• Home
 • »
 • News
 • »
 • national-international
 • »
 • Yogi Aditynath| ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ, ಮಾಂಸ ಸಂಪೂರ್ಣ ನಿಷೇಧಿಸಿ ಆದೇಶಿಸಿದ ಯೋಗಿ ಸರ್ಕಾರ

Yogi Aditynath| ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ, ಮಾಂಸ ಸಂಪೂರ್ಣ ನಿಷೇಧಿಸಿ ಆದೇಶಿಸಿದ ಯೋಗಿ ಸರ್ಕಾರ

ಮಥುರಾದಲ್ಲಿ ಯೋಗಿ ಆದಿತ್ಯನಾಥ್.

ಮಥುರಾದಲ್ಲಿ ಯೋಗಿ ಆದಿತ್ಯನಾಥ್.

ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ತಮ್ಮ ವ್ಯಾಪಾರವನ್ನು ತೊರೆಯಬೇಕು. ಮಥುರಾದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಪ್ರಾಣಿಗಳ ಹಾಲನ್ನು ಉತ್ಪಾದಿಸಲಾಗುತ್ತದೆ. ಎಲ್ಲರೂ ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

 • Share this:

  ಮಥುರಾ (ಆಗಸ್ಟ್​ 31); ಉತ್ತರ ಪ್ರದೇಶದಲ್ಲಿರುವ ಮಥುರಾ ಪ್ರದೇಶವನ್ನು ಹಿಂದೂಗಳ ಪುಣ್ಯ ಕ್ಷೇತ್ರ ಎಂದು ಪರಿಗಣಿಸಲಾಗುತ್ತದೆ. ದ್ವಾಪರಯುಗದ ಅವತಾರಿ ಶ್ರೀ ಕೃಷ್ಣ ಹುಟ್ಟಿ ಬೆಳದ, ಮಹಾಭಾರತದ ಕುರುಕ್ಷೇತ್ರ ಯುದ್ಧಕ್ಕೆ ಕಾರಣವಾದ ಪೌರಾಣಿಕ ಸ್ಥಳ ಎಂದು ಹಿಂದೂಗಳಿಂದ  ನಂಬಲಾಗುತ್ತದೆ. ಹೀಗಾಗಿ ಈ ಕ್ಷೇತ್ರದಲ್ಲಿ ಈಗಲೂ ಪೂಜೆ ಪುನಸ್ಕಾರ ಮಾಡಲಾಗುತ್ತಿದೆ. ಹೀಗಾಗಿ ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಘೋಷಿಸಿದ್ದಾರೆ ಎಂದು ವರದಿಯಾಗಿದೆ. ಮಥುರಾದಲ್ಲಿ ನಡೆದ ಕೃಷ್ಣೋತ್ಸವ-2021 ಕಾರ್ಯಕ್ರಮದಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ತಿಳಿದುಬಂದಿದೆ.


  ಈ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌, "ಮದ್ಯ ಮಾಂಸ ನಿಷೇಧಕ್ಕಾಗಿ ಯೋಜನೆಗಳನ್ನು ರೂಪಿಸಲು ಮತ್ತು ಇಂತಹ ವ್ಯಾಪಾರಗಳಲ್ಲಿ ತೊಡಗಿರುವ ಜನರನ್ನು ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ" ಎಂದು ತಿಳಿಸಿದ್ದಾರೆ.


  "ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ತಮ್ಮ ವ್ಯಾಪಾರವನ್ನು ತೊರೆಯಬೇಕು. ಮಥುರಾದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಪ್ರಾಣಿಗಳ ಹಾಲನ್ನು ಉತ್ಪಾದಿಸಲಾಗುತ್ತದೆ. ಹೀಗಾಗಿ, ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸಲು ಎಲ್ಲರೂ ಹಾಲಿನ ಮಾರಾಟವನ್ನು ಕೈಗೊಳ್ಳಬಹುದು" ಎಂದು ಅವರು ಸಲಹೆ ನೀಡಿದ್ದಾರೆ.


  "ಯಮುನಾ ನದಿ ತೀರದಲ್ಲಿರುವ ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. ಇದಕ್ಕೆ ಯಾವುದೇ ಹಣದ ಕೊರತೆ ಇರುವುದಿಲ್ಲ. ನಾವು ಈ ಪ್ರದೇಶದ ಅಭಿವೃದ್ಧಿಗೆ ಆಧುನಿಕ ತಂತ್ರಜ್ಞಾನದೊಂದಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣವನ್ನು ನೋಡುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ. ಬಹಳ ಹಿಂದಿನಿಂದಲೂ ನಿರ್ಲಕ್ಷಿಸಲ್ಪಟ್ಟ ನಂಬಿಕೆಯ ಸ್ಥಳಗಳು ಈಗ ಪುನರುಜ್ಜೀವನಗೊಳ್ಳುತ್ತಿವೆ ಎಂದು ಆದಿತ್ಯನಾಥ್‌ ತಿಳಿಸಿದ್ದಾರೆ.


  ಇದನ್ನೂ ಓದಿ: Zomato| ಹೃತಿಕ್-ಕತ್ರಿನಾಗೆ ಖರ್ಚು ಮಾಡುವ ಬದಲು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜನರ ಟೀಕೆಗೆ ಜೊಮ್ಯಾಟೊ ಪ್ರತಿಕ್ರಿಯೆ


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published: