ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ; ಮೂರು ದಿನದ ಸಭೆಯಲ್ಲಿ ಮಹತ್ವದ ನಿರ್ಧಾರ!

ಇದೀಗ ಅಮಿತ್ ಶಾ ಗೃಹ ಸಚಿವರಾಗಿ ಆಯ್ಕೆಯಾದ ನಂತರ ಬಿಜೆಪಿ ಅಧ್ಯಕ್ಷ ಗಾದಿ ಯಾರಿಗೆ? ಎಂಬ ಪ್ರಶ್ನೆ ಮುನ್ನಲೆಗೆ ಬಂದಿತ್ತು. ಆದರೆ ಇನ್ನೂ ಕೆಲವೇ ತಿಂಗಳಲ್ಲಿ ಹರಿಯಾಣ, ಜಾರ್ಖಂಡ್ ಹಾಗೂ ಮಹಾರಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅಲ್ಲಿಯವರೆಗೆ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲಿ ಎಂಬ ಮಾತುಗಳು ಸಹ ಕೇಳಿಬರುತ್ತಿವೆ

MAshok Kumar | news18
Updated:June 13, 2019, 3:21 PM IST
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ; ಮೂರು ದಿನದ ಸಭೆಯಲ್ಲಿ ಮಹತ್ವದ ನಿರ್ಧಾರ!
ಅಮಿತ್ ಶಾ
MAshok Kumar | news18
Updated: June 13, 2019, 3:21 PM IST
ನವ ದೆಹಲಿ (ಜೂನ್​.13); ನವ ದೆಹಲಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದ್ದು, ಗೃಹ ಸಚಿವ ಅಮಿತ್ ಶಾ ಅವರೇ ಪಕ್ಷದ ರಾಷ್ಟ್ರಾಧ್ಯಕ್ಷರಾಗಿಯೂ ಮುಂದುವರೆಯುವರೆ? ಅಥವಾ ಬೇರೆಯವರನ್ನು ನೇಮಕ ಮಾಡಲಾಗುವುದೇ? ಎಂಬ ವಿಚಾರ ಸ್ಪಷ್ಟವಾಗಲಿದೆ.

ಅಧ್ಯಕ್ಷರ ಆಯ್ಕೆಗೆ ಪಕ್ಷದೊಳಗೆ 6 ತಿಂಗಳ ನಂತರ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ಅಮಿತ್ ಶಾ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.

2014ರ ಲೋಕಸಭಾ ಚುನಾವಣೆಯಲ್ಲಿ ಅಮಿತ್ ಶಾ ನಿರ್ಣಾಯಕ ಪಾತ್ರ ನಿರ್ವಹಿಸಿದ್ದರು. ಅವರನ್ನು ಉತ್ತರಪ್ರದೇಶದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಜವಾಬ್ದಾರಿ ಹೊತ್ತು ಲಕ್ನೋಗೆ ತೆರಳಿದ್ದ ಅಮಿತ್​ ಶಾ ಕಾಂಗ್ರೆಸ್ ಹಾಗೂ ಸ್ಥಳೀಯ ಪ್ರಾದೇಶಿಕ ಪಕ್ಷಗಳ ವಿರುದ್ಧ ರಣತಂತ್ರ ಹೆಣೆಯುವಲ್ಲಿ ಸಫಲರಾಗಿದ್ದರು. ಈ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ 80 ಸ್ಥಾನಗಳ ಪೈಕಿ 72 ಸ್ಥಾನಗಳಲ್ಲಿ ಜಯಗಳಿಸಿ ದಾಖಲೆ ಬರೆದಿತ್ತು.

ಇದನ್ನೂ ಓದಿ : 'ಸಮಯಕ್ಕೆ ಸರಿಯಾಗಿ ಕಚೇರಿಗೆ ಬನ್ನಿ, ಆ ದಿನದ ಕೆಲಸವನ್ನು ಅಂದೇ ಮಾಡಿ' ; ಸಚಿವರಿಗೆ ಕಿವಿಮಾತು ಹೇಳಿದ ಮೋದಿ!

ಪರಿಣಾಮ ಅಮಿತ್​ ಶಾ ಅವರನ್ನು 2014ರ ಜುಲೈನಲ್ಲಿ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. 2017ರ ವೇಳೆಗೆ ಅವರ ಅಧಿಕಾರದ ಅವಧಿ ಮುಗಿದಿತ್ತು. ಆದರೆ, 2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರೆಸಲು ಪಕ್ಷ ತೀರ್ಮಾನ ಮಾಡಿತ್ತು. ಪರಿಣಾಮ ಈ ಚುನಾವಣೆಯಲ್ಲೂ ಬಿಜೆಪಿ 303 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಸಾಧಿಸಿತ್ತು. ಅಲ್ಲದೆ ಅಮಿತ್ ಶಾ ಅವರನ್ನು ಗೃಹ ಸಚಿವರನ್ನಾಗಿಯೂ ನೇಮಕ ಮಾಡಲಾಗಿತ್ತು.

ಇದೀಗ ಅಮಿತ್ ಶಾ ಗೃಹ ಸಚಿವರಾಗಿ ಆಯ್ಕೆಯಾದ ನಂತರ ಬಿಜೆಪಿ ಅಧ್ಯಕ್ಷ ಗಾದಿ ಯಾರಿಗೆ? ಎಂಬ ಪ್ರಶ್ನೆ ಮುನ್ನಲೆಗೆ ಬಂದಿತ್ತು. ಆದರೆ ಇನ್ನೂ ಕೆಲವೇ ತಿಂಗಳಲ್ಲಿ ಹರಿಯಾಣ, ಜಾರ್ಖಂಡ್ ಹಾಗೂ ಮಹಾರಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅಲ್ಲಿಯವರೆಗೆ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲಿ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಇದನ್ನೂ ಓದಿ : 'ಸತ್ಯವನ್ನು ಮಾತ್ರ ಮಾತನಾಡುತ್ತೇನೆ'; ಕಾಂಗ್ರೆಸ್​ ಕಾರ್ಯಕರ್ತರ ವಿರುದ್ಧ ಅಸಮಾಧಾನ ಹೊರಹಾಕಿದ ಪ್ರಿಯಾಂಕಾ ಗಾಂಧಿ
Loading...

ಇಂದಿನಿಂದ ಆರಂಭವಾಗಿರುವ ಮೂರು ದಿನಗಳ ಸಭೆಯಲ್ಲಿ ಈ ಕುರಿತು ಚರ್ಚೆಯಾಗಲಿದ್ದು, ಮೂರು ದಿನಗಳ ನಂತರ ಅಮಿತ್ ಶಾ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವರೇ? ಅಥವಾ ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುತ್ತದೆಯೇ? ಎಂಬುದನ್ನು ತೀರ್ಮಾನಿಸಲಾಗುತ್ತದೆ ಎಂದು ತಿಳಿದುಬಂದಿದೆ.

First published:June 13, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...