ಉತ್ತರಪ್ರದೇಶ ಮುಸ್ಲೀಂ ವೃದ್ಧನ ಹಲ್ಲೆ ಪ್ರಕರಣ; ಪೊಲೀಸರ ಪ್ರತಿಪಾದನೆ ಸುಳ್ಳು ಎಂದ ಕುಟುಂಬ

ನನ್ನ ತಂದೆ ತಾಯತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಪ್ಪಾಗಿ ಹೇಳಿದ್ದಾರೆ. ನಾವು ಬಡಗಿಗಳಾಗಿದ್ದು, ನಮ್ಮ ಕುಟುಂಬದಲ್ಲಿ ಯಾರೂ ತಾಯತದ ವ್ಯವಹಾರವನ್ನು ಮಾಡುವುದಿಲ್ಲ. ಪೊಲೀಸರು ಸಳ್ಳು ಹೇಳುತ್ತದ್ದಾರೆ ಎಂದು ವೃದ್ಧನ ಮಗ ಬಬ್ಲೂ ಸೈಫಿ ತಿಳಿಸಿದ್ದಾರೆ.

ಹಲ್ಲೆಗೊಳಗಾದ ವೃದ್ಧ.

ಹಲ್ಲೆಗೊಳಗಾದ ವೃದ್ಧ.

 • Share this:
  ಲಖನೌ (ಜೂನ್ 16); ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ಕೆಲವ ಪ್ರಾರ್ಥನೆ ಮುಗಿಸಿ ಬರುತ್ತಿದ್ದ ಮುಸ್ಲೀಂ ವ್ಯಕ್ತಿಯನ್ನು ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಥಳಿಸಿದ್ದರು. ಈ ಘಟನೆಯನ್ನು ಅನೇಕರು ಟೀಕಿಸಿದ್ದರು. ಆದರೆ, ಕೋಮು ಪ್ರಚೋದನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ  ಗಾಜಿಯಾ ಬಾದ್​ ಪೊಲೀಸರು ಕಾಂಗ್ರೆಸ್​ ನಾಯಕರು, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪತ್ರಕರ್ತರು ಹಾಗೂ ಟ್ವಿಟರ್‌ ಸೇರಿದಂರೆ ಒಟ್ಟು 9 ಹೆಸರುಗಳ ಮೇಲೆ ಎಫ್‌ಐಆರ್‌‌ ದಾಖಲಿಸಿದ್ದಾರೆ. ಅಲ್ಲದೆ, ಈ ಪ್ರಕರಣವೇ ಸುಳ್ಳು ಎಂದು ಪ್ರತಿಪಾದಿಸಲು ಮುಂದಾಗಿದ್ದಾರೆ. ಇದಾಗಿ ಕೆಲವೇ ಗಂಟೆಗಳ ಅಂತರದಲ್ಲಿ, ಪ್ರಕರಣವು ಮತ್ತೆ ಹೊಸ ತಿರುವು ಕಂಡಿದ್ದು, ಪೊಲೀಸರ ಪ್ರತಿಪಾದನೆಯನ್ನು ವೃದ್ಧನ ಕುಟುಂಬ ತಳ್ಳಿ ಹಾಕಿದೆ.

  ಜೂನ್​ 5ರಂದು ಅಬ್ದುಲ್​ ಸಮದ್​ ಎಂಬ ಹಿರಿಯ ವ್ಯಕ್ತಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದರು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಅವರ ಮೇಲೆ ಕೆಲ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಅವನ್ನು ಎಳೆದುಕೊಂಡ ಹತ್ತಿರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಕಿಡಿಗೇಡಿಗಳು ಅವರಿಗೆ ಜೈ ಶ್ರೀರಾಮ್​ , ವಂದೇ ಮಾತರಂ ಎಂದು ಘೋಷಣೆ ಕೂಗುತ್ತಾ ಹೊಡೆದಿದ್ದಾರೆ. ಅಲ್ಲದೇ ಮರದ ಕಟ್ಟಿಗೆಯಿಂದ ಮನಬಂದಂತೆ ಥಳಿಸಿದ್ದರು.ಅಷ್ಟೇ ಅಲ್ಲದೇ, ಆ ವ್ಯಕ್ತಿಯನ್ನು ಪಾಕಿಸ್ತಾನಿ ಗೂಢಚಾರಿ ಎಂದು ಆರೋಪಿಸಿದ್ದಾರೆ.

  ದಾಳಿಕೋರರ ಗುಂಪಿನಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಸಮದ್​​ ಅವರ ಗಡ್ಡ ಕತ್ತರಿಸುವ ಪ್ರಯತ್ನ ನಡೆಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಮದ್​, ತಮ್ಮನ್ನು ಬಿಟ್ಟು ಬಿಡುವಂತೆ ಯುವಕರಲ್ಲಿ ಪರಿಪರಿಯಾಗಿ ಬೇಡಿಕೊಂಡರೂ ಸಹ ಅವರನ್ನು ಹಿಂಸಿಸಲಾಗಿತ್ತು. ಈ ಎಲ್ಲಾ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿತ್ತು.

  ಘಟನೆಯ ನಂತರ ಅಳುತ್ತಲೇ ಪ್ರತಿಕ್ರಿಯಿಸಿದ್ದ ವೃದ್ಧ, "ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು.

  ಇದನ್ನೂ ಓದಿ: ಮುಸ್ಲೀಂ ವೃದ್ಧನ ಮೇಲೆ ಹಲ್ಲೆ ಪ್ರಕರಣ; ಪ್ರಶ್ನಿಸಿದ್ದ ಪತ್ರಕರ್ತರು, ಕಾಂಗ್ರೆಸ್ ನಾಯಕರು, ಟ್ವಿಟರ್​ ಮೇಲೆ ಕೇಸ್!

  ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

  ಆದರೆ, "ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ ಎಂದು ಪೊಲೀಸರು ಹೇಳಿದ್ದು, ಅಬ್ದುಲ್ ಸಮದ್ ತಾಯತ ವ್ಯಾಪಾರಿಯಾಗಿದ್ದು, ಅದನ್ನು ಕೊಂಡುಕೊಂಡವರು ಅದು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದವರಲ್ಲಿ ಹಿಂದೂ-ಮುಸ್ಲಿಂ ಎರಡೂ ಧರ್ಮಿಯರೂ ಇದ್ದು, ಮೂವರನ್ನು ಬಂಧಿಸಿದ್ದೇವೆ" ಎಂದು ಹೇಳಿದ್ದರು.

  ಇದನ್ನೂ ಓದಿ: ಬಿಜೆಪಿ ಕಚೇರಿಯಲ್ಲಿ ಟ್ರಬಲ್ ಶೂಟ್ ಸಭೆ ಆರಂಭ; ತಡವಾಗಿ ಬಂದು ಅಸಮಾಧಾನದ ಸಂದೇಶ ನೀಡಿದರಾ ಯೋಗೀಶ್ವರ್..?

  ಆದರೆ, ಇದೀಗ ಅಬ್ದುಲ್ ಸಮದ್ ಅವರ ಮಗ ಬಬ್ಲೂ ಸೈಫಿ ಪೊಲೀಸರ ಪ್ರತಿಪಾದನೆಯನ್ನು ನಿರಾಕರಿಸಿದ್ದು, "ನನ್ನ ತಂದೆ ತಾಯತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಪ್ಪಾಗಿ ಹೇಳಿದ್ದಾರೆ. ನಾವು ಬಡಗಿಗಳಾಗಿದ್ದು, ನಮ್ಮ ಕುಟುಂಬದಲ್ಲಿ ಯಾರೂ ತಾಯತದ ವ್ಯವಹಾರವನ್ನು ಮಾಡುವುದಿಲ್ಲ. ಪೊಲೀಸರು ಸಳ್ಳು ಹೇಳುತ್ತದ್ದಾರೆ. ಅವರು ತನಿಖೆ ನಡೆಸಿ ಅದನ್ನು ಸಾಬೀತುಪಡಿಸಲಿ" ಎಂದು ತಿಳಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:MAshok Kumar
  First published: