ಪಾಟ್ನಾ (ನವೆಂಬರ್ 19); ಬಿಹಾರದಲ್ಲಿ ಮತ್ತೊಂದು ಅವಧಿಗೆ ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿದು ನಿತೀಶ್ ಕುಮಾರ್ ಸಿಎಂ ಗಾದಿಗೆ ಏರಿದ್ದಾರೆ. ಆದರೆ, ಅವರ ಜೊತೆಗೆ ಶಿಕ್ಷಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಚಿವ ಮೇವಾಲಾಲ್ ಚೌಧರಿ ಇದೀಗ ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ ಕೇವಲ ಮೂರೇ ದಿನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಷ್ಟ್ರ ಮಟ್ಟದಲ್ಲಿ ಸುದ್ದಿಯ ಕೇಂದ್ರವಾಗಿದ್ದಾರೆ. ಮೇವಾಲಾಲ್ ಚೌಧರಿ ಕಳೆದ ಸೋಮವಾರವಷ್ಟೇ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಈ ಸಮಾರಂಭ ಮುಗಿಯುತ್ತಿದ್ದಂತೆ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳದಿಂದ ತೀವ್ರ ಟೀಕೆಗೆ ಒಳಗಾಗಿದ್ದರು. 2017 ರಲ್ಲಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಕೆದಕಿ ಆರ್‌ಜೆಡಿ ಪಕ್ಷವು ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಹೀಗಾಗಿ ನೂತನ ಸಚಿವ ಮೇವಾಲಾಲ್ ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Bihar Education Minister Mewa Lal Choudhary resigns. pic.twitter.com/Uo8K5bbIHB
— ANI (@ANI) November 19, 2020
ಆಗಿನ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರ ಅನುಮೋದನೆಯ ನಂತರ ಆಗಿನ ತಾರಾಪುರದ ಜೆಡಿಯು ಶಾಸಕರಾಗಿದ್ದ ಮೇವಾಲಾಲ್ ಚೌಧರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನೂ ಹೂಡಲಾಗಿತ್ತು. ಆದರೆ ಅವರ ವಿರುದ್ಧ ಇನ್ನೂ ಯಾವುದೇ ಚಾರ್ಜ್‌ಶೀಟ್ ದಾಖಲಾಗಿಲ್ಲ.
ಇದನ್ನೂ ಓದಿ : ಬಿಹಾರದ ಹಂಗಾಮಿ ವಿಧಾನಸಭಾ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ
ಇಂದು ಸಹ ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿದ್ದ ಮೇವಾಲಾಲ್ ಚೌಧರಿ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಿಹಾರದ ಪ್ರತಿಪಕ್ಷ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ವಾಗ್ದಾಳಿ ನಡೆಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ