ಹೈದ್ರಾಬಾದ್ (ಮಾರ್ಚ್ 14); ಆಂಧ್ರಪ್ರದೇಶದ ಪುರಸಭೆ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಆಡಳಿತರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಕನಿಗಿರಿ, ಗಿಡ್ಡಲೂರು, ತಿರುವೂರು ಮತ್ತು ಶ್ರೀಕಾಕುಲಂನಲ್ಲಿ ಗೆಲುವು ಸಾಧಿಸಿದೆ. ಅಲ್ಲದೆ, ಪ್ರಮುಖ ಕ್ಷೇತ್ರಗಳಾದ ಗುಂಟೂರು, ಕಡಪ ಮತ್ತು ಚಿತ್ತೂರಿನಲ್ಲಿ ಮುನ್ನಡೆ ಸಾಧಿಸಿದೆ. ಇದಲ್ಲದೆ, ಗ್ರೇಟರ್ ವಿಶಾಖಪಟ್ಟಣಂ, ಗುಂಟೂರು ಮತ್ತು ವಿಜಯವಾಡ ಸೇರಿದಂತೆ 71 ಪುರಸಭೆಗಳು ಮತ್ತು ನಗರ ಪಂಚಾಯತ್ಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷ, ತೆಲುಗು ದೇಶಂ ಪಾರ್ಟಿ (ಟಿಡಿಪಿ) ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಡುವೆ ಗೆಲುವಿಗಾಗಿ ತ್ರಿಕೋನ ಸ್ಪರ್ಧೆಯಲ್ಲಿದೆ ಎನ್ನಲಾಗುತ್ತಿದೆ.
ವೈಎಸ್ಆರ್ ಕಾಂಗ್ರೆಸ್ ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯಲ್ಲಿ ಶೇ.80 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಿ, ಟಿಡಿಪಿಯನ್ನು ದೊಡ್ಡ ಅಂತರದಲ್ಲಿ ಎರಡನೇ ಸ್ಥಾನಕ್ಕೆ ತಳ್ಳಿತ್ತು. ಅಲ್ಲದೆ, ಜಗನ್ ಮೋಹನ್ ರೆಡ್ಡಿ ಅವರ ಪಕ್ಷವು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಭದ್ರಕೋಟೆಯಾದ ಕುಪ್ಪಂ ವಿಧಾನಸಭಾ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದ್ದು ಆಂಧ್ರಪ್ರದೇಶದ ರಾಜಕೀಯದಲ್ಲಿ ಪ್ರಮುಖ ವಿಚಾರವಾಗಿ ಪರಿಗಣಿಸಲಾಗಿದೆ.
ಇದನ್ನೂ ಓದಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಮುಕ್ತತೆ ಗುರಿ: ಕ್ವಾಡ್ ದೇಶಗಳ ಮುಖ್ಯಸ್ಥರಿಂದ ಜಂಟಿ ಲೇಖನ
ಈ ನಡುವೆ ಇದೀಗ ಪುರಸಭೆ ಚುನಾವಣೆಯೂ ಎದುರಾಗಿದ್ದು, ಎಲ್ಲೆಡೆ ವೈಎಸ್ಆರ್ ಕಾಂಗ್ರೆಸ್ ಉತ್ತಮ ಫಲಿತಾಂಶದತ್ತ ಹೆಜ್ಜೆ ಹಾಕುತ್ತಿರುವುದು ಟಿಡಿಪಿ ಹಾಗೂ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ