ಮುಂಬೈ (ಮಾ. 24): ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ವಸೂಲಿ ಮಾಡಿಕೊಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಎಂಟು ಪುಟಗಳ ಪತ್ರ ಬರೆದಿದ್ದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಆ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಪರಮ್ ಬೀರ್ ಸಿಂಗ್ ಅವರ ಆರೋಪದ ಮೇರೆಗೆ ಅನಿಲ್ ದೇಶಮುಖ್ ತಮ್ಮ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹ ಮಾಡಿತ್ತು. ವಿಷಯ ವ್ಯಾಪಕವಾಗಿ ಚರ್ಚೆ ಆಗಿತ್ತು. ಮಹಾರಾಷ್ಟ್ರದ ಎನ್ ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರದ ಮಟ್ಟದಲ್ಲೂ ಸಂಚಲನ ಸೃಷ್ಟಿ ಆಗಿತ್ತು. ಎನ್ ಸಿಪಿಯ ಅಗ್ರ ನಾಯಕ ಶರದ್ ಯಾದವ್ ನೇತೃತ್ವದಲ್ಲಿ ಆ ಪಕ್ಷದ ಮುಖಂಡರು ಹಲವು ಸುತ್ತಿನ ಮಾತುಕತೆ ನಡೆಸಿದರು. ಮಿತ್ರಪಕ್ಷಗಳ ಮಟ್ಟದಲ್ಲಿ ಸಮಾಲೋಚನೆ ಆಯಿತು. ಆದರೆ ಇಷ್ಟೆಲ್ಲ ಆದರೂ ಅನಿಲ್ ದೇಶಮುಖ್ ರಾಜೀನಾಮೆ ಪಡೆದುಕೊಂಡಿಲ್ಲ.
ಇದನ್ನೂ ಓದಿ: Anil Deshmukh: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪರಮ್ ಬೀರ್ ಸಿಂಗ್
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಥವಾ ಎನ್ ಸಿಪಿ 100 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಹೊತ್ತ ಅನಿಲ್ ದೇಶ್ಮುಖ್ ಅವರಿಂದ ರಾಜೀನಾಮೆ ಪಡೆಯದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಈಗ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪರಮ್ ಬೀರ್ ಸಿಂಗ್ ಅವರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೊಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ವಸೂಲಿ ಮಾಡಿಕೊಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹೇರಿದ ಬಗ್ಗೆ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸೂಕ್ತ ತನಿಖೆಗೆ ಆದೇಶಿಸುವಂತೆ ಕೇಳಿಕೊಂಡಿದ್ದಾರೆ.
ಈ ನಡುವೆ ಗೃಹ ಸಚಿವರ ಭ್ರಷ್ಟಾಚಾರದ ಪ್ರಕರಣವನ್ನು ಪ್ರಮುಖ ಅಸ್ತ್ರ ಮಾಡಿಕೊಂಡಿರುವ ಪ್ರತಿಪಕ್ಷ ಬಿಜೆಪಿ ಅನಿಲ್ ದೇಶ್ಮುಖ್ ರಾಜೀನಾಮೆ ನೀಡಲೇಬೇಕೆಂದು ಒತ್ತಡ ಹೇರುತ್ತಿದೆ. ಇದೇ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಕೂಡ ಒತ್ತಡ ಹೇರಿದೆ.
ಮೊದಲಿಗೆ ಎನ್ ಸಿಪಿ ನಾಯಕರು ಗೃಹ ಸಚಿವರ ಭ್ರಷ್ಟಾಚಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತೀರ್ಮಾನ ಮಾಡಲಿ ಎಂದಿದ್ದರು. ಆನಂತರ ಅನಿಲ್ ದೇಶ್ಮುಖ್ ರಾಜೀನಾಮೆ ಅನಗತ್ಯ ಎಂದು ಪ್ರತಿಪಾದಿಸಿದ್ದರು. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಪ್ರಕರಣದ ತನಿಖೆ ಆಗಲಿ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ನಿರ್ಧಾರ ಕೈಗೊಳ್ಳದೆ ಸಮಯ ದೂಡುತ್ತಿದ್ದಾರೆ. ಇಂದು ಸುಪ್ರೀಂ ಕೋರ್ಟಿನಲ್ಲಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ