ಅಯೋಧ್ಯೆ ವಿವಾದ: ಸುಪ್ರೀಂ ತೀರ್ಪು ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸಲು ಮುಂದಾದ ಮುಸ್ಲಿಂ ಮಂಡಳಿ

ಸುಪ್ರೀಂ ನೀಡಿರುವ ತೀರ್ಪು ವಿರುದ್ಧ ಹೋಗದಿರಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಇದರಿಂದ ನಮ್ಮ ಹೋರಾಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ- ಮುಸ್ಲಿಂ ಮಂಡಳಿ

news18-kannada
Updated:November 27, 2019, 4:27 PM IST
ಅಯೋಧ್ಯೆ ವಿವಾದ: ಸುಪ್ರೀಂ ತೀರ್ಪು ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸಲು ಮುಂದಾದ ಮುಸ್ಲಿಂ ಮಂಡಳಿ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ನ.27): ಶತಮಾನಗಳ ಹಿಂದಿನ ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂಕೋರ್ಟ್​​ ನೀಡಿರುವ ಐತಿಹಾಸಿಕ ತೀರ್ಪು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಮುಂದಾಗಿದೆ. ಸುಪ್ರೀಂ ತೀರ್ಪು ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಲು ಸುನ್ನಿ ವಕ್ಫ್ ಮಂಡಳಿ ನಿರಾಕರಿಸಿದ ಬೆನ್ನಲ್ಲೇ ಎಐಎಂಪಿಎಲ್‌ಬಿ ಈ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಸುಪ್ರೀಂಕೋರ್ಟ್​ ತೀರ್ಪಿನ ವಿರುದ್ಧವೇ ಕಾನೂನು ಸಮರ ನಡೆಸಲು ಸಿದ್ಧರಿದ್ದೇವೆ ಎಂದು ಎಐಎಂಪಿಎಲ್‌ಬಿ ಸದಸ್ಯರು ತಿಳಿಸಿದ್ಧಾರೆ.

ನಮ್ಮ ಸಾಂವಿಧಾನಿಕ ಹಕ್ಕಿಗಾಗಿ ಮತ್ತೊಮ್ಮೆ ಸುಪ್ರೀಂಕೋರ್ಟ್​​ ಮೊರೆ ಹೋಗಲಿದ್ದೇವೆ. ತನ್ನ ತೀರ್ಪು ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸಲಿದ್ದೇವೆ. ಡಿಸೆಂಬರ್ ಮೊದಲ ವಾರದಲ್ಲಿ ಸುಪ್ರೀಂ ನೀಡಿರುವ ತೀರ್ಪು ವಿರುದ್ಧ ಹೋಗದಿರಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಇದರಿಂದ ನಮ್ಮ ಹೋರಾಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗೆಯೇ ತಾನು ಈ ವಿಚಾರದಲ್ಲಿ ತನ್ನ ನಿಲುವು ಬದಲಿಸುವ ಮಾತೇ ಇಲ್ಲ ಎಂದು ಮುಸ್ಲಿಂ ಮಂಡಳಿ ಖಡಕ್ಕಾಗಿ ಹೇಳಿದೆ.

ಸುಪ್ರೀಂಕೋರ್ಟ್​ ಈಗಾಗಲೇ ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ವಿವಾದ ಕುರಿತಂತೆ ಐತಿಹಾಸಿಕ ತೀರ್ಪು ನೀಡಿದೆ. ವಿವಾದಿತ 2.77 ಎಕರೆ ಜಾಗವನ್ನು ಟ್ರಸ್ಟ್‌ಗೆ ನೀಡಿ ಸುಪ್ರೀಂ ಆದೇಶಿಸಿದೆ. ಹಾಗೆಯೇ ಇನ್ನು ಮೂರು ತಿಂಗಳಿನಲ್ಲಿ ಟ್ರಸ್ಟ್‌ ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸುಪ್ರೀಂಕೋರ್ಟ್​ ಆದೇಶದಂತೆಯೇ ಕೇಂದ್ರ ಸರ್ಕಾರ ಟ್ರಸ್ಟ್​​ ಪ್ರಕ್ರಿಯೆ ಆರಂಭಿಸಿದೆ. ಟ್ರಸ್ಟ್ ಕಾರ್ಯಸೂಚಿ ರೂಪಿಸಲೆಂದೇ ಅಧಿಕಾರಿಗಳ ತಂಡ ರಚನೆಯೂ ಮಾಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ದೇಶ ಮಾಡ ಹೊರಟ ಬಿಜೆಪಿಗೇ ಕಂಟಕ; ರಂಗು ಕಳೆದುಕೊಳ್ಳುತ್ತಿದೆಯಾ ಕೇಸರಿ?

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ ವಿವಾದಿತ ರಾಮ ಜನ್ಮಭೂಮಿ ಪ್ರಕರಣದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಶನಿವಾರ ತೀರ್ಪು ಪ್ರಕಟ ಮಾಡಿತ್ತು. ಎಲ್ಲ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್​ನ ಸಾಂವಿಧಾನಿಕ ಪೀಠ ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಆದೇಶ ಹೊರಡಿಸಿತ್ತು. ಮುಸ್ಲಿಂ ಸಮುದಾಯಕ್ಕೆ 5 ಎಕರೆ ಬದಲಿ ಜಾಗವನ್ನು ನೀಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು.

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ ವಿವಾದಿತ ರಾಮ ಜನ್ಮಭೂಮಿ ಪ್ರಕರಣದ ವಿಚಾರದಲ್ಲಿ ಸುಪ್ರೀಂಕೋರ್ಟ್​ ಶನಿವಾರ ತೀರ್ಪು ಪ್ರಕಟ ಮಾಡಿತ್ತು. ಎಲ್ಲ ಧರ್ಮವನ್ನೂ ಗೌರವಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್​ನ ಸಾಂವಿಧಾನಿಕ ಪೀಠ ಹಿಂದೂಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿ ಅಯೋಧ್ಯೆಯಲ್ಲಿ ಜಾಗವನ್ನು ನೀಡಿ ಆದೇಶ ಹೊರಡಿಸಿತ್ತು. ಮುಸ್ಲಿಂ ಸಮುದಾಯಕ್ಕೆ 5 ಎಕರೆ ಬದಲಿ ಜಾಗವನ್ನು ನೀಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು.

ರಾಮ ಜನ್ಮ ಭೂಮಿ ನ್ಯಾಯಶಾಸ್ತ್ರವಾಗಿ ಇಲ್ಲ, ಹಾಗೇ ಬಾಬ್ರಿ ಮಸೀದಿಯೂ ಖಾಲಿ ಜಾಗದಲ್ಲಿ ಕಟ್ಟಿಲ್ಲ. ಅಲ್ಲಿ ಈ ಹಿಂದೆ ಯಾವುದೋ ಕಟ್ಟಡ ಇತ್ತು ಎನ್ನುವುದಕ್ಕೆ ಸಾಕ್ಷಿಯಿದೆ. ಅಲ್ಲಿದ್ದ ಕಟ್ಟಡ ಮುಸ್ಲಿಮೇತರ ಕಟ್ಟಡ ಎಂಬುದನ್ನು ಪುರಾತತ್ವ ಇಲಾಖೆ ಸ್ಪಷ್ಟಪಡಿಸಿದೆ. 12ನೇ ಶತಮಾನದ ಕಟ್ಟಡ ಆಗಿದ್ರೂ ಅದು ದೇಗುಲ ಎಂದು ಹೇಳಿಲ್ಲ. ಹಿಂದೂಗಳ ಪ್ರಕಾರ ಆ ಜಾಗ ರಾಮನ ಜನ್ಮಭೂಮಿ. ಶ್ರೀರಾಮ ಇಲ್ಲೇ ಹುಟ್ಟಿದ್ದು ಎಂಬ ನಂಬಿಕೆ ಹಿಂದೂಗಳದ್ದು. ಹಿಂದೂಗಳ ನಂಬಿಕೆಯನ್ನೂ ನಾವು ತೆಗೆದು ಹಾಕಲು ಆಗಲ್ಲ ಎಂದು ಸುಪ್ರೀಂ ಆದೇಶದಲ್ಲಿ ತಿಳಿಸಿತು.ಕಟ್ಟಡದ ಮಧ್ಯಭಾಗದಲ್ಲಿ ಶ್ರೀರಾಮ ಹುಟ್ಟಿದ್ದು ಅನ್ನೋದು ವಾದ. ನಂಬಿಕೆ ಅನ್ನೋದು ಪಕ್ಕಾ ಎಂದಾಗ ಮಧ್ಯ ಪ್ರವೇಶ ಸರಿಯಲ್ಲ. ನಂಬಿಕೆಗಳನ್ನ ಕೋರ್ಟ್​ ಒಪ್ಪಬೇಕಾಗುತ್ತೆ. ಹಿಂದೂಗಳ ಪ್ರಕಾರ ಇದು ಶ್ರೀರಾಮನ ಜನ್ಮಭೂಮಿ. ಮುಸ್ಲೀಮರ ಪ್ರಕಾರ ಇದು ಐತಿಹಾಸಿಕ ಮಸೀದಿ ಕಟ್ಟಡ . ಯಾರ ನಂಬಿಕೆಗಳನ್ನ ಕೋರ್ಟ್​ ಪ್ರಶ್ನೆ ಮಾಡೋದಿಲ್ಲ ಎಂದ ಕೋರ್ಟ್​ ಕೇವಲ ನಂಬಿಕೆ ಆಧಾರದ ಮೇಲೆ ಭೂಹಕ್ಕು ಸ್ಥಾಪನೆ ಸಾಧ್ಯವಿಲ್ಲ ಎಂದೂ ಸ್ಪಷ್ಟವಾಗಿ ತಿಳಿಸಿತು.

ಇದನ್ನೂ ಓದಿ: ಕಾಂಗ್ರೆಸ್​ ಬಿಟ್ಟು ಕಮಲ ಸೇರಿದ್ದ ಕೆ.ಸಿ.ರಾಮಮೂರ್ತಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್​

ಏನಿದು ಪ್ರಕರಣ?: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಇದ್ದ ಜಾಗದ 2.77 ಎಕರೆ ವಿವಾದಿತ ಭೂಮಿ ಯಾರಿಗೆ ಸೇರಿದ್ದು ಎಂಬುದೇ ಈಗ ಈ ಪ್ರಕರಣದ ವಸ್ತುವಾಗಿದೆ. 1528 ಶ್ರೀರಾಮ ಹುಟ್ಟಿದ ಸ್ಥಳ ಎಂದು ನಂಬಲಾಗುವ ಅಯೋಧ್ಯೆಯಲ್ಲಿ ಬಾಬರ್‌ ಮಸೀದಿ ನಿರ್ಮಾಣ ಮಾಡಿದ್ದ. ರಾಮ ಮಂದಿರ ಕೆಡವಿ ದೇವಾಲಯ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ, ಬಾಬ್ರಿ ಮಸೀದಿ ಜಾಗ ತಮಗೆ ಸೇರಿದ್ದು ಎಂಬುದು ಸುನ್ನಿ ವಕ್ಫ್ ಮಂಡಳಿಯ ವಾದವಾಗಿತ್ತು. ಹಾಗೆಯೇ ನಿರ್ಮೋಹಿ ಅಖಾಡ ಕೂಡ ಇದು ತನಗೆ ಸೇರಿದ್ದೆಂದು ಹೇಳಿತ್ತು. 2010ರಲ್ಲಿ ಅಲಾಹಾಬಾದ್ ಉಚ್ಚ ನ್ಯಾಯಾಲಯವು ಈ ಮೂರೂ ಗುಂಪುಗಳಿಗೆ ವಿವಾದಿತ ಭೂಮಿಯನ್ನು ಸಮಾನವಾಗಿ ಹಂಚುವ ತೀರ್ಪು ನೀಡಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಹಲವು ಮೇಲ್ಮನವಿಗಳು ದಾಖಲಾಗಿದ್ದವು. ಈಗ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇದರ ವಿಚಾರಣೆ ನಡೆಸಿ, ಐತಿಹಾಸಿಕ ತೀರ್ಪು ನೀಡಿತ್ತು.
First published:November 27, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ