Mallikarjun Kharge: ಪಿಎಫ್‌ಐ ಜೊತೆ ಭಜರಂಗದಳ ಹೋಲಿಕೆ, ಮಲ್ಲಿಕಾರ್ಜುನ ಖರ್ಗೆ ಕೋರ್ಟ್‌ನಿಂದ ಸಮನ್ಸ್!

ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷರು

ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷರು

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಪಿಎಫ್‌ಐ ಸಂಘಟನೆಗೆ ಹೋಲಿಕೆ ಮಾಡಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕ ಮತ್ತು ಭಜರಂಗ ದಳ ಮಾನನಷ್ಟ ಆಗಿದೆ ಎಂದು 100 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿತ್ತು.

  • News18 Kannada
  • 5-MIN READ
  • Last Updated :
  • New Delhi, India
  • Share this:

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಮತ್ತು ಭಜರಂಗ ದಳ (Bhajarang dal) ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ (Defamation Case) ಪ್ರಕರಣಕ್ಕೆ ಸಂಬಂಧಿಸಿಂತೆ ಪಂಜಾಬ್‌ನ ಸಂಗ್ರೂರ್‌ ಕೋರ್ಟ್‌ (Sangrur Court) ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ.


ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಜರಂಗದಳವನ್ನು ನಿಷೇಧಿತ ಸಂಘಟನೆ ಪಿಎಫ್‌ಐ ಜೊತೆ ಹೋಲಿಕೆ ಮಾಡಿ ಭಜರಂಗದಳದ ಅನ್ಯಾಯ, ಅಕ್ರಮಗಳ ಬಗ್ಗೆ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆ ರಾಷ್ಟ್ರಾದ್ಯಂತ ವೈರಲ್ ಆಗಿ ಬಿಜೆಪಿ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ‘ಭಜರಂಗದಳ ಹಿಂದೂಸ್ತಾನ್’ ಸಂಘಟನೆಯ ಅಧ್ಯಕ್ಷ ಹಿತೇಶ್ ಭಾರದ್ವಾಜ್‌ ಎಂಬ ವ್ಯಕ್ತಿ ಪಂಜಾಬ್‌ನ ಸಂಗ್ರೂರ್‌ ನ್ಯಾಯಾಲಯದಲ್ಲಿ ದೂರು ದಾಖಲಿಸಿ 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ನೀಡುವಂತೆಯೂ ಮನವಿ ಮಾಡಿದ್ದರು.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಕೈಗೆತ್ತಿಕೊಂಡ ಸಂಗ್ರೂರ್ ನ್ಯಾಯಾಲಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ.


ಇದನ್ನೂ ಓದಿ: Ranjan Gogoi: ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ₹1 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು!


ಕಾಂಗ್ರೆಸ್‌ ಪ್ರಣಾಳಿಕೆಯಲ್ಲೇನಿದೆ?


ಚುನಾವಣೆಗೆ ಮುನ್ನ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ‘ ಮತೀಯ ದ್ವೇಷ ಬಿತ್ತುವ ಸಂಘಟನೆ ಹಾಗೂ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದಲ್ಲದೆ, ಅಂತಹ ಸಂಘಟನೆಗಳ ವಿರುದ್ಧ ನಿಷೇಧ ಸೇರಿದಂತೆ ಬಲವಾದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧರ್ಮ ಜಾತಿ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ವ್ಯಕ್ತಿ ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ’ ಎಂದು ಹೇಳಿತ್ತು.


ಅಲ್ಲದೇ, ‘ಸಂವಿಧಾನ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿಎಫ್‌ಐ ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಅಥವಾ ಇತರರು ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸಲ್ಲ. ಆ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧ ಸೇರಿದಂತೆ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿತ್ತು. ಈ ವಿಷಯ ಮಾಧ್ಯಮಗಳಲ್ಲಿ ಪ್ರಚಾರವಾದ ಬೆನ್ನಲ್ಲೇ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಕೂಡ ಚುನಾವಣಾ ಭಾಷಣಗಳಲ್ಲಿ ಭಜರಂಗದಳ ವಿಷಯ ಪ್ರಸ್ತಾಪಿಸಿ ಮತಬೇಟೆ ನಡೆಸಿದ್ದರು.


ಇದನ್ನೂ ಓದಿ: IPS Praveen Sood: ನೂತನ ಸಿಬಿಐ ನಿರ್ದೇಶಕರಾಗಿ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ನೇಮಕ


ಕಾಂಗ್ರೆಸ್‌ ಸರ್ಕಾರ ರಚನೆ ಕಗ್ಗಂಟು


ಸದ್ಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿಯೇ ಫುಲ್ ಬ್ಯುಸಿ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ನೂತನ ಸಿಎಂ ಆಯ್ಕೆ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿವರೆಗೆ ನೂತನ ಕಾಂಗ್ರೆಸ್‌ ಶಾಸಕರ ಒನ್ ಟು ಒನ್ ಮೀಟಿಂಗ್ ನಡೆದಿದ್ದರೂ ಕೂಡ ಇನ್ನೂ ಸಿಎಂ ಸ್ಥಾನಕ್ಕೆ ಹೆಸರು ಫೈನಲ್‌ ಮಾಡಲು ಸಾಧ್ಯ ಆಗಿರಲಿಲ್ಲ.



ಸದ್ಯ ಸಿಎಂ ಆಯ್ಕೆ ಚೆಂಡು ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಕಾಂಗ್ರೆಸ್‌ ಹೈಕಮಾಂಡ್ ಯಾರ ಹೆಸರನ್ನು ಫೈನಲ್ ಮಾಡುತ್ತೆ ಅನ್ನೋದೇ ರಾಷ್ಟ್ರಾದ್ಯಂತ ಭಾರೀ ಕುತೂಹಲ ಕೆರಳಿಸಿದೆ.

top videos
    First published: