ನವದೆಹಲಿ: ಕೇಂದ್ರ ಸರ್ಕಾರದ (Central Government) ಮಹತ್ವಾಕಾಂಕ್ಷಿ ‘ಅಗ್ನಿಪಥ್’ ಯೋಜನೆ (Agnipath Project) ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್ಗಡ್, ತೆಲಂಗಾಣ ಸೇರಿದಂತೆ ಹಲವೆಡೆ ಭಾರೀ ಪ್ರತಿಭಟನೆ (Protest) ನಡೆಯುತ್ತಿದೆ. ಬಿಹಾರದಲ್ಲಂತೂ (Bihar) ಅನೇಕ ರೈಲುಗಳು (Rail) ಬೆಂಕಿಗೆ (Fire) ಆಹುತಿಯಾಗಿದ್ದರೆ, ತೆಲಂಗಾಣದಲ್ಲಿ (Telangana) ಪ್ರತಿಭಟನಾಕಾರನೊಬ್ಬ ಪೊಲೀಸರ ಗುಂಡಿಗೆ (Bullet) ಪ್ರಾಣ ತೆತ್ತಿದ್ದಾನೆ (Death). ಇನ್ನು ಇಂದೂ ಕೂಡ ಹಲವೆಡೆ ಪ್ರತಿಭಟನೆ ಮುಂದುವರೆದಿದೆ. ಬಿಹಾರದಲ್ಲಿ ‘ಬಿಹಾರ ಬಂದ್’ಗೆ ಕರೆ ನೀಡಲಾಗಿದೆ. ಇವೆಲ್ಲವುಗಳ ನಡುವೆಯೇ ಕೇಂದ್ರ ಸರ್ಕಾರ ಅಗ್ನಿಪಥ್ನಲ್ಲಿ ತರಬೇತಿ (Training) ಪಡೆಯುವ ‘ಅಗ್ನಿವೀರ’ರಿಗೆ (Agniveer) ಗುಡ್ ನ್ಯೂಸ್ (Good News) ಕೊಟ್ಟಿದೆ.
ಅಗ್ನಿವೀರ್ರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ 'ಅಗ್ನಿವೀರ್'ಗಳಿಗೆ 10 ಪ್ರತಿಶತ ಮೀಸಲಾತಿಯನ್ನು ನೀಡಿ ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ. ಎರಡು ಅರೆಸೇನಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ನೇಮಕಾತಿಯಲ್ಲಿ ವಯಸ್ಸಿನ ಮಿತಿ ಸಡಿಲಿಕೆ
ಅಗ್ನಿವೀರ್ ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಈಗಾಗಲೇ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ಸೇನಾ ನೇಮಕಾತಿ ಯೋಜನೆಯ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ಏರಿಕೆ ಮಾಡಿ ಒಂದು ಬಾರಿ ಬದಲಾವಣೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿದೆ . ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: Explained: ಏನಿದು ಅಗ್ನಿಪಥ್ ಯೋಜನೆ? ಭಾರತದ ರಕ್ಷಣೆಯಲ್ಲಿ ಇದರ ಮಹತ್ವವೇನು?
ಅರೆಸೈನಿಕ ಪಡೆಗಳಲ್ಲಿ 73 ಸಾವಿರ ಹುದ್ದೆಗಳು ಖಾಲಿ!
ಪ್ರಸ್ತುತ ಅರೆಸೈನಿಕ ಪಡೆಗಳ ಐದು ವಿಭಾಗಗಳಲ್ಲಿ 73,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ - ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಶಾಸ್ತ್ರ ಸೀಮಾ ಬಾಲ್ (SSB), ಮತ್ತು ಕೇಂದ್ರ ಕೈಗಾರಿಕಾ ಭದ್ರತೆ ಫೋರ್ಸ್ (ಸಿಐಎಸ್ಎಫ್)ನಲ್ಲಿ ಒಟ್ಟು 73 ಸಾವಿರ ಹುದ್ದೆ ಖಾಲಿ ಇವೆ.
ಸಿಎಪಿಎಫ್, ಅಸ್ಸಾಂ ರೈಫಲ್ಸ್ನಲ್ಲಿ 72 ಸಾವಿರ ಹುದ್ದೆ ಖಾಲಿ
ಇನ್ನು ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ನಲ್ಲಿ 73,219 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶಗಳು ಸೂಚಿಸುತ್ತವೆ. ಅಲ್ಲದೆ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳಲ್ಲಿ 18,124 ಹುದ್ದೆಗಳು ಖಾಲಿ ಇವೆ ಅಂತ ಸರ್ಕಾರದ ಮೂಲಗಳು ತಿಳಿಸಿವೆ.
ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ ಬಂದ್
ಅಗ್ನಿಪಥ್ ವಿರೋಧಿಸಿ ಬಿಹಾರದ ವಿದ್ಯಾರ್ಥಿ ಸಂಘಟನೆಗಳು ಇಂದು ಬಿಹಾರ್ ಬಂದ್ಗೆ ಕರೆ ನೀಡಿವೆ. ಆಲ್ ಇಂಡಿಯಾ ಅಸೋಸಿಯೇಷನ್ ನೇತೃತ್ವದ ಸಂಸ್ಥೆಗಳು ಈ ಯೋಜನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೋರಿ, ಬಂದ್ಗೆ ಬೆಂಬಲ ನೀಡಿವೆ. ಇನ್ನು ಲಾಲೂ ಪ್ರಸಾದ್ ಯಾದವ್ ಅವರ ನೇತೃತ್ವದ್ದ ಆರ್ಜೆಡಿ ಸಹ ಬಿಹಾರ ಬಂದ್ಗೆ ಬೆಂಬಲ ನೀಡಿದೆ.
ಇದನ್ನೂ ಓದಿ: Agniveers In Karnataka Police: ಅಗ್ನಿಪಥ್ ಯೋಜನೆಯ ಅಗ್ನಿವೀರರಿಗೆ ಪೊಲೀಸ್ ನೇಮಕಾತಿಯಲ್ಲಿ ಆದ್ಯತೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಮೃತನ ಕುಟುಂಬಕ್ಕೆ ತೆಲಂಗಾಣ ಸರ್ಕಾರದಿಂದ ಪರಿಹಾರ
ಅಗ್ನಿಪಥ್ ವಿರೋಧಿ ಪ್ರತಿಭಟನೆ ವೇಳೆ ಪ್ರಾಣ ಕಳೆದುಕೊಂಡ ಪ್ರತಿಭಟನಾಕಾರನಿಗೆ ತೆಲಂಗಾಣ ಸರ್ಕಾರ ಪರಿಹಾರ ಘೋಷಿಸಿದೆ. ನಿನ್ನೆ ಸಿಕಂದರಾಬಾದ್ನಲ್ಲಿ ಹತ್ತೊಂಬತ್ತು ವರ್ಷದ ರಾಕೇಶ್ ಎಂಬಾತ ಮೃತಪಟ್ಟಿದ್ದ. ಇದೀಗ ಈತನ ಕುಟುಂಬಕ್ಕೆ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ 25 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ