ದೊಡ್ಡ ಯೋಜನೆಗಳನ್ನು ಇತರ ರಾಜ್ಯಗಳಿಗೆ ಕಳೆದುಕೊಂಡಿರುವ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಾಗ, ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗಿನ ಮೈತ್ರಿಯ ಕಾರಣವನ್ನು ಉಲ್ಲೇಖಿಸಿದರು. ದೊಡ್ಡ ರಾಜಕೀಯ ಹಿನ್ನಡೆಯ ನಡುವೆಯೂ, ಆದಿತ್ಯ ಠಾಕ್ರೆ ಅವರು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಲ್ಲಿ ಸೈದ್ಧಾಂತಿಕ ಬದಲಾವಣೆಯ ಸುಳಿವು ನೀಡಿ, ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಸಂಬಂಧವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದರು.


65ನೇ ದಿನದ ಯಾತ್ರೆಯ ಈ ಸಂದರ್ಭದಲ್ಲಿ ಜನರು ಇಬ್ಬರೂ ನಾಯಕರಿಗೆ ಪುಷ್ಪವೃಷ್ಟಿ ಮಾಡಿದರು. ಅನೇಕ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮಾರ್ಗದುದ್ದಕ್ಕೂ ಬೆಂಬಲ ನೀಡಿ ಘೋಷಣೆ ಕೂಗಲಾಯಿತು, ಈ ಯಾತ್ರೆಯಲ್ಲಿ ಇಪ್ಪತ್ತೆರಡು ಮಾಜಿ ಸೈನಿಕರೂ ಕೂಡ ಭಾಗವಹಿಸಿದ್ದರು.


ಇದನ್ನೂ ಓದಿ: Shah Rukh Khan: ಶಾರುಖ್‌ ಖಾನ್‌ಗೆ ಸಂಕಷ್ಟ ತಂದ ದುಬಾರಿ ವಾಚ್! ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳಿಂದ ವಿಚಾರಣೆ


ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿತ್ತಾದರೂ, ಅನಾರೋಗ್ಯದ ಕಾರಣ ಅವರು ಭಾಗವಹಿಸಲು ಸಾಧ್ಯವಾಗಲಿಲ್ಲ.


ಭಾರತ್ ಜೋಡೋ ಯಾತ್ರೆ
ಭಾರತ್ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಅದರ 3,570 ಕಿಮೀ ಮೆರವಣಿಗೆ ಮುಂದಿನ ವರ್ಷ ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ. ಭಾರತದ ಇತಿಹಾಸದಲ್ಲಿ ಯಾವುದೇ ಭಾರತೀಯ ರಾಜಕಾರಣಿಗಳು ಕಾಲ್ನಡಿಗೆಯಲ್ಲಿ ನಡೆಸಿದ ಅತಿ ಉದ್ದದ ಮೆರವಣಿಗೆ ಇದಾಗಿದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿಕೆಯಲ್ಲಿ ಹೇಳಿಕೊಂಡಿದೆ. ಇದುವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದಾರೆ. ದೇಶಾದ್ಯಂತ ವಿವಿಧ ಸಮುದಾಯಗಳ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವ ಯಾತ್ರೆಯ ಸಂದೇಶವನ್ನು ಒಪ್ಪುವ ಯಾರಾದರೂ ಅವರೊಂದಿಗೆ ಸೇರಬಹುದು ಎಂದು ಕಾಂಗ್ರೆಸ್ ಪಕ್ಷವು ಹೇಳಿಕೊಂಡಿದೆ.


ಇದನ್ನೂ ಓದಿ: Human Sacrifice: ಮೃತ ಅಪ್ಪನನ್ನು ಬದುಕಿಸಲು 2 ತಿಂಗಳ ಹಸುಗೂಸಿನ ಬಲಿಗೆ ಯತ್ನಿಸಿದ ಮಹಿಳೆ


ಭಾರತ್ ಜೋಡೋ ಯಾತ್ರೆ ಸೋಮವಾರ ಸಂಜೆ ಮಹಾರಾಷ್ಟ್ರಕ್ಕೆ ಪ್ರವೇಶಿಸಿತ್ತು. ರಾಹುಲ್ ಗಾಂಧಿ ಅವರು 15 ದಿನಗಳಲ್ಲಿ ಮಹಾರಾಷ್ಟ್ರದ ಐದು ಜಿಲ್ಲೆಗಳ 15 ವಿಧಾನಸಭೆ ಮತ್ತು 6 ಸಂಸದೀಯ ಕ್ಷೇತ್ರಗಳಲ್ಲಿ ಸಂಚರಿಸಲಿದ್ದು, 382 ಕಿ.ಮೀ. ಕ್ರಮಿಸಲಿದ್ದಾರೆ. ಯಾತ್ರೆ ಈಗಾಗಲೇ ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದ ಭಾಗಗಳಲ್ಲಿ ಕ್ರಮಿಸಿ ಬಂದಿದೆ.

Published by:ಗುರುಗಣೇಶ ಡಬ್ಗುಳಿ
First published: