• Home
  • »
  • News
  • »
  • national-international
  • »
  • ಎಸ್​ಪಿ ಬಾಲಸುಬ್ರಹ್ಮಣ್ಯಂಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ; ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​

ಎಸ್​ಪಿ ಬಾಲಸುಬ್ರಹ್ಮಣ್ಯಂಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ; ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​

ಎಸ್​ಪಿ ಬಾಲಸುಬ್ರಹ್ಮಣ್ಯಂ

ಎಸ್​ಪಿ ಬಾಲಸುಬ್ರಹ್ಮಣ್ಯಂ

ತೆಲುಗು ಮಾತ್ರವಲ್ಲದೇ, ಹಿಂದಿ, ಕನ್ನಡ, ತಮಿಳು, ಮಲಯಾಳಂ ಸೇರಿದಂತೆ  16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ಖ್ಯಾತಿ ಇವರಿಗಿದೆ. ಭಾರತ ರತ್ನ ಪ್ರಶಸ್ತಿ ಪಡೆಯಲು ಅವರು ಅರ್ಹರು.

  • Share this:

ಹೈದ್ರಾಬಾದ್​ (ಸೆ.28):  ಗಾನ ಗಂಧರ್ವ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮನಗಂಡು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್​ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ  ಮನವಿ ಸಲ್ಲಿಸಿದ್ದಾರೆ.  ಕಳೆದ ಮೂರುದಿನಗಳ ಹಿಂದೆ ಇಹಲೋಕ ತ್ಯಜಿಸಿದ ಎಸ್​ಪಿ ಬಾಲಸುಬ್ರಹ್ಮಣ್ಯಂ, ಸಂಗೀತ ಕ್ಷೇತ್ರದಲ್ಲಿ ದಾಖಲೆಗಳನ್ನು ಬರೆದವರು. ಐದು ದಶಕಗಳ ಕಾಲ ತಮ್ಮ ಅಮೋಘದ ಕಂಠದ ಮೂಲಕ ದೇಶದ ಜನರನ್ನು ರಂಜಿಸಿದ್ದಾರೆ. ಪ್ರಪಂಚದಾದ್ಯಂತ ಸಂಗೀತ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ  ಸನ್ಮಾನ ನೀಡಬೇಕು ಎಂದು ಕೋರಿ ಪತ್ರ ಬರೆದಿದ್ದಾರೆ.


ಎಸ್​ಪಿ ಬಾಲಸುಬ್ರಹ್ಮಣ್ಯಂ ಆಂಧ್ರಪ್ರದೇಶದಲ್ಲಿ ಜನಿಸಿದ್ದು ನಮ್ಮ ಪುಣ್ಯ. ಅವರನ್ನು ಕಳೆದುಕೊಳ್ಳುವ ಮೂಲಕ ಜಗತ್ತಿನ ಸಂಗೀತ ಕ್ಷೇತ್ರ ಬಡವಾಗಿದೆ. ತೆಲುಗು ಮಾತ್ರವಲ್ಲದೇ, ಹಿಂದಿ, ಕನ್ನಡ, ತಮಿಳು, ಮಲಯಾಳಂ ಸೇರಿದಂತೆ  16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ಖ್ಯಾತಿ ಇವರಿಗಿದೆ. ಭಾರತ ರತ್ನ ಪ್ರಶಸ್ತಿ ಪಡೆಯಲು ಅವರು ಅರ್ಹರು ಎಂದು ಕೇಳಿ ಕೊಂಡಿದ್ದಾರೆ.




ಸಂಗೀತಾ ಕ್ಷೇತ್ರದಲ್ಲಿನ ಸಾಧನೆಗಾಗಿ ಲತಾ ಮಂಗೇಶ್ವರ್​, ಬುಪೆನ್​ ಹಜಾರಿಕ್​, ಎಂಎಸ್​ ಸುಬ್ಬಲಕ್ಷೀ, ಬಿಸ್ಮಿಲ್ಲಾ ಖಾನ್​, ಭೀಮ್​ ಸೇನ್​ ಜೋಷಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಅದೇ ರೀತಿ ಈ ಎಸ್​ಪಿ ಬಿ ಕೊಡುಗೆ ಗಮನಿಸಿ ಈ ಪ್ರಶಸ್ತಿ ನೀಡಬೇಕು ಎಂದು ಪತ್ರದ ಮೂಲಕ ತಿಳಿಸಿದ್ದಾರೆ.


ಆರು ಬಾರಿ ರಾಷ್ಟ್ರೀಯ ಪ್ರಶಸ್ತಿ, 200ರಲ್ಲಿ ಪದ್ಮ ಶ್ರೀ, 2011ರಲ್ಲಿ ಪದ್ಮ ಭೂಷಣ ಪ್ರಶಸ್ತಿ ಪಡೆದ ಇವರು ಕರ್ನಾಟಕ ರಾಜ್ಯ ಹಾಗೂ ಆಂಧ್ರಪ್ರದೇಶ ರಾಜ್ಯ ಸರ್ಕಾರದ ಪ್ರಶಸ್ತಿಗಳನ್ನು ಪಡೆದಿದ್ದಾರೆ.


ಅವರ ಸಾವಿನ ಬಳಿಕ ಎಸ್​ಪಿ ಬಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಸಂಗೀತ ಕ್ಷೇತ್ರದಲ್ಲಿ ದಿಗ್ಗಜ್ಜರಾಗಿದ್ದ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿ ನೀಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ನಟ ಅರ್ಜುನ್​ ಸರ್ಜಾ ಕೂಡ ಈ ಹಿಂದೆ ಪ್ರತಿಕ್ರಿಯಿಸಿದರು.

Published by:Seema R
First published: