ಉತ್ತರ ಪ್ರದೇಶ; ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಓರ್ವನಿಗೆ ಗಾಯ

news18
Updated:August 11, 2018, 12:42 PM IST
ಉತ್ತರ ಪ್ರದೇಶ; ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಓರ್ವನಿಗೆ ಗಾಯ
news18
Updated: August 11, 2018, 12:42 PM IST
-ನ್ಯೂಸ್ 18 ಕನ್ನಡ

ಲಕ್ನೋ (ಆ.11) : ನಿರ್ಮಾಣ ಹಂತದ ಮೇಲ್ಸೇತುವೆಯ ಒಂದು ಭಾಗ ಕುಸಿದು, ಸ್ಥಳದಲ್ಲಿದ್ದ ಕಾರ್ಮಿಕನೊಬ್ಬ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಫ್ಲೆಓವರ್ ನಿರ್ಮಾಣಕ್ಕೆ ಬಳಸಲಾಗಿದ್ದ ಬೃಹತ್ ಗಾತ್ರದ ಕಬ್ಬಿಣದ ಬೀಮ್​​ಗಳು ಮುರಿದ ಪರಿಣಾಮವಾಗಿ ಸೇತುವೆ ಕುಸಿದಿದೆ. ಕಳೆದ ಎರಡು ವಾರಗಳಿಂದ ಈ ಭಾಗದಲ್ಲಿ ವ್ಯಾಪಕವಾಗಿ ಮಳೆ ಬೀಳುತ್ತಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಕೆಲಸಗಾರರು ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದೆ.

ಸ್ಥಳದಲ್ಲಿ ಬಿದ್ದಿರುವ ಅವಶೇಷಗಳನ್ನು ತೆರವುಗೊಳಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ನೋಡಿಕೊಳ್ಳಲು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈಗ ಕುಸಿದುಬಿದ್ದಿರುವ ಮೇಲ್ಸೆತುವೆಯ ಭಾಗವನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ನೇಮಿಸಲ್ಪಟ್ಟ ಗುತ್ತಿಗೆದಾರರು ನಿರ್ಮಿಸುತ್ತಿದ್ದರು. ಈಗಾಗಲೇ ಶೇ.60ರಷ್ಟು ಕಾಮಗಾರಿ ಪೂರ್ಣಗೊಂಡಿತ್ತು.

ಜಿಲ್ಲಾ ಆಡಳಿತವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ ಎಚ್ ಎ ಐ) ಮಾಹಿತಿ ನೀಡಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಬೇಕು, ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್ ಶೇಖರ್ ಹೇಳಿಕೆ ನೀಡಿದ್ದಾರೆ.

ಕಳೆದ ವಾರ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇ ನಲ್ಲಿ ಭಾರಿ ಮಳೆಯಾದ ಕಾರಣ ಗುಹೆ ಕುಸಿದಿತ್ತು. ವಾರಣಾಸಿಯಲ್ಲೂ ಮೇ ತಿಂಗಳಿನಲ್ಲಿ ನಿರ್ಮಾಣ ಹಂತದ ಮೇಲ್ಸೆತುವೆ ಕುಸಿದು ಹಲವು ಮಂದಿ ಮೃತಪಟ್ಟಿದ್ದರು.
First published:August 11, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...