ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಭರವಸೆ: ಅಮಿತ್​ ಶಾ

ಸದ್ಯ ಬಂಗಾಳದ ಜನರು ತೃಣಮೂಲ ಕಾಂಗ್ರೆಸ್​ನ್ನು ತೊಡೆದುಹಾಕಲು ಬಯಸುತ್ತಿದ್ದಾರೆ. ಇದು ಅತ್ಯಂತ ಮುಖ್ಯವಾಗಿದೆ

news18-kannada
Updated:October 17, 2020, 9:57 PM IST
ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆ ಭರವಸೆ: ಅಮಿತ್​ ಶಾ
ಅಮಿತ್ ಶಾ
  • Share this:
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪರಿವರ್ತನೆ ನಡೆಯಲಿದೆ. ಇದು ಅನಿವಾರ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ತಿಳಿಸಿದ್ದಾರೆ. ನ್ಯೂಸ್​ 18 ಸುದ್ದಿವಾಹಿನಿಯ ಪ್ರಧಾನ ಸಂಪಾದಕ ರಾಹುಲ್​ ಜೋಷಿ ಅವರೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತೇವೆ. ಪಶ್ಚಿಮ ಬಂಗಾಳದಲ್ಲಿ ಹೊಸ ಬದಲಾವಣೆ ಬರಲಿದೆ ಎಂಬ ಆಶಾಭಾವನೆ ಇದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾವು ಪಶ್ಚಿಮ ಬಂಗಾಳದಲ್ಲಿಯೂ ಸರ್ಕಾರ ರಚಿಸುತ್ತೇವೆ ಎಂದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಸಾಧ್ಯವಾಗಲಿದೆ. ಆದರೆ, ಸದ್ಯ ಬಂಗಾಳದ ಜನರು ತೃಣಮೂಲ ಕಾಂಗ್ರೆಸ್​ನ್ನು ತೊಡೆದುಹಾಕಲು ಬಯಸುತ್ತಿದ್ದಾರೆ. ಇದು ಅತ್ಯಂತ ಮುಖ್ಯವಾಗಿದೆ ಎಂದರು.

ಅಮ್ಫಾನ್​ ಚಂಡಮಾರುತ ಭ್ರಷ್ಟಚಾರ ಕುರಿತು ಮಾತನಾಡಿದ ಅವರು, ಚಂಡಮಾರುತದ ವೇಳೆ ಪರಿಹಾರ ಹಣ ತಪ್ಪಾದ ವ್ಯಕ್ತಿ ಕೈ ಸೇರಿದೆ. ಪರಿಹಾರ ಹಣ ಹಂಚಿಕೆಯಲ್ಲಿ ಭ್ರಷ್ಟಚಾರ ನಡೆದಿದೆ, ಎಲ್ಲಾ ಹಣವೂ ಭ್ರಷ್ಟಚಾರಗೊಂಡಿದೆ ಎಂದರು.

ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋವಿಡ್​-19 ನಿರ್ವಹಣೆ ಕಾರ್ಯ ನಿರ್ವಹಣೆ ಬಗ್ಗೆ ಕೂಡ ಅಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಸೋಂಕು ನಿರ್ವಹಣೆಯಲ್ಲಿ ಅವರು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳಲ್ಲಿ 14 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.
Published by: Seema R
First published: October 17, 2020, 9:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading