HOME » NEWS » National-international » AIRPORTS AND GOVERNMENT BUILDINGS ON ALERT AFTER SUSPECTED IED BOMB BLAST NEAR DELHI ISRAEL EMBASSY SCT

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ; ವಿಮಾನ ನಿಲ್ದಾಣ, ಸರ್ಕಾರಿ ಕಟ್ಟಡಗಳಲ್ಲಿ ಹೈ ಅಲರ್ಟ್​

Delhi Bomb Blast: ದೆಹಲಿಯಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಉತ್ತರ ಭಾರತದ ಪ್ರಸಿದ್ಧ ಆಚರಣೆ ಮಹಾಕುಂಭ ಮೇಳಕ್ಕೆ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹಾಗೇ, ವಿಮಾನ ನಿಲ್ದಾಣಗಳು, ಸರ್ಕಾರಿ ಕಟ್ಟಡಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ.

Sushma Chakre | news18-kannada
Updated:January 30, 2021, 8:45 AM IST
ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ; ವಿಮಾನ ನಿಲ್ದಾಣ, ಸರ್ಕಾರಿ ಕಟ್ಟಡಗಳಲ್ಲಿ ಹೈ ಅಲರ್ಟ್​
ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಪೊಲೀಸ್ ಭದ್ರತೆ
  • Share this:
ನವದೆಹಲಿ (ಜ. 30): ರಾಷ್ಟ್ರ ರಾಜಧಾನಿ ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ನಿನ್ನೆ ಸಂಜೆ ಬಾಂಬ್ ಸ್ಫೋಟ ಸಂಭವಿಸಿದೆ. ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದರಿಂದ ಈ ಘಟನೆಯಲ್ಲಿ ಇದುವರೆಗೂ ಯಾರಿಗೂ ಗಾಯಗಳಾಗಿಲ್ಲ. ಹೈ ಸೆಕ್ಯುರಿಟಿ ಇರುವ ಪ್ರದೇಶದ ಬಳಿಯೇ ಈ ಸ್ಫೋಟ ಉಂಟಾಗಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ, ಎಲ್ಲ ವಿಮಾನ ನಿಲ್ದಾಣಗಳು, ಪ್ರಮುಖ ಕಟ್ಟಡಗಳು, ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ ಎಂದು ಸಿಐಎಸ್​ಎಫ್​ (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್​) ತಿಳಿಸಿದೆ. ಹಾಗೇ, ಮುಂಬೈನ ಕಾನ್ಸುಲೇಟ್ ಜನರಲ್ ಆಫ್ ಇಸ್ರೇಲ್ ಕಚೇರಿಗೆ ಸೆಕ್ಯುರಿಟಿಯನ್ನು ಹೆಚ್ಚಿಸಲಾಗಿದೆ.

ಇಸ್ರೇಲ್ ರಾಯಭಾರಿ ಕಚೇರಿಯಿಂದ ಕೇವಲ 2 ಕಿ.ಮೀ ದೂರದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಿದ್ದರು. ವಿವಿಐಪಿಗಳಿದ್ದ ಪ್ರದೇಶದಲ್ಲಿ ಹೈ ಸೆಕ್ಯುರಿಟಿ ನಡುವೆಯೂ ಬಾಂಬ್ ಸ್ಫೋಟ ಸಂಭವಿಸಿರುವುದರಿಂದ ಹೈ ಅಲರ್ಟ್​ ಘೋಷಿಸಲಾಗಿದೆ.
ಇಸ್ರೇಲ್ ರಾಯಭಾರಿ ಕಚೇರಿಯ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳು ಸುರಕ್ಷಿತರಾಗಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಇಲಾಖೆ ತಿಳಿಸಿದೆ. ಹಾಗೇ, ಇಸ್ರೇಲ್ ರಾಜತಾಂತ್ರಿಕ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಭಾರತ ಸರ್ಕಾರಕ್ಕೆ ಇಸ್ರೇಲ್ ಮನವಿ ಮಾಡಿದೆ. ಈ ಸ್ಫೋಟದಿಂದ ಮೂರು ಕಾರುಗಳ ಗಾಜುಗಳು ಚೂರಾಗಿದ್ದು, ಯಾರಿಗೂ ಗಾಯಗಳಾಗಿಲ್ಲ.ಇದನ್ನೂ ಓದಿ: Blast in Delhi: ದೆಹಲಿಯ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಬಾಂಬ್​ ಸ್ಫೋಟ

ದೆಹಲಿಯಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಉತ್ತರ ಭಾರತದ ಪ್ರಸಿದ್ಧ ಆಚರಣೆ ಮಹಾಕುಂಭ ಮೇಳಕ್ಕೆ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ಹಲವೆಡೆ ಬಿಗಿ ಭದ್ರತೆ ನೀಡಲು ನಿರ್ಧರಿಸಲಾಗಿದೆ. ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸುತ್ತಿದ್ದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Youtube Video

ನವದೆಹಲಿಯಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಜಿಂದಾಲ್ ಹೌಸ್ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ದೆಹಲಿ ವಿಶೇಷ ತನಿಖಾ ತಂಡದ ಪೊಲೀಸರು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆಯಿಂದ ವಿಮಾನ ನಿಲ್ದಾಣಗಳು, ಸರ್ಕಾರಿ ಕಟ್ಟಡಗಳು, ಪ್ರಮುಖ ಸ್ಮಾರಕ ಹಾಗೂ ಪ್ರವಾಸಿ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Published by: Sushma Chakre
First published: January 30, 2021, 8:45 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories