AAI Recruitment 2020: ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೂಯಿದೆ ಅವಕಾಶ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ(AAI) ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸುಮಾರು 368  ಹುದ್ದೆಗಳು ಖಾಲಿ ಇದ್ದು, ಜನವರಿ 14ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

    ವಿದ್ಯಾರ್ಹತೆ: ಬಿ.ಇ, ಬಿ.ಟೆಕ್, ಬಿ.ಎಸ್ಸಿ, ಪದವಿ, ಗ್ರಾಜುಯೇಶನ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ವಯೋಮಿತಿ: ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 32 ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    -ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

    ವೇತನ: ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000 ರಿಂದ 1,80,000ರೂ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ರಿಂದ 1,40,000ರೂ ವೇತನವನ್ನು ನೀಡಲಾಗುವುದು.

    ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 1000ರೂ, ಪ.ಜಾ/ಪ.ಪಂ ಅಭ್ಯರ್ಥಿಗಳು 170ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಕೆ: ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.aai.aero/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15.2020 ರಿಂದ ಜನವರಿ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
    Published by:Harshith AS
    First published: