ಕೊಚ್ಚಿ (ಜು. 21): ಕೇರಳದಲ್ಲಿ ಮೊದಲ ಬಾರಿಗೆ ರೆಡಿಯೋ ಜಾಕಿಯಾಗಿ ಎಲ್ಲರ ಗಮನಸೆಳೆದ ಅನನ್ಯಾ ಕುಮಾರಿ ಅಲೆಕ್ಸ್ ಸಾವನ್ನಪ್ಪಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುವ ಮೂಲಕ ಗಮನಸೆಳೆದಿದ್ದ ಅವರು ಮಂಗಳವಾರ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 28 ವರ್ಷದ ಅನನ್ಯಾ ಬೆಡ್ರೂಂನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಇದೊಂದಿ ಆತ್ಮಹತ್ಯೆ ಯತ್ನ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ಮಾತನಾಡಿರುವ ಪೊಲೀಸರು ಮೇಲ್ಮೋಟಕ್ಕೆ ಇದು ಆತ್ಮಹತ್ಯೆ ರೀತಿ ಕಂಡು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಮತ್ತಷ್ಟು ವಿಷಯ ತಿಳಿಯಲಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಕಳೆದ ವರ್ಷ ಲಿಂಗ ಪರಿವರ್ತನೆಯ ಅನೇಕ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಅನೇಕ ಆರೋಗ್ಯ ಸಮಸ್ಯೆಯನ್ನು ಕೂಡ ಅನುಭವಿಸಿದ್ದರು. ಅಲ್ಲದೇ, ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರು ಎಂದು ಕೂಡ ಆರೋಪಿಸಿದ್ದರು.
ಇದನ್ನು ಓದಿ: ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಎಂಬಿ ಪಾಟೀಲ್
ಅನನ್ಯಾ ಸಾವಿನ ಕುರಿತು ತನಿಖೆ ನಡೆಸುವಂತೆ ಆರೋಗ್ಯ ಸಚಿವ ವೀಣಾ ಜಾರ್ಜ್ ಆದೇಶಿಸಿದ್ದಾರೆ. ಇದೇ ವೇಳೆ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರ ಆರೋಗ್ಯ ಸಮಸ್ಯೆ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಕೂಡ ಅವರು ಹೇಳಿದ್ದಾರೆ. ಈ ಪ್ರಕರಣ ಕುರಿತು ಆರೋಗ್ಯ ನಿರ್ದೇಶಕರು ವಿಚಾರಣೆ ನಡೆಸಲಿದ್ದಾರೆ. ಈ ಕುರಿತು ತೃತೀಯ ಲಿಂಗಿಗಳ ಸಂಘ ಕೂಡ ದೂರು ದಾಖಲಿಸಿದೆ.
ಕೊಲ್ಲಂನ ಪೆರುಮಾನ್ನವರಾದ ಅನನ್ಯಾ 2021 ರ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಿದ ಗಮನಸೆಳೆದಿದ್ದರು. ಇಂಡಿಯನ್ ಮುಸ್ಲಿಂ ಲೀಗ್ ಮುಖಂಡ ಪಿ.ಕೆ ಕುನ್ಹಾಲಿಕುಟ್ಟಿ ವಿರುದ್ಧ ಡೆಮಾಕ್ರಟಿಕ್ ಸೋಷಿಯಲ್ ಜಸ್ಟೀಸ್ ಪಕ್ಷದಲ್ಲಿ ಅನನ್ಯಾ ಕಣಕ್ಕೆ ಇಳಿದಿದ್ದರು. ಆದರೆ, ಕಡೆಯ ಕ್ಷಣದಲ್ಲಿ ಅನನ್ಯಾ ನಾಮಪತ್ರ ಹಿಂಪಡೆದಿದ್ದರು. ಆತಂರಿಕ ಸಮಸ್ಯೆ ಹಿನ್ನಲೆ ಚುನಾವಣೆಯಿಂದ ಹಿಂದೆ ಸರಿದಿದ್ದಾಗಿ ಅನನ್ಯಾ ತಿಳಿಸಿದ್ದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ