ನೀಟ್ ಬರುವುದಕ್ಕೂ ಮುಂಚೆ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದ ವಿದ್ಯಾರ್ಥಿಗಳಲ್ಲಿ ಶೇ.90 ಮಂದಿ ರಾಜ್ಯ ಪಠ್ಯಕ್ರಮವನ್ನು ಬೋಧಿಸುತ್ತಿದ್ದ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಅಥವಾ ಕಡಿಮೆ ವೆಚ್ಚದ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಾಗಿರುತ್ತಿದ್ದರು. ಆದರೆ, ನೀಟ್ ಬಂದ ಮೇಲೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯುವ ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ 2017ರಲ್ಲಿ 5 ವಿದ್ಯಾರ್ಥಿಗಳು, 2018ರಲ್ಲಿ 7 ಹಾಗೂ 2019ರಲ್ಲಿ ಒಬ್ಬರೂ ಇಲ್ಲ ಎಂದು ಸಿಪಿಐ (ಎಂ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಿಂದ ತಮಿಳುನಾಡಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿರುವುದು ಚಿಂತೆಗೀಡು ಮಾಡುವ ವಿಷಯವಾಗಿದ್ದು, ಈ ಸಮಸ್ಯೆ ಬಗೆಹರಿಸುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ ಎಂದು ಮದ್ರಾಸ್ ಹೈಕೋರ್ಟ್ ಮುಂದೆ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) - ಸಿಪಿಐ(ಎಂ) ಹೇಳಿಕೆ ಸಲ್ಲಿಸಿದೆ.