Abhishek Bachchan| ಶೂಟಿಂಗ್ ವೇಳೆ ಕೈಗೆ ಗಾಯ; ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು
ಅಭಿಷೇಕ್ ಬಚ್ಚನ್ ಒಟಿಟಿ ವೇದಿಕೆಗಾಗಿ ಲೂಡೋ ಮತ್ತು ದಿ ಬಿಗ್ ಬುಲ್ ಪ್ರಾಜೆಕ್ಟ್ಗಳಲ್ಲಿ ಕಾಣಿಸಿಕೊಂಡಿದ್ದ ಬಳಿಕ, ಇದೀಗ ಬಾಬ್ ಬಿಸ್ವಾಸ್ ಮತ್ತು ದಾಸ್ವಿ ಚಿತ್ರಗಳ ಶೂಟಿಂಗ್ನಲ್ಲಿ ತೊಡಗಿದ್ದಾರೆ.
ಮುಂಬೈ (ಆಗಸ್ಟ್ 23); ಬಾಲಿವುಡ್ ಖ್ಯಾತ ನಟ ಅಭಿಷೇಕ್ ಬಚ್ಚನ್ಗೆ ಶೂಟಿಂಗ್ ವೇಳೆ ಕೈಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆರೋಗ್ಯ ವಿಚಾರಿಸಲು ಅಮಿತಾಬ್ ಬಚ್ಚನ್ (abhishek bachchan) ಮತ್ತು ಸಹೋದರಿ ಶ್ವೇತಾ ಬಚ್ಚನ್ ನಂದಾ ಆಸ್ಪತ್ರೆಗೆ ಭೇಟಿ ನೀಡಿರುವ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ. ಅಭಿಷೇಕ್ ಬಚ್ಚನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿತ್ರೀಕರಣದ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಈ ಹಿಂದೆ ಮುಂಬೈ ವಿಮಾನ ನಿಲ್ದಾಣದಲ್ಲಿ ಅಭಿಷೇಕ್ ಬಚ್ಚನ್ ಅವರ ಬಲಗೈ ಮತ್ತು ಬೆರಳುಗಳಿಗೆ ಬ್ಯಾಂಡೇಜ್ ಕಟ್ಟಿಕೊಂಡು ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಜೊತೆ ಕೆಲವು ದಿನಗಳ ಹಿಂದೆ ಕಾಣಿಸಿಕೊಂಡಿದ್ದರು.
ಮಣಿರತ್ನಂ ಅವರ ಪೊನ್ನಿನ್ ಸೆಲ್ವನ್ ಚಿತ್ರದ ಚಿತ್ರೀಕರಣಕ್ಕಾಗಿ ಐಶ್ವರ್ಯ ರೈ ಬಚ್ಚನ್ ಮಧ್ಯಪ್ರದೇಶಕ್ಕೆ ತೆರಳಿದ್ದರು. ಭಾನುವಾರ ಮುಂಬೈಗೆ ವಾಪಸ್ ಬಂದಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ ಮಗಳು ಆರಾಧ್ಯಳೊಂದಿಗೆ ಕಾಣಿಸಿದ್ದರು.
ಅಭಿಷೇಕ್ ಬಚ್ಚನ್ ಒಟಿಟಿ ವೇದಿಕೆಗಾಗಿ ‘ಲೂಡೋ’ ಮತ್ತು ‘ದಿ ಬಿಗ್ ಬುಲ್’ ಪ್ರಾಜೆಕ್ಟ್ಗಳಲ್ಲಿ ಕಾಣಿಸಿಕೊಂಡಿದ್ದ ಬಳಿಕ, ಇದೀಗ ‘ಬಾಬ್ ಬಿಸ್ವಾಸ್’ ಮತ್ತು ‘ದಾಸ್ವಿ’ ಚಿತ್ರಗಳ ಶೂಟಿಂಗ್ನಲ್ಲಿ ತೊಡಗಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ