Mob Lynching| ರಾಜಸ್ಥಾನ; ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮತ್ತು ಬಾಲಕನ ಮೇಲೆ ತೀವ್ರ ಹಲ್ಲೆ, 5 ಜನರ ಬಂಧನ

ರಾಜಸ್ಥಾನದ ಅಜ್ಮೀರ್‌ನಲ್ಲಿ ಐದು ಜನರ ಗುಂಪೊಂದು ಮುಸ್ಲಿಂ ವ್ಯಕ್ತಿ ಹಾಗೂ ಬಾಲಕನನ್ನು ತೀವ್ರವಾಗಿ ಥಳಿಸಿ ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ.

ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ.

ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ.

 • Share this:
  ಅಜ್ಮೀರ್​ (ಆಗಸ್ಟ್​ 24): ದೇಶದಲ್ಲಿ ಮುಸ್ಲಿಂ ಸಮುದಾಯದವರ ಮೇಲಿನ ಹಲ್ಲೆ ಪ್ರಕರಣಗಳು ಮತ್ತೆ ಅಧಿಕವಾಗುತ್ತಿದೆ. ಈ ಹಿಂದೆ ಉತ್ತರಪ್ರದೇಶದಲ್ಲಿ (Uttara Pradesh) ಮುಸ್ಲಿಂ ವ್ಯಕ್ತಿಯನ್ನು ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಕೆಲವರು ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ವಿವಾದವನ್ನು ಎಬ್ಬಿಸಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ರಾಜಸ್ಥಾನದ (Rajastan) ಅಜ್ಮೀರ್​ನಲ್ಲಿ ನಡೆದಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ಐದು ಜನರ ಗುಂಪೊಂದು ಮುಸ್ಲಿಂ ವ್ಯಕ್ತಿ ಹಾಗೂ ಬಾಲಕನನ್ನು ತೀವ್ರವಾಗಿ ಥಳಿಸಿ (Mob Lynching) ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯನ್ನು ಥಳಿಸಿ ಆತನ ಕುಟುಂಬದವರನ್ನು ನಿಂದಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದೆ. ಆದರೆ, ಬಂಧನಕ್ಕೆ ಒಳಗಾದ ಒಂದೇ ದಿನದಲ್ಲಿ ಎಲ್ಲಾ ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

  ಈ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಪ್ರಕರಣ ದಾಖಲಿಸಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತ್ ಶರ್ಮಾ (40), ಸುರೇಂದ್ರ (32), ತೇಜಪಾಲ್ (27), ರೋಹಿತ್ ಶರ್ಮಾ(32), ಮತ್ತು ಶೈಲೇಂದ್ರ (31) ಎಂಬ ಐದು ಮಂದಿ ಆರೋಪಿಗಳನ್ನು ಸೆಕ್ಷನ್ 151 ಸಿಆರ್‌ಪಿಸಿ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಆರೋಪಿಗಳು ಮುಸ್ಲಿಂ ವ್ಯಕ್ತಿಗೆ, "ನೀವು ಉತ್ತರ ಪ್ರದೇಶದಿಂದ ಏಕೆ ಬಂದಿದ್ದೀರಿ? ನೀವು ಚಿನ್ನದ ಆಭರಣಗಳನ್ನು ಕದ್ದಿದ್ದಿರಿ. ನಿಮ್ಮದು ಒಂದು ಗ್ಯಾಂಗ್ ಇದೆ. ನೀವು ಒಂದು ಕೆಲಸ ಮಾಡಿ. ಪಾಕಿಸ್ತಾನಕ್ಕೆ ಹೋಗಿ" ಎಂದು ಭಿಕ್ಷೆ ಬೇಡುತ್ತಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ವೀಡಿಯೊದಲ್ಲಿ, ಒಬ್ಬ ಆರೋಪಿಯು ಸಂತ್ರಸ್ತೆಯ ಜೊತೆಗಿದ್ದ ಹುಡುಗನ ತಲೆಗೆ ಕಾಲಿ ನಿಂದ ಒದೆಯುವುದನ್ನು ಸಹ ಕಾಣಬಹುದು.

  ಇದನ್ನೂ ಓದಿ: Afghanistan Crisis| ಅಫ್ಘನ್​ನಲ್ಲಿ ಹಣಕಾಸಿನ ಕೊರತೆ; 100 ಬಿಲಿಯನ್ ನೋಟು ಮುದ್ರಣಕ್ಕೆ ಮುಂದಾದ ತಾಲಿಬಾನ್

  "ಆಗಸ್ಟ್ 20 ರಂದು (ಶುಕ್ರವಾರ) ಚಿತ್ರೀಕರಿಸಲಾದ ವಿಡಿಯೋದಲ್ಲಿ ಭಿಕ್ಷುಕರನ್ನು ಕೆಲವು ವ್ಯಕ್ತಿಗಳು ಥಳಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಾಗದಿದ್ದರೂ, ನಾವು ಘಟನೆಯನ್ನು ಗಮನಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದರು.

  "ತನಿಖೆಯ ಸಮಯದಲ್ಲಿ, ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್‌ನ ಸದಸ್ಯ ಎನ್ನಲಾಗಿರುವ ಲಲಿತ್ ಶರ್ಮಾ, ಇತರ ನಾಲ್ಕು ಜನರೊಂದಿಗೆ ಭಿಕ್ಷುಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ನಮಗೆ ತಿಳಿಯಿತು. ಆತನನ್ನು ಆಗಸ್ಟ್ 20 ರಂದು ಬಂಧಿಸಲಾಯಿತು. ಮರುದಿನ ಇತರ ನಾಲ್ವರನ್ನು ಬಂಧಿಸಲಾಯಿತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು" ಎಂದಿದ್ದಾರೆ.

  ಇದನ್ನೂ ಓದಿ: Drugs Case| ಡ್ರಗ್ಸ್​ ಪ್ರಕರಣದ ಆರೋಪಿಗಳು ರಂಗೋಲಿ ಕೆಳಗೆ ನುಸುಳುವ ಕೆಲಸ ಮಾಡುತ್ತಿದ್ದಾರೆ; ಸಚಿವ ಅರಗ ಜ್ಞಾನೇಂದ್ರ ಕಿಡಿ

  "ಸಂತ್ರಸ್ತ ವ್ಯಕ್ತಿ ಕೆಲವು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರಿಂದ ಆ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದೇವೆ. ಗುರುತು ಸಿಗದಿರಲು ಅವರು ಭಿಕ್ಷೆ ಬೇಡುತ್ತಿದ್ದರು" ಎಂದು ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಬಂಧನಕ್ಕೆ ಒಳಗಾದ ಒಂದೇ ದಿನದಲ್ಲಿ ಎಲ್ಲಾ ಐವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: