• Home
 • »
 • News
 • »
 • national-international
 • »
 • ಪಾಕ್​​ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನಾಗೆ ಮತ್ತೆ ಮಾರ್ಚ್​​ 5ರವರೆಗೂ ನ್ಯಾಯಾಂಗ ಬಂಧನ

ಪಾಕ್​​ ಪರ ಘೋಷಣೆ ಪ್ರಕರಣ: ಅಮೂಲ್ಯ ಲಿಯೋನಾಗೆ ಮತ್ತೆ ಮಾರ್ಚ್​​ 5ರವರೆಗೂ ನ್ಯಾಯಾಂಗ ಬಂಧನ

ಪಾಕ್​ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ

ಪಾಕ್​ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫೆ.21ನೇ ತಾರೀಕು ಗುರುವಾರ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನಾ ಸಭೆಯಲ್ಲಿ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪಾಲ್ಗೊಂಡಿದ್ದರು. ಪ್ರತಿಭಟನೆ ಆರಂಭವಾಗುತ್ತಿದ್ದಂತೆ ವೇದಿಕೆ ಮೇಲೆ ಬಂದ ಅಮೂಲ್ಯ ಎಂಬ ಯುವತಿ ಇದ್ದಕ್ಕಿದ್ದ ಹಾಗೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಎರಡು ಬಾರಿ ಘೋಷಣೆ ಕೂಗಿದ್ದಳು.

ಮುಂದೆ ಓದಿ ...
 • Share this:

  ಬೆಂಗಳೂರು(ಫೆ.29): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್​​ನಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಪಾಕಿಸ್ತಾನ್‌ ಜಿಂದಾಬಾದ್‌' ಎಂದು ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್​​ಗೆ ಮಾರ್ಚ್​​​ 5ನೇ ತಾರೀಕಿನವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗೆ ಆದೇಶಿಸಿ ನಗರದ 5ನೇ ಎಸಿಎಂಎಂ ನ್ಯಾಯಾಲಯ ಅಮೂಲ್ಯ ನ್ಯಾಯಾಂಗ ಬಂಧನ ವಿಸ್ತರಿಸಿದೆ.


  ಇತ್ತೀಚೆಗೆ ಸಿಎಎ ವಿರುದ್ಧ ಕಾರ್ಯಕ್ರಮದಲ್ಲಿ ಅಮೂಲ್ಯ ಲಿಯೋನ್‌ 'ಪಾಕಿಸ್ತಾನ್‌ ಜಿಂದಾಬಾದ್‌' ಎಂದು ಘೋಷಣೆ ಕೂಗಿದ ಸುದ್ದಿಯೂ ಪಾಕ್​​ನ ಪ್ರಮುಖ ಪತ್ರಿಕೆ 'ಡಾನ್‌'ನಲ್ಲಿ ಪ್ರಕಟವಾಗಿತ್ತು. ಡಾನ್​​ ಪತ್ರಿಕೆ ಅಮೂಲ್ಯ ಘೋಷಣೆ ಕೂಗುವ ವೇಳೆ ಅಸಾದುದ್ದೀನ್‌ ಓವೈಸಿ ಮೈಕ್​​ ಕಸಿದುಕೊಳ್ಳಲು ಯತ್ನಿಸಿದ ಚಿತ್ರವನ್ನು ಪ್ರಕಟಿಸಿತ್ತು. ಎಎನ್‌ಐ ಮತ್ತು ವೈರ್ ವೆಬ್‌ಸೈಟ್‌ ಮಾಡಿದ ಸುದ್ದಿಯ ಆಧಾರದ ಮೇಲೆ ಈ ಘಟನೆ ಬಗ್ಗೆ ಡಾನ್‌ ವರದಿ ಮಾಡಿದ್ದಾಗಿ ಬರೆದುಕೊಂಡಿತ್ತು. ಅಲ್ಲದೇ ಅಮೂಲ್ಯ ಕೂಗಿದ ಘೋಷಣೆ ವಿಡಿಯೋ ಬಗ್ಗೆಯೂ ಪ್ರಸ್ತಾಪಿಸಿತ್ತು.


  ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫೆ.21ನೇ ತಾರೀಕು ಗುರುವಾರ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನಾ ಸಭೆಯಲ್ಲಿ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪಾಲ್ಗೊಂಡಿದ್ದರು. ಪ್ರತಿಭಟನೆ ಆರಂಭವಾಗುತ್ತಿದ್ದಂತೆ ವೇದಿಕೆ ಮೇಲೆ ಬಂದ ಅಮೂಲ್ಯ ಎಂಬ ಯುವತಿ ಇದ್ದಕ್ಕಿದ್ದ ಹಾಗೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಎರಡು ಬಾರಿ ಘೋಷಣೆ ಕೂಗಿದ್ದಳು. ತಕ್ಷಣ ಆಕೆಯನ್ನು ವೇದಿಕೆಯಿಂದ ಕೆಳಗಿಳಿಸಿದ ಆಯೋಜಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದ ಪೊಲೀಸರು ಆಕೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು.


  ಇದನ್ನೂ ಓದಿ: Sedition Case: ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು


  ಸಿಎಎ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ 124A, 153A, 153B, 505/2, 34 ಸೆಕ್ಷನ್ ಅಡಿಯಲ್ಲಿ ಎಫ್​​ಐಆರ್​​ ದಾಖಲಾಗಿದೆ. ಈಗ ಮಾರ್ಚ್​​​ 5ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮತ್ತೆ ವಿಚಾರಣೆ ಮುಂದುವರಿದಿದೆ.

  Published by:Ganesh Nachikethu
  First published: