Rajnath Singh| ಅಫ್ಘನ್​ ಬಿಕ್ಕಟ್ಟು ಭಾರತದ ಎದುರು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ; ಸಚಿವ ರಾಜನಾಥ್ ಸಿಂಗ್

ಭಾರತೀಯರ ಭದ್ರತೆಯ ಜೊತೆಗೆ, ನಮ್ಮ ಸರ್ಕಾರವು ದೇಶ ವಿರೋಧಿ ಶಕ್ತಿಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಬಾರದು ಎಂದು ಬಯಸುತ್ತದೆ. ಅದು ಅಲ್ಲಿನ ಬೆಳವಣಿಗೆಯ ಲಾಭವನ್ನು ಪಡೆದುಕೊಳ್ಳುತ್ತದೆ ಎಂದು ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಸಚಿವ ರಾಜನಾಥ್ ಸಿಂಗ್.

ಸಚಿವ ರಾಜನಾಥ್ ಸಿಂಗ್.

 • Share this:
  ನವ ದೆಹಲಿ (ಆಗಸ್ಟ್​ 30); ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ತಾಲಿಬಾನ್ ವಿದ್ಯಾಮಾನಗಳು, ಬಿಕ್ಕಟ್ಟು ಮತ್ತು ಅಫ್ಘಾನಿಸ್ತಾನದಲ್ಲಿನ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಭಾರತದ ಎದುರು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರವಾಗಿದ್ದು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಮರ್ಥವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಲಾಭವನ್ನು ಪಡೆಯುವ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಯಾವುದೇ ದೇಶ ವಿರೋಧಿ ಶಕ್ತಿಗೆ ಅವಕಾಶ ನೀಡಬಾರದು ಎಂದೂ ಸಚಿವ ರಾಜನಾಥ್​ ಸಿಂಗ್ ಹೇಳಿದ್ದಾರೆ.

  ರಾಷ್ಟ್ರೀಯ ಭದ್ರತೆ ವಿಷಯದ ಕುರಿತು ಪಂಜಾಬ್ ವಿಶ್ವವಿದ್ಯಾಲಯ ಆಯೋಜಿಸಿದ್ದ ಮೂರನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಅಫ್ಘನ್ ಬಿಕ್ಕಟ್ಟಿನ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ನೆರೆಯ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದು ಭದ್ರತೆಯ ವಿಷಯದಲ್ಲಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ನಮ್ಮ ಸರ್ಕಾರ ಅಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದೆ" ಎಂದು ಅವರು ತಮ್ಮ ಭಾಷಣದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೇಳಿದ್ದಾರೆ.

  "ಭಾರತೀಯರ ಭದ್ರತೆಯ ಜೊತೆಗೆ, ನಮ್ಮ ಸರ್ಕಾರವು ದೇಶ ವಿರೋಧಿ ಶಕ್ತಿಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಬಾರದು ಎಂದು ಬಯಸುತ್ತದೆ. ಅದು ಅಲ್ಲಿನ ಬೆಳವಣಿಗೆಯ ಲಾಭವನ್ನು ಪಡೆದುಕೊಳ್ಳುತ್ತದೆ" ಎಂದು ಅವರು ತಿಳಿಸಿದ್ದಾರೆ.

  ಇದನ್ನೂ ಓದಿ: Explained| ನಟ ಲಿಯೋನಾರ್ಡೋ ಡಿಕಾಪ್ರಿಯೋಗೂ ತಾಲಿಬಾನ್​ಗೂ ಸಂಬಂಧವೇನು? ಈಗ ಆಫ್ಘನ್ ಕ್ಷೌರಿಕರು ಹೆದರುತ್ತಿರುವುದು ಏಕೆ?

  ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ರಾಜನಾಥ್‌ ಸಿಂಗ್ ಪ್ರತಿಪಾದಿಸಿದ್ದಾರೆ. ಎರಡು ದಶಕಗಳ ಯುದ್ಧದ ಬಳಿಕ ಅಮೆರಿಕಾವು ತನ್ನ ಸೈನ್ಯವನ್ನು ಹಿಂಪಡೆಯಲು ಶುರುಮಾಡಿದ ಎರಡೇ ವಾರದಲ್ಲಿ ತಾಲಿಬಾನ್ ಉಗ್ರವಾದಿಗಳ ಗುಂಪು ಅಫ್ಘಾನಿಸ್ತಾನದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಅಲ್ಲದೆ, ಸಂಪೂರ್ಣ ಅಫ್ಘನ್ ಅನ್ನು ಕೆಲವೇ ದಿನಗಳಲ್ಲಿ ವಶಪಡಿಸಿಕೊಂಡಿದೆ.  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: