• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Cabinet Reshuffle: ಅಮಿತ್​ ಶಾ ಜೊತೆಗಿನ ಚರ್ಚೆ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟೇ

Cabinet Reshuffle: ಅಮಿತ್​ ಶಾ ಜೊತೆಗಿನ ಚರ್ಚೆ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟೇ

ಅಮಿತ್​ ಶಾ ಜೊತೆ ಸಿಎಂ ಚರ್ಚೆ

ಅಮಿತ್​ ಶಾ ಜೊತೆ ಸಿಎಂ ಚರ್ಚೆ

ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ರಾಜಕೀಯ ಸ್ಥಿತಿಗತಿಗಳು, ಸಚಿವ ಸಂಪುಟದ ಬಗ್ಗೆ ಚರ್ಚಿಸಲಾಗಿದೆ. ಸ್ಥಳಿಯ ಸಂಸ್ಥೆಗಳ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಣಾಮಗಳೇನು, ಚುನಾವಣಾ ಆಯೋಗದ ನಿರ್ಧಾರ, ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಾಗಿದೆ.

  • Share this:

ನವದೆಹಲಿ, ಮೇ 11: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕಸರತ್ತು (Cabinet Reshuffle) ಮತ್ತೊಮ್ಮೆ ಮುಂದುವರಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amith Sha) ಜೊತೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Chief Minister Basavaraja Bommai) ಸಮಾಲೋಚನೆ ನಡೆಸಿದರು. ಇದಾದ ಬಳಿಕ ಮಾತನಾಡಿದ ಸಿಎಂ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಎನೂ ಬೇಕಾದರೂ ಆಗಬಹುದು ಹೇಳಿದ್ದಾರೆ. ಈ ಮೂಲಕ ಸಂಪುಟ ಪುನರ್ ರಚನೆಯ ಅಸ್ಪಷ್ಟತೆಯನ್ನು ಸಿಎಂ ಬೊಮ್ಮಾಯಿ‌ ಸ್ವತಃ ಹೆಚ್ಚಿಸಿದ್ದಾರೆ.


ಸಿಎಂ ಬೊಮ್ಮಾಯಿ ಹೇಳಿಕೆ 


ನವದೆಹಲಿಯಲ್ಲಿ ಅಮಿತ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ‌ ಅವರು, ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ರಾಜಕೀಯ ಸ್ಥಿತಿಗತಿಗಳು, ಸಚಿವ ಸಂಪುಟದ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಣಾಮಗಳೇನು, ಚುನಾವಣಾ ಆಯೋಗದ ನಿರ್ಧಾರ, ಸಚಿವ ಸಂಪುಟದ ವಿಸ್ತರಣೆ  ಇವೆಲ್ಲವುಗಳ    ತೀರ್ಮಾನಗಳೆಲ್ಲವನ್ನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು.  ಬರುವ ಎರಡು ಮೂರು ದಿನಗಳ ರಾಜಕೀಯ ಬೆಳವಣಿಗೆಯ ಆಧಾರದ ಮೇಲೆ ನಿರ್ಣಯವನ್ನು ತಿಳಿಸುವುದಾಗಿ ಹೇಳಿದ್ದಾರೆ ಎಂದರು.


ಇದನ್ನೂ ಓದಿ: Lok Sabha Election: ಒಂದು ಕುಟುಂಬ, ಒಂದು ಟಿಕೆಟ್; ಮುಂಬರುವ ಚುನಾವಣೆ ಗೆಲ್ಲಲು ಭರ್ಜರಿ ಕಾರ್ಯತಂತ್ರ ಹೆಣೆದ ಕಾಂಗ್ರೆಸ್


ಮುಂಬರಲಿರುವ ರಾಜ್ಯ ಸಭಾ, ವಿಧಾನ ಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಸಚಿವ ಸಂಪುಟದ ಬಗ್ಗೆ   ಸುದೀರ್ಘವಾದ ಚರ್ಚೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ,  ಒಟ್ಟಾರೆ  ರಾಜಕೀಯ ಸ್ಥಿತಿಗತಿಗಳ ಆಧಾರದ ಮೇಲೆ ನಿರ್ಣಯಗಳು ಆಗುತ್ತವೆ.  ಸ್ಥಿತಿ ಗತಿಗಳನ್ನು ಅವರಿಗೆ ವಿವರಿಸಲಾಗಿದೆ.  ಮುಂದಿನ ಒಂದು ವಾರ ಬಹಳ ಮುಖ್ಯ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ದೊಡ್ಡ ಪ್ರಮಾಣದ ಚುನಾವಣೆ ಇರುವುದರಿಂದ ಅದರ ಪರಿಣಾಮಗಳೇನು ಎಂದು ಅಧ್ಯಯನ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ ಎಂದರು.


ಯಾವುದೇ ಹೆಸರುಗಳ ಬಗ್ಗೆ ಚರ್ಚೆಯಾಗಿಲ್ಲ
ಸಚಿವ ಸಂಪುಟ ವಿಸ್ತರಣೆಯ ತೀರ್ಮಾನವಾದ ಮೇಲೆ ಅದರ ಸ್ವರೂಪ ಗೊತ್ತಾಗಲಿದೆ. ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರುಗಳು ಚರ್ಚೆಯಾಗಿಲ್ಲ. ಹೆಸರುಗಳನ್ನು ತೀರ್ಮಾನ ಮಾಡುವ ಸಂದರ್ಭ ಬರಲಿಲ್ಲ.   ಒಟ್ಟಾರೆ ಸ್ಥಿತಿಗತಿಗಳು, ಅದರ ಆಧಾರದ ಮೇಲೆ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.


ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕಾರಿಣಿ ಸಮಿತಿ ಸಭೆಗೆ ಬಂದಾಗಲೂ ಜೆ.ಪಿ. ನಡ್ಡಾ ಅವರೊಂದಿಗೆ ಈ ಬಗ್ಗೆ ಚರ್ಚೆ ಮಾಡಿದ್ದೆವು.  ಅಮಿತ್ ಷಾ ಮತ್ತು ನಡ್ಡಾ ಅವರು ಸೇರಿ ಒಂದು ತೀರ್ಮಾನವನ್ನು ಮಾಡುತ್ತಾರೆ. ನಿನ್ನೆ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಇಂದು ಮಧ್ಯಾಹ್ನ ಚುನಾವಣಾ ಆಯೋಗ ತಮ್ಮ ಕಾನೂನು ಸಲಹೆಗಾರರೊಂದಿಗೆ ಮಾತನಾಡುವುದಾಗಿ  ತಿಳಿಸಿದ್ದಾರೆ. ಅವರು ಸರ್ಕಾರಕ್ಕೆ ಏನು ತಿಳಿಸುತ್ತಾರೊ ತೀರ್ಮಾನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.



Published by:Kavya V
First published: