ಅಹಮದ್ ಪಟೇಲ್ ನಿಧನ; ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಸೋನಿಯಾ ಗಾಂಧಿ ಸೇರಿ ಹಿರಿಯ ನಾಯಕರ ಸಂತಾಪ

Ahmed Patel Death: ಅಹಮದ್ ಪಟೇಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಶೋಕ್ ಗೆಹ್ಲೋಟ್, ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ.

ಅಹಮದ್ ಪಟೇಲ್

ಅಹಮದ್ ಪಟೇಲ್

 • Share this:
  ನವದೆಹಲಿ (ನ. 25): ಕಾಂಗ್ರೆಸ್​ನ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಅಹಮದ್ ಪಟೇಲ್ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಪ್ರಭಾವಿಯಾಗಿದ್ದ ಅಹಮದ್ ಪಟೇಲ್ ಕೊರೋನಾ ಪೀಡಿಯರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೋನಾ ಜತೆಗೆ ಇತರೆ ಆರೋಗ್ಯ ಸಮಸ್ಯೆಯೂ ಇತ್ತು. ಅಹಮದ್ ಪಟೇಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಶೋಕ್ ಗೆಹ್ಲೋಟ್, ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ.

  ಟ್ವೀಟ್ ಮೂಲಕ ಸಂತಾಪ‌ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಹಮದ್​ ಪಟೇಲ್ ಅವರ ನಿಧನದಿಂದ ಬಹಳ ಬೇಸರವಾಗಿದೆ. ಅವರು ತೀಕ್ಷ್ಣಮತಿಗಳಾಗಿದ್ದರು. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಸ್ಮರಣೀಯ ಎಂದಿದ್ದಾರೆ.  ಕರ್ನಾಟಕದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕೂಡ ಅಹಮದ್ ಪಟೇಲ್ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹಮದ್ ಪಟೇಲ್ ಅವರ ಸಾವಿನ ಸುದ್ದಿ ಕೇಳಿ ಬಹಳ ಬೇಸರವಾಯಿತು. ಅವರ ಕುಟುಂಬಕ್ಕೆ ಈ ಆಘಾತವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಓಂ ಶಾಂತಿ ಎಂದು ಅವರು ಟ್ವೀಟ್ ಮಾಡಿದ್ದಾರೆ.  ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕೂಡ ಅಹಮದ್ ಪಟೇಲ್ ಅವರ ಸಾವಿಗೆ ಸಂತಾಪ ಸೂಚಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಅವರ ಸಾವಿನ ಸುದ್ದಿ ಕೇಳಿ ನನಗೆ ಆಘಾತವಾಯಿತು. ಅವರ ನಿಧನದಿಂದ ನಮ್ಮ ದೇಶಕ್ಕೆ ಮತ್ತು ಕಾಂಗ್ರೆಸ್​ಗೆ ಬಹಳ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತು ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ಅಹಮದ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಕಂಬವಾಗಿದ್ದರು. ಅತ್ಯಂತ ಕಷ್ಟದ ದಿನದಲ್ಲಿ ಪಕ್ಷದೊಂದಿಗೆ ಗಟ್ಟಿಯಾಗಿ ನಿಂತಿದ್ದರು. ಅಹಮದ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಾಗಿದ್ದರು. ಇದು ಕಾಂಗ್ರೆಸ್ ಪಕ್ಷದ ಪಾಲಿಗೆ ಕರಾಳ ದಿನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  ಅಹಮದ್ ಪಟೇಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ, ಅಹ್ಮದ್ ಪಟೇಲ್ ಅವರು ಬುದ್ಧಿವಂತ ಮಾತ್ರ ಆಗಿರಲಿಲ್ಲ. ನಾನು‌ ಸದಾ ಅವರಿಂದ ಸಲಹೆಗಳನ್ನು ಪಡೆಯುತ್ತಿದ್ದೆ. ಸದಾ ನಮ್ಮೆಲ್ಲರ ಜೊತೆ ನಿಂತಿದ್ದ ನಿಷ್ಠಾವಂತರಾಗಿದ್ದರು. ಅಹಮದ್ ಪಟೇಲ್ ವಿಶ್ವಾಸಾರ್ಹ ವ್ಯಕ್ತಿಯಾಗಿದ್ದರು. ಅವರ ನಿಧನದಿಂದ ನಿರ್ವಾತ ಸ್ಥಿತಿ ಉಂಟಾಗಿದೆ. ಅಹಮದ್ ಪಟೇಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮೂಲಕ ನೋವು ತೋಡಿಕೊಂಡಿದ್ದಾರೆ.
  Published by:Sushma Chakre
  First published: