• Home
 • »
 • News
 • »
 • national-international
 • »
 • Rahul Gandhi| ಲಸಿಕೆಗೆ ಆನ್​ಲೈನ್ ನೋಂದಣಿ ಸರಿಯಲ್ಲ, ಇಂಟರ್​ನೆಟ್ ಇಲ್ಲದವರಿಗೆ ಬದುಕುವ ಹಕ್ಕಿಲ್ಲವೇ?: ರಾಹುಲ್ ಗಾಂಧಿ ಪ್ರಶ್ನೆ

Rahul Gandhi| ಲಸಿಕೆಗೆ ಆನ್​ಲೈನ್ ನೋಂದಣಿ ಸರಿಯಲ್ಲ, ಇಂಟರ್​ನೆಟ್ ಇಲ್ಲದವರಿಗೆ ಬದುಕುವ ಹಕ್ಕಿಲ್ಲವೇ?: ರಾಹುಲ್ ಗಾಂಧಿ ಪ್ರಶ್ನೆ

ರಾಹುಲ್ ಗಾಂಧಿ.

ರಾಹುಲ್ ಗಾಂಧಿ.

ನಗರ ಪ್ರದೇಶಗಳಿಂದ ದೂರದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗಾಗಿ ಡಿಜಿಟಲ್ ಬಳಕೆ, ಇಂಟರ್‌ನೆಟ್ ಬಳಕೆ ಅಥವಾ ಸ್ಮಾರ್ಟ್ ಫೋನ್ ಇಲ್ಲದ ಬಡವರ ಪರವಾಗಿ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

 • Share this:

  ನವ ದೆಹಲಿ (ಜೂನ್ 10); ಕೊರೋನಾ ಸೋಂಕು ಈ ಎರಡನೇ ಅಲೆಯಲ್ಲಿ ಇಡೀ ದೇಶದಾದ್ಯಂತ ವ್ಯಾಪಿಸುತ್ತಿದೆ. ಸೋಂಕು ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗ ಎಲ್ಲರಿಗೂ ಲಸಿಕೆ ನೀಡುವುದೇ ಆಗಿದ್ದು, ಭಾರತ ಸರ್ಕಾರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಈಗಾಗಲೇ ಲಸಿಕೆ ನೀಡುವ ಕಾರ್ಯ ಚಾಲ್ತಿಯಲ್ಲಿದೆ. ಆದರೆ, ಎಲ್ಲರೂ ಲಸಿಕೆಯನ್ನು ಪಡೆಯಲು ಆನ್​ಲೈನ್​ನಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ಕೇಂದ್ರ ಸರ್ಕಾರ ಇದಕ್ಕೆಂದೆ ಒಂದು ಆ್ಯಪ್ ಸಹ ಬಿಡುಗಡೆ ಮಾಡಿದೆ. ಆದರೆ, "ಇಂಟರ್‌ನೆಟ್ ಸಂಪರ್ಕ ಮತ್ತು ಮೊಬೈಲ್ ಇಲ್ಲದವರಿಗೂ ಬದುಕುವ ಹಕ್ಕಿದೆ. ಹೀಗಾಗಿ ಆನ್‌ಲೈನ್ ನೋಂದಣಿ ಮಾಡದಿದ್ದರೂ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು" ಎಂದು ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ಒತ್ತಾಯಿಸಿರುವ ರಾಹುಲ್ ಗಾಂಧಿ, "ಲಸಿಕೆಗಾಗಿ ಆನ್‌ಲೈನ್ ನೋಂದಣಿ ಮಾತ್ರ ಸಾಕಾಗುವುದಿಲ್ಲ. ಏಕೆಂದರೆ ಭಾರತದಲ್ಲಿ ಅಧಿಕ ಸಂಖ್ಯೆಯ ಜನ ಮೊಬೈಲ್​ ಮತ್ತು ಇಂಟರ್​ನೆಟ್​ನಿಂದ ವಂಚಿತರಾಗಿದ್ದಾರೆ. ಹೀಗಾಗಿ ಲಸಿಕೆ ಕೇಂದ್ರಕ್ಕೆ ಕಾಲಿಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಕೊರೋನಾ ಲಸಿಕೆ ನೀಡಬೇಕು. ಬದುಕುವ ಹಕ್ಕು ಇಂಟರ್‌ನೆಟ್ ಇಲ್ಲದವರಿಗೂ ಸೇರಿದೆ" ಎಂದು ಟ್ವೀಟ್ ಮಾಡಿದ್ದಾರೆ.


  ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್‌ನೆಟ್ ಸಂಪರ್ಕ ಇರುವುದಿಲ್ಲ. ಬಡವರ ಬಳಿ ಸ್ಮಾರ್ಟ್‌ಫೋನ್‌ ಇರುವುದಿಲ್ಲ ಹಾಗಾಗಿ ಇಂಟರ್‌ನೆಟ್ ಬಳಸದವರಿಗೂ ಲಸಿಕೆ ಪಡೆಯುವ ಹಕ್ಕಿದೆ. ಹೀಗಾಗಿ ಲಸಿಕೆಗಾಗಿ ನೋಂದಣಿ ಮಾಡದಿದ್ದವರಿಗೂ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


  ಇದನ್ನೂ ಓದಿ: Sushant Singh Rajput: ನಟ ಸುಶಾಂತ್ ಸಿಂಗ್ ಸಾವಿನ ಕುರಿತ ಚಿತ್ರಕ್ಕೆ ತಡೆ ನೀಡಲು ಸಾಧ್ಯವಿಲ್ಲ: ದೆಹಲಿ ಹೈಕೋರ್ಟ್​


  ನಗರ ಪ್ರದೇಶಗಳಿಂದ ದೂರದ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗಾಗಿ ಡಿಜಿಟಲ್ ಬಳಕೆ, ಇಂಟರ್‌ನೆಟ್ ಬಳಕೆ ಅಥವಾ ಸ್ಮಾರ್ಟ್ ಫೋನ್ ಇಲ್ಲದ ಬಡವರ ಪರವಾಗಿ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ. ಕೊರೋನಾ ಲಸಿಕೆ ಪಡೆಯಲು ಆನ್‌ಲೈನ್ ನೋಂದಣಿ ಕಡ್ಡಾಯ ಬೇಡ ಎಂದು ವಿರೋಧ ಪಕ್ಷ ಒತ್ತಾಯಿಸುತ್ತಿದೆ.


  ಇದನ್ನೂ ಓದಿ: Corona Death| ಒಂದೇ ದಿನದಲ್ಲಿ ದಾಖಲೆ ಬರೆದ ಕೊರೋನಾ ಸಾವಿನ ಸಂಖ್ಯೆ: ಇಷ್ಟು ದಿನ ಸುಳ್ಳು ವರದಿ ನೀಡಿತೇ ಬಿಹಾರ?


  ದೆಹಲಿಯಲ್ಲಿ ಕೊರೋನಾ ಲಸಿಕೆ ಎಲ್ಲರಿಗೂ ನೀಡಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮತದಾನ ಕೇಂದ್ರಗಳನ್ನು ಲಸಿಕಾ ಕೇಂದ್ರಗಳನ್ನಾಗಿಸಿದ್ದಾರೆ. ಕೊರೋನಾ ಲಸಿಕೆ ಬಗ್ಗೆ ಭಯವಿರುವ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ತರಬೇತಿ ನೀಡಿ ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  Published by:MAshok Kumar
  First published: