AAI Recruitment 2020: ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ವಿದ್ಯಾರ್ಹತೆ ಪಡೆದವರಿಗೆ ಅವಕಾಶ

ವಿದ್ಯಾರ್ಹತೆ: ಪದವಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

    ವಿದ್ಯಾರ್ಹತೆ:

    ಪದವಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ:

    ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000 ದಿಂದ 15,000ರೂ ವರೆಗೆ ವೇತನ ಸಿಗಲಿದೆ.

    ವಯೋಮಿತಿ:

    ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ಆಯ್ಕೆ ಪ್ರಕ್ರಿಯೆ:

    ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    ಸಾಮಾನ್ಯ ಅಭ್ಯರ್ಥಿಗಳು 1000ರೂ, ಪ.ಜಾ-ಪ.ಪಂ ಅಭ್ಯರ್ಥಿಗಳು 170 ರೂವನ್ನು ಡಿಡಿ ಮೂಲಕ ಪಾವತಿಸಬೇಕು.

    ಅರ್ಜಿ ಸಲ್ಲಿಸುವುದು ಹೇಗೆ?:

    ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.aai.aero/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
    First published: