ನವ ದೆಹಲಿ (ಸೆಪ್ಟೆಂಬರ್ 11); ಪಿತ್ತ ಜನಕಾಂಗಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ಹರಿಯಾಣ ರಾಜ್ಯದ ಮಾಜಿ ಶಾಸಕ ಸಾಮಾಜಿಕ ಹೋರಾಟಗಾರ ಮತ್ತು ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 80 ವರ್ಷದ ಅಗ್ನಿವೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನವದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್‌ನಲ್ಲಿ ದಾಖಲಿಸಲಾಗಿತ್ತು. ಕಳೆದ ಮಂಗಳವಾರದಿಂದ ವೆಂಟಿಲೇಟರ್ ಸಹಾಯದಿಂದ ಕೃತಕ ಉಸಿರಾಟ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ, ಇಂದು ಸಂಜೆ ವೇಳೆಗೆ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮೃತಪಟ್ಟಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯರು ಮಾಹಿತಿ ನೀಡಿದ್ದಾರೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
The demise of Swami Agnivesh is a huge tragedy. A true warrior for humanity&tolerance. Among the bravest that I knew,willing to take huge risks for public good.Was brutalised in Jharkhand by a BJP/RSS lynch mob 2 yrs ago. Liver got damaged. RIP Agnivesh jihttps://t.co/SapzPnRznC
— Prashant Bhushan (@pbhushan1) September 11, 2020
ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಸಂತಾಪ ಸೂಚಿಸಿರುವ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್, "ಸ್ವಾಮಿ ಅಗ್ನಿವೇಶ್ ಅವರ ನಿಧನವು ಒಂದು ದೊಡ್ಡ ದುರಂತ. ಮಾನವೀಯತೆ ಮತ್ತು ಸಹಿಷ್ಣುತೆಯ ಪರವಾದ ನಿಜವಾದ ಯೋಧರಂತೆ ಅವರು ಕೆಲಸ ನಿರ್ವಹಿಸುತ್ತಿದ್ದರು. ನನಗೆ ತಿಳಿದಿರುವ ಧೈರ್ಯಶಾಲಿ ವ್ಯಕ್ತಿಗಳ ಪೈಕಿ ಅಗ್ನಿವೇಶ್ ಸಹ ಒಬ್ಬರು.ಸಾರ್ವಜನಿಕ ಒಳಿತಿಗಾಗಿ ಭಾರಿ ಅಪಾಯಗಳನ್ನು ತೆಗೆದುಕೊಳ್ಳಲು ಅವರು ಸಿದ್ದರಿದ್ದರು. ಜಾರ್ಖಂಡ್‌ನಲ್ಲಿ 2 ವರ್ಷಗಳ ಹಿಂದೆ ಬಿಜೆಪಿ, ಆರ್‌ಎಸ್‌ಎಸ್ ಜನರ ದಾಳಿಯಿಂದಾಗಿ ಅವರ ಯಕೃತ್ ಹಾನಿಗೊಳಗಾಗಿತ್ತು" ಎಂದು ವಿಷಾಧಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ