ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಿಂದ ಹಿಂದೆ ಸರಿದ ಬಿಜೆಪಿ; ಶಿವಸೇನೆ ಅಂಗಳದಲ್ಲಿ ಚೆಂಡು

ಶನಿವಾರ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು. ಆದರೆ, ಸರ್ಕಾರ ರಚಿಸುವುದಿಲ್ಲ ಎಂದು ಬಿಜೆಪಿ ಹಿಂದೆ ಸರಿದಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಚುನಾವಣೆಯಲ್ಲಿ 2ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆಯ ನಾಯಕರನ್ನು ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನಿಸಿದ್ದಾರೆ.

Sushma Chakre | news18-kannada
Updated:November 10, 2019, 9:13 PM IST
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಿಂದ ಹಿಂದೆ ಸರಿದ ಬಿಜೆಪಿ; ಶಿವಸೇನೆ ಅಂಗಳದಲ್ಲಿ ಚೆಂಡು
ಸುದ್ದಿಗೋಷ್ಠಿ ನಡೆಸಿದ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ
  • Share this:
ಮುಂಬೈ (ನ. 10): ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಚಟುವಟಿಕೆಗಳು ಗರಿಗೆದರುತ್ತಿವೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ 15 ದಿನಗಳೇ ಕಳೆದರೂ ಇನ್ನೂ ಸರ್ಕಾರ ರಚನೆಯ ಅವಕಾಶ ಯಾರ ಪಾಲಾಗಿದೆ ಎಂಬ ಕುತೂಹಲ ಹಾಗೇ ಉಳಿದಿದೆ. ಇಲ್ಲಿನ ರಾಜ್ಯಪಾಲರು ಸರ್ಕಾರ ರಚಿಸಲು ಈ ಬಾರಿಯ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಗೆ ಆಹ್ವಾನ ನೀಡಿದ್ದರು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ತಮ್ಮ ಪಕ್ಷ ಸರ್ಕಾರ ರಚಿಸುವುದಿಲ್ಲ ಎಂದು ಹಿಂದೆ ಸರಿದಿದ್ದರು.

ಈ ಹಿನ್ನೆಲೆಯಲ್ಲಿ ಇದೀಗ ಶಿವಸೇನೆಗೆ ಸರ್ಕಾರ ರಚಿಸಲು ಆಹ್ವಾನ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ ರಚಿಸುವುದಾದರೆ ಯಾವುದೇ ಷರತ್ತುಗಳಿಲ್ಲದೆ ಬೆಂಬಲ ನೀಡುವುದಾಗಿ ಎನ್​ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಘೋಷಿಸಿದ್ದವು. ಆದರೆ, ಆ ಎರಡೂ ಪಕ್ಷಗಳ ಸಿದ್ಧಾಂತಗಳು ಮತ್ತು ಶಿವಸೇನೆಯ ಸಿದ್ಧಾಂತದಲ್ಲಿ ಭಾರೀ ವ್ಯತ್ಯಾಸವಿರುವುದರಿಂದ ಶಿವಸೇನೆ ಈ ಬಗ್ಗೆ ಇನ್ನೂ ಖಚಿತ ನಿರ್ಧಾರ ತಿಳಿಸಿಲ್ಲ.

ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟು: ಶಿವಸೇನೆ-ಬಿಜೆಪಿ ಜಟಾಪಟಿ: ಗರಿಗೆದರಿದ ರಾಜಕೀಯ ಚಟುವಟಿಕೆ

ನಿನ್ನೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ ಬಳಿಕ ತನ್ನ ನಿರ್ಧಾರ ಪ್ರಕಟಿಸಿರುವ ಬಿಜೆಪಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಮಹಾರಾಷ್ಟ್ರ ಚುನಾವಣೆಯಲ್ಲಿ 2ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆಯ ನಾಯಕ ಏಕಾಂತ್ ಶಿಂಧೆ ಅವರನ್ನು ರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ.

ಬಿಜೆಪಿ ತನ್ನ ನಿರ್ಧಾರವನ್ನು ತಿಳಿಸುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವುತ್, ಮಹಾರಾಷ್ಟ್ರದಲ್ಲಿ ಶಿವಸೇನೆಯಿಂದಲೇ ಮುಖ್ಯಮಂತ್ರಿ ಪದಗ್ರಹಣವಾಗಲಿದೆ ಎಂದು ಹೇಳಿದ್ದಾರೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನ. 11 ರಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಮಸೀದಿ ಬದಲು ಶಾಲೆ ನಿರ್ಮಿಸಿ; ಅಚ್ಚರಿಯ ಬೇಡಿಕೆಯಿಟ್ಟ ನಟ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್

ಅಕ್ಟೋಬರ್ 21ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಶಿವಸೇನೆ ಪಕ್ಷಗಳು 161 ಸ್ಥಾನಗಳನ್ನು ಗೆದ್ದುಕೊಂಡಿವೆ. ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದರೂ ಅಧಿಕಾರ ಹಂಚಿಕೆ ಕುರಿತು ಎರಡೂ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಇದುವರೆಗೂ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿ ಹುದ್ದೆ ನಮಗೆ ಕೊಡಲೇಬೇಕು ಎಂದು ಶಿವಸೇನೆ ಹಠ ಹಿಡಿದಿರುವುದು ಬಿಜೆಪಿ ಪಾಲಿಗೆ ಮುಳುವಾಗಿದೆ. ಶಿವಸೇನೆ ಪಟ್ಟು ಸಡಿಲಸದ ಪರಿಣಾಮ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗುತ್ತಿದೆ ಎನ್ನುವ ಸುದ್ದಿ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್ ತನ್ನ 34 ಶಾಸಕರನ್ನು ರಾಜಸ್ಥಾನದಲ್ಲಿಟ್ಟಿದೆ.
First published:November 10, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading