allahabad high court: ಗೋವು ಭಾರತದ ಸಂಸ್ಕೃತಿಯ ಭಾಗ, ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು; ಅಲಹಾಬಾದ್ ಹೈಕೋರ್ಟ್

ಗೋವುಗಳನ್ನು ಸಂರಕ್ಷಣೆ ಮಾಡಬೇಕಾದವರು ಅದನ್ನು ಮಾಡುತ್ತಿಲ್ಲ. ಅದೇ ರೀತಿ ಗೋವುಗಳ ಸಂರಕ್ಷಣೆ ಹೆಸರಿನಲ್ಲಿ ಖಾಸಗಿ ಗೋಶಾಲೆಗಳು ಸಾರ್ವಜನಿಕರಿಂದ ದೇಣಿಗೆ ಮತ್ತು ಸರ್ಕಾರದಿಂದ ಸಹಾಯ ಪಡೆದು ಕೆಲವರು ತಮ್ಮ ಹಿತಾಸಕ್ತಿಗೆ ಅದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಲಕ್ನೋ: (ಉತ್ತರ ಪ್ರದೇಶ): (Uttar Pradesh) ಗೋವಧೆ ನಿಯಂತ್ರಣ ಕಾಯಿದೆ ಅಡಿ ಬಂಧಿತನಾಗಿರುವ ಆರೋಪಿ ಜಾವೇದ್‌ಗೆ ಬುಧವಾರ ಜಾಮೀನು ನಿರಾಕರಿಸಿರುವ ಅಲಾಹಾಬಾದ್‌ ಹೈಕೋರ್ಟ್‌ (Allahabad High Court), ಗೋವು (Cow)ಭಾರತದ ಸಂಸ್ಕೃತಿಯ ಭಾಗವಾಗಿದೆ. ಅದನ್ನು ರಾಷ್ಟ್ರೀಯ ಪ್ರಾಣಿ (National Animal) ಎಂದು ಘೋಷಿಸಬೇಕು ಎಂದು ಹೇಳಿದೆ. ಗೋವಿಗೆ ಮೂಲಭೂತ ಹಕ್ಕು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ಮಸೂದೆ ಮಂಡಿಸಬೇಕು ಎಂದಿರುವ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ನೇತೃತ್ವದ ಏಕಸದಸ್ಯ ಪೀಠವು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು. ಗೋವಿಗೆ ಸಮಸ್ಯೆ ಉಂಟು ಮಾಡುವವರಿಗೆ ಶಿಕ್ಷೆ ವಿಧಿಸುವ ಸಂಬಂಧ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದಿದೆ.

    “ಗೋ ಸಂರಕ್ಷಣೆ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಗೋವು ಭಾರತದ ಸಂಸ್ಕೃತಿಯಾಗಿದ್ದು, ಧರ್ಮ ಮೀರಿ ದೇಶದಲ್ಲಿ ವಾಸಿಸುತ್ತಿರುವ ಎಲ್ಲರೂ ಸಂಸ್ಕೃತಿ ಉಳಿಸುವ ಕೆಲಸ ಮಾಡಬೇಕು. ಗೋವಿಗೆ ಒಳಿತಾದಾಗ ಮಾತ್ರ ದೇಶಕ್ಕೆ ಒಳಿತಾಗಲಿದೆ” ಎಂದು ಜಾಮೀನು ನಿರಾಕರಣೆ ಆದೇಶದಲ್ಲಿ ನ್ಯಾಯಮೂರ್ತಿ ಹೇಳಿದ್ದಾರೆ. ಗೋ ವಧೆ ನಿಯಂತ್ರಣ ಕಾಯಿದೆಯ ಸೆಕ್ಷನ್‌ 3, 5 ಮತ್ತು 8ರ ಅಡಿ ಆರೋಪಿಯ ವಿರುದ್ಧ ದೂರು ದಾಖಲಿಸಲಾಗಿದೆ.

    ವಿಭಿನ್ನ ಧರ್ಮಕ್ಕೆ ಸೇರಿದ ಎಲ್ಲರೂ ನೆಲೆಸಿರುವ ವಿಶ್ವದ ಏಕೈಕ ರಾಷ್ಟ್ರ ಭಾರತ. ಪ್ರತಿಯೊಬ್ಬರು ಒಂದೊಂದು ದೇವರನ್ನು ಪೂಜಿಸಬಹುದು. ಆದರೆ ದೇಶದ ದೃಷ್ಟಿಯಿಂದ ಅವರೆಲ್ಲರ ಆಲೋಚನೆ ಒಂದೇ ರೀತಿಯಾಗಿರುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. “ದೇಶವನ್ನು ಒಗ್ಗೂಡಿಸಲು ಮತ್ತು ನಂಬಿಕೆಯನ್ನು ಬೆಂಬಲಿಸುವ ದೃಷ್ಟಿಯಿಂದ ಎಲ್ಲರೂ ಹೆಜ್ಜೆ ಇಟ್ಟರೆ ಕೆಲವರ ನಂಬಿಕೆಗಳು ದೇಶದ ಹಿತಾಸಕ್ತಿಗೆ ಪೂರಕವಾಗಿಲ್ಲ. ಈ ರೀತಿ ಮಾತನಾಡುವ ಮೂಲಕ ಅವರು ದೇಶವನ್ನು ದುರ್ಬಲಗೊಳಿಸುತ್ತಾರೆ. ಹೀಗಾಗಿ, ಅರ್ಜಿದಾರರ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ರುಜುವಾತಾಗಿವೆ” ಎಂದು ನ್ಯಾಯಾಲಯ ಹೇಳಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಜಾಮೀನು ನಿರಾಕರಿಸಲಾಗಿದ್ದು, ಒಂದೊಮ್ಮೆ ಜಾಮೀನು ನೀಡಿದರೆ ಶಾಂತಿಭಂಗಕ್ಕೆ ಸಾಮರಸ್ಯ ಕದಡುವಿಕೆಗೆ ಕಾರಣವಾಗಲಿದೆ ಎಂದು ನ್ಯಾಯಾಲಯ ಹೇಳಿದೆ.

    ಆರೋಪಿ ಮೊದಲ ಬಾರಿಗೆ ಅಪರಾಧ ಎಸಗಿಲ್ಲ. ಹಿಂದೆಯೂ ಅವರು ಗೋ ವಧೆ ಮಾಡಿದ್ದಾರೆ. ಇದು ಸಮಾಜದಲ್ಲಿ ಶಾಂತಿಭಂಗ ಉಂಟು ಮಾಡಿದ್ದು, ಅವರಿಗೆ ಜಾಮೀನು ನೀಡಿದರೆ ಅವರು ಮತ್ತದೇ ಕೆಲಸ ಮಾಡುವ ಮೂಲಕ ಸಾಮರಸ್ಯ ಕದಡಲಿದ್ದಾರೆ. ಹೀಗಾಗಿ, ಆರೋಪಿಯ ಜಾಮೀನು ಮನವಿಯು ಆಧಾರರಹಿತವಾಗಿದ್ದು, ವಜಾಕ್ಕೆ ಅರ್ಹವಾಗಿದೆ. ಆದ್ದರಿಂದ ಜಾಮೀನು ಮನವಿ ವಜಾ ಮಾಡಲಾಗಿದೆ” ಎಂದು ಪೀಠ ಹೇಳಿದೆ.

    ಇದನ್ನು ಓದಿ: 45 Children Die In Firozabad| ಉತ್ತರಪ್ರದೇಶದಲ್ಲಿ 45 ಮಕ್ಕಳೂ ಸೇರಿ 53 ಜನ ಸಾವು; ಶಂಕಿತ ಢೆಂಗ್ಯೂ ಸಾಧ್ಯತೆ!

    ರಾಜ್ಯದಲ್ಲಿ ಗೋ ಶಾಲೆಗಳ ಕಾರ್ಯಾಚರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ನ್ಯಾಯಾಲಯವು ಗೋರಕ್ಷಣೆ ಮತ್ತು ಬೆಂಬಲದ ಬಗ್ಗೆ ಮಾತನಾಡುವವರೂ ಗೋ ಭಕ್ಷಣೆಗೆ ಇಳಿದಿದ್ದಾರೆ ಎಂದಿದೆ. “ರಾಜ್ಯ ಸರ್ಕಾರ ಗೋವುಗಳ ರಕ್ಷಣೆಗೆ ಗೋಶಾಲೆ ನಿರ್ಮಿಸುತ್ತದೆ. ಗೋವುಗಳನ್ನು ಸಂರಕ್ಷಣೆ ಮಾಡಬೇಕಾದವರು ಅದನ್ನು ಮಾಡುತ್ತಿಲ್ಲ. ಅದೇ ರೀತಿ ಗೋವುಗಳ ಸಂರಕ್ಷಣೆ ಹೆಸರಿನಲ್ಲಿ ಖಾಸಗಿ ಗೋಶಾಲೆಗಳು ಸಾರ್ವಜನಿಕರಿಂದ ದೇಣಿಗೆ ಮತ್ತು ಸರ್ಕಾರದಿಂದ ಸಹಾಯ ಪಡೆದು ಕೆಲವರು ತಮ್ಮ ಹಿತಾಸಕ್ತಿಗೆ ಅದನ್ನು ಬಳಸಿಕೊಳ್ಳುತ್ತಿದ್ದಾರೆ” ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ.
    Published by:HR Ramesh
    First published: