Sonia Gandhi Hospitalized: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

news18-kannada
Updated:July 30, 2020, 8:47 PM IST
Sonia Gandhi Hospitalized: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಸೋನಿಯಾ ಗಾಂಧಿ
  • Share this:
ನವದೆಹಲಿ(ಜು.30): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್​ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇಂದು ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ  ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ಸಂಸ್ಥೆಗಳ ಪ್ರಕಾರ, ರೊಟೀನ್ ಚೆಕ್‌-ಅಪ್‌ಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳನ್ನು ಮಾಡಬೇಕಿದ್ದು, ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕಕ್ಕೆ ಕೊರೋನಾ ಶಾಕ್; ಇಂದು ಮೊದಲ ಬಾರಿಗೆ 6 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ, 83 ಸಾವು

ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗಲೂ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್​​ಗೂ ಸೋನಿಯಾ ಗಾಂಧಿ ಗೈರಾಗಿದ್ದರು.

ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಡಿ.ಎಸ್‌. ರಾಣಾ ಅವರು ಆ ವೇಳೆ ತಪಾಸಣೆ ನಡೆಸಿ ಸೋನಿಯಾ ಅವರು ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದಿದ್ದರು.
Published by: Latha CG
First published: July 30, 2020, 8:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading