HOME » NEWS » National-international » ALL 77 BJP MLAS IN BENGAL TO HAVE CENTRAL SECURITY COVER MAK

West Bengal: ಪಶ್ಚಿಮ ಬಂಗಾಳದ 77 ಬಿಜೆಪಿ ಶಾಸಕರಿಗೆ ಕೇಂದ್ರ ಸರ್ಕಾರದಿಂದ ಕೇಂದ್ರ ಭದ್ರತಾ ಪಡೆ ರಕ್ಷಣೆ!

ಕೇಂದ್ರೀಯ ಭದ್ರತಾ ಸಂಸ್ಥೆಗಳು ಸಿದ್ಧಪಡಿಸಿದ ವರದಿ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಚುನಾವಣೆ ನಂತರದ ಹಿಂಸಾಚಾರದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಬಿಜೆಪಿ ಶಾಸಕರಿಗೆ ರಕ್ಷಣೆ ನೀಡಲು ಅನುಮೋದನೆ ನೀಡಿದೆ ಎಂದು ತಿಳಿಸಲಾಗಿದೆ.

news18-kannada
Updated:May 11, 2021, 3:04 PM IST
West Bengal: ಪಶ್ಚಿಮ ಬಂಗಾಳದ 77 ಬಿಜೆಪಿ ಶಾಸಕರಿಗೆ ಕೇಂದ್ರ ಸರ್ಕಾರದಿಂದ ಕೇಂದ್ರ ಭದ್ರತಾ ಪಡೆ ರಕ್ಷಣೆ!
ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು.
  • Share this:
ಕೋಲ್ಕತ್ತಾ (ಮೇ 11); ಪಶ್ಚಿಮ ಬಂಗಾಳದ ಜನ ಟಿಎಂಸಿ ಪಕ್ಷಕ್ಕೆ ಮೂರನೇ ಬಾರಿ ಬಹುಮತ ನೀಡಿದೆ. ಮಮತಾ ಬ್ಯಾನರ್ಜಿ ಮತ್ತೊಂದು ಅವಧಿಗೆ ಸಿಎಂ ಆಗಿ ಆಯ್ಕೆಯಾಗಿದ್ದರೆ, ಸೋಮವಾರ 43 ಜನ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೆ, ಇದೇ ಮೊದಲ ಬಾರಿಗೆ ಬಂಗಾಳದಲ್ಲಿ ಬಿಜೆಪಿ 77 ಸ್ಥಾನಗಳಲ್ಲಿ ಗೆದ್ದಿದ್ದು, ಮಮತಾ ಅವರ ಒಂದು ಕಾಲದ ಆಪ್ತ ಸುವೆಂಧು ಅಧಿಕಾರಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಅವಿರೋಧ ಆಯ್ಕೆ ಮಾಡಲಾಗಿದೆ. ಆದರೆ, ಈ ನಡುವೆ ಬಂಗಾಳದಲ್ಲಿ ಹೊಸದಾಗಿ ಚುನಾಯಿತರಾಗಿರುವ 77 ಬಿಜೆಪಿ ಶಾಸಕರಿಗೆ ಕೇಂದ್ರೀಯ ಭದ್ರತಾ ಪಡೆಗಳ ರಕ್ಷಣೆಯನ್ನು ಒದಗಿಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹೊಸದಾಗಿ ಚುನಾಯಿತರಾದ 77 ಬಿಜೆಪಿ ಶಾಸಕರಿಗೆ CISF ಮತ್ತು CRPF ಸಶಸ್ತ್ರ ಕಮಾಂಡೋಗಳು ಭದ್ರತೆ ನೀಡಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಕೇಂದ್ರೀಯ ಭದ್ರತಾ ಸಂಸ್ಥೆಗಳು ಸಿದ್ಧಪಡಿಸಿದ ವರದಿ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಚುನಾವಣೆ ನಂತರದ ಹಿಂಸಾಚಾರದ ಹಿನ್ನೆಲೆಯಲ್ಲಿ ಕೇಂದ್ರ ಸಚಿವಾಲಯವು ರಾಜ್ಯಕ್ಕೆ ಕಳುಹಿಸಿದ ಉನ್ನತ ಮಟ್ಟದ ಅಧಿಕಾರಿಗಳ ವರದಿಯ ನಂತರ ಕೇಂದ್ರ ಗೃಹ ಸಚಿವಾಲಯ ಈ ಶಾಸಕರಿಗೆ ರಕ್ಷಣೆ ನೀಡಲು ಅನುಮೋದನೆ ನೀಡಿದೆ ಎಂದು ತಿಳಿಸಲಾಗಿದೆ.

ಸಚಿವಾಲಯದ ಹೊಸ ಆದೇಶದ ಪ್ರಕಾರ ಅರವತ್ತೊಂದು ಶಾಸಕರಿಗೆ ಅತ್ಯಂತ ಕಡಿಮೆಯ ‘X’ ಕೆಟಗರಿಯ ಭದ್ರತೆ ನೀಡಲಾಗುವುದು. ಕಮಾಂಡೋಗಳ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಯ ಭದ್ರತೆಗೆ ಒಳಪಡಿಸಲಾಗುವುದು ಎಂದು ವರದಿ ಹೇಳಿದೆ.

ಉಳಿದವರಿಗೆ ಕೇಂದ್ರ ಭದ್ರತಾ ವ್ಯಾಪ್ತಿ ಅಥವಾ ಮುಂದಿನ ಉನ್ನತ ವರ್ಗ ‘Y’ ಕೆಟಗರಿ ಅಡಿಯಲ್ಲಿ ಭದ್ರತೆ ಒದಗಿಸಲಾಗುತ್ತದೆ. ಈಗಾಗಲೇ ಪ್ರತಿಪಕ್ಷದ ನಾಯಕ ಸುವೆಂಧು ಅಧಿಕಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ ‘Z’ ವಿಭಾಗದಲ್ಲಿ ಭದ್ರತೆ ನೀಡಲಾಗಿದೆ.

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಸ್ಥಾನಗಳಲ್ಲಿ ಬಹುಮತ ಪಡೆದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ರಚಿಸಿದೆ. 77 ಸ್ಥಾನಗಳನ್ನು ಗೆದ್ದ ಬಿಜೆಪಿ ರಾಜ್ಯದ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಮಮತಾ ಬ್ಯಾನರ್ಜಿ ಸಚಿವ ಸಂಪುಟ:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ನಡೆದ ಸರಳ ಸಮಾರಂಭದಲ್ಲಿ ಸೋಮವಾರ ನೂತನ ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 19 ರಾಜ್ಯ ಸಚಿವರು ಸೇರಿದಂತೆ 43 ಟಿಎಂಸಿ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ ಭವನದಲ್ಲಿ ರಾಜ್ಯಪಾಲ ಗಗ್ದೀಪ್ ಧಂಕರ್ ಪ್ರಮಾಣ ವಚನ ಬೋಧಿಸಿದ್ದಾರೆ ಎಂದು ತಿಳಿದುಬಂದಿದೆ.ಪ್ರಮಾಣವಚನ ಸಮಾರಂಭವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ನಡೆಸಲಾಯಿತು. ಅಲ್ಲದೆ, ಕೋವಿಡ್​ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಚರ್ಚಿಸಲು ಸಿಎಂ ಮಮತಾ ಬ್ಯಾನರ್ಜಿ ಇಂದೇ ಮೊದಲ ಕ್ಯಾಬಿನೆಟ್ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಚಂದ್ರನ ಅಂಗಳಕ್ಕೆ ವಸ್ತುವೊಂದನ್ನು ಕಳುಹಿಸಿದ ವಿಶ್ವದ ಮೊದಲ ಬಾಲಕಿ; ಇಂಗ್ಲೆಂಡ್ ಪುಟಾಣಿಯ ಅದ್ಭುತ ಸಾಧನೆ

ಪಕ್ಷದ ಮುಖಂಡರಾದ ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ, ಫಿರ್ಹಾದ್ ಹಕೀಮ್, ಜ್ಯೋತಿ ಪ್ರಿಯಾ ಮಲ್ಲಿಕ್, ಮೊಲಾಯ್ ಘಟಕ್, ಅರೂಪ್ ಬಿಸ್ವಾಸ್, ಡಾ.ಶಶಿ ಪಂಜಾ ಮತ್ತು ಜಾವೇದ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಏತನ್ಮಧ್ಯೆ, ಮಾಜಿ ಐಪಿಎಸ್ ಅಧಿಕಾರಿ ಹುಮಾಯೂನ್ ಕಬೀರ್, ಬಂಗಾಳದ ಮಾಜಿ ರಣಜಿ ನಾಯಕ ಮನೋಜ್ ತಿವಾರಿ ಮತ್ತು ಸಿಯುಲಿ ಸಾಹ ಸೇರಿದಂತೆ 15 ಹೊಸ ಮುಖಗಳನ್ನು ರಾಜ್ಯ ಸಂಪುಟದಲ್ಲಿ ಸೇರಿಸಲಾಗಿದೆ.
Youtube Video

ಮೇ 5 ರಂದು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ರಾಜ್ಯಪಾಲ ಜಗದೀಪ್ ಧಂಕರ್ ಪ್ರಮಾಣವಚನ ಬೋಧಿಸಿದರು. ಮಾಜಿ ಹಣಕಾಸು ಸಚಿವ ಅಮಿತ್ ಮಿತ್ರಾ ಅವರು ಅನಾರೋಗ್ಯದ ಕಾರಣ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಹ ಅವರಿಗೆ ಕ್ಯಾಬಿನೆಟ್ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಟಿಎಂಸಿ ಮುಖ್ಯಸ್ಥರು ಮಿತ್ರಾ ಅವರನ್ನು ಹಣಕಾಸು ಇಲಾಖೆಯ ಚುಕ್ಕಾಣಿ ಹಿಡಿಯಲು ಬಯಸುತ್ತಾರೆ ಮತ್ತು ಉಪಚುನಾವಣೆಯ ಮೂಲಕ ಅವರನ್ನು ವಿಧಾನಸಭೆಯ ಸದಸ್ಯರನ್ನಾಗಿ ಮಾಡುವ ಯೋಜನೆಯನ್ನು ಹೊಂದಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.
Published by: MAshok Kumar
First published: May 11, 2021, 3:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories