ನವದೆಹಲಿ(ಸೆ.13): ಇತ್ತೀಚೆಗೆ ಪದೇ ಪದೇ ಅನಾರೋಗ್ಯ ಪೀಡಿತರಾಗುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಡರಾತ್ರಿ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇಶದಲ್ಲಿ ಕೋವಿಡ್ ಕಾಣಿಸಿಕೊಂಡ ಹೊಸದರಲ್ಲಿ ಅಮಿತ್ ಶಾ ಬಹಳ ದಿನ ಮನೆ ಬಿಟ್ಟು ಹೊರ ಬಂದಿರಲಿಲ್ಲ. ಇದರಿಂದ ಆಗಲೇ ಅವರ ಅನಾರೋಗ್ಯದ ಬಗ್ಗೆ ಊಹಾಪೋಹಗಳು ಎದ್ದಿದ್ದವು. ಆ ಬಳಿಕ ಅವರಿಗೆ ಆಗಸ್ಟ್ 2ರಂದು ಕೊರೋನಾ ವೈರಸ್ ಪಾಸಿಟಿವ್ ಬಂದಿತ್ತು. ಆಗ ಅವರು ದೆಹಲಿಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಆಗಸ್ಟ್ 14ರಂದು ಕೊರೊನಾ ನೆಗೆಟಿವ್ ಆಗಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಕ್ಕೆ ವ್ಯಾಪಕ ಟೀಕೆ ಬಂದ ಹಿನ್ನಲೆಯಲ್ಲಿ ಕೊರೋನೋತ್ತರ ಚಿಕಿತ್ಸೆಗಾಗಿ ಆಗಸ್ಟ್ 18ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದರು. ಆಗಲೂ ಅವರ ಅನಾರೋಗ್ಯದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಯಿತು.
NEET 2020 – ಹಲವು ಆತಂಕಗಳ ಮಧ್ಯೆ ಇಂದು ನೀಟ್ ಪರೀಕ್ಷೆ; ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ
ಕಳೆದ ಬಾರಿ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾಗ ಆಸ್ಪತ್ರೆಯ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಈಗ ಮತ್ತೊಮ್ಮೆ ಭದ್ರತೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧುಮೇಹದಿಂದ ಕೂಡ ಬಳಲುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ