Air India Express Crash: ಕೋಯಿಕ್ಕೋಡ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ; ಸಾವಿನ ಸಂಖ್ಯೆ 17ಕ್ಕೆ ಏರಿಕೆ
Kozhikode Flight Crash: ದುಬೈನಿಂದ 180 ಮಂದಿ ಪ್ರಯಾಣಿಕರನ್ನು ಹೊತ್ತು ಬಂದ ಇಂಡಿಯನ್ ಏರ್ಲೈನ್ ಇಂದು ಸಂಜೆ ಕೇರಳದ ಕೋಯಿಕ್ಕೋಡ್ನ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ರನ್ವೇಯಿಂದ ಜಾರಿದೆ. ಈ ಅವಘಡದಲ್ಲಿ ಓರ್ವ ಪೈಲೆಟ್ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೇರಳದ ಕೋಯಿಕ್ಕೋಡ್ ವಿಮಾನ ನಿಲ್ದಾಣದ ರನ್ವೇನಲ್ಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಈಡಾಗಿದೆ. ಈ ವಿಮಾನದಲ್ಲಿ 180 ಮಂದಿ ಪ್ರಯಾಣಿಕರು ಇದ್ದರು. ಅವಘಡದಲ್ಲಿ ಇಬ್ಬರು ಪೈಲಟ್ಗಳು ಸೇರಿದಂತೆ 17 ಮಂದಿ ಮೃತಪಟ್ಟಿದ್ದಾರೆ.
ದುಬೈ- ಕೋಯಿಕ್ಕೋಡ್ ವಿಮಾನ X1344 ಬೋಯಿಂಗ್ 737 ವಿಮಾನದಲ್ಲಿ 174 ಮಂದಿ ಪ್ರಯಾಣಿಕರು ಇದ್ದರು. ಸಂಜೆ 7;41ರಲ್ಲಿ ಲ್ಯಾಂಡ್ ಆಗಿದ್ದು, ರನ್ವೇನಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ವಿಮಾನಯಾನ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಕೇರಳ ಪೊಲೀಸ್ ಅಧಿಕಾರಿಗಳ ಪ್ರಕಾರ, ಕನಿಷ್ಠ 35 ಮಂದಿ ಗಾಯಗೊಂಡಿದ್ದು, ಅವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಭಾರತದ ಉನ್ನತ ವಿಮಾನಯಾನ ಸಮಿತಿಯಾದ ಡಿಜಿಸಿಎ ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.
ದುಬೈನಿಂದ 180 ಮಂದಿ ಪ್ರಯಾಣಿಕರನ್ನು ಹೊತ್ತು ಬಂದ ಇಂಡಿಯನ್ ಏರ್ಲೈನ್ ಇಂದು ಸಂಜೆ ಕೇರಳದ ಕೋಯಿಕ್ಕೋಡ್ನ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ರನ್ವೇಯಿಂದ ಜಾರಿದೆ. ಈ ಅವಘಡದಲ್ಲಿ ಓರ್ವ ಪೈಲೆಟ್ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Published by:HR Ramesh
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ