UP Accident: ಉತ್ತರ ಪ್ರದೇಶದಲ್ಲಿ ಡಬ್ಬಲ್ ಡೆಕ್ಕರ್ ಬಸ್ ಮತ್ತು ಟ್ರಕ್ ಅಪಘಾತ - ಘಟನೆಯಲ್ಲಿ 9 ಜನರ ಸಾವು..

Accident In Barabanki: ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದು, ಗಾಯಗೊಂಡವರು ಮತ್ತು ಮೃತ ದೇಹಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಇನ್ನು  ತೀವ್ರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಲಕ್ನೋ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

ಅಪಘಾತದ ದೃಶ್ಯ

ಅಪಘಾತದ ದೃಶ್ಯ

  • Share this:
ಡಬಲ್ ಡೆಕ್ಕರ್ ಬಸ್ (Bus)ಮತ್ತು ಟ್ರಕ್ (Truck)ನಡುವೆ ಡಿಕ್ಕಿಯಾಗಿ ಕನಿಷ್ಠ 9 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಲಖನೌ ಗಡಿ ಭಾಗದ  ಬಾರಾಬಂಕಿ ಜಿಲ್ಲೆಯ ದೇವ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುರಿಯಾ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು ವೇಗವಾಗಿ ಬಸ್ ಬರುತ್ತಿತ್ತು ಮತ್ತು  ಟ್ರಕ್  ಬ್ಯಾಲೆನ್ಸ್​ ತಪ್ಪಿದ ಹಿನ್ನೆಲೆ  ಈ ಅಪಘಾತ(Accident) ಉಂಟಾಗಿದೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ಬಸ್ ದೆಹಲಿಯಿಂದ ಬಹ್ರೈಚ್ ಗೆ ಹೋಗುತ್ತಿದ್ದಾ ಅಪಘಾತ ಸಂಭವಿಸಿದ್ದು, ಬಸ್​ನಲ್ಲಿ ಸುಮಾರು 70 ಮಂದಿ ಇದ್ದರು ಎನ್ನಲಾಗುತ್ತಿದೆ. ಇನ್ನು ಟ್ರಕ್ ಮರಳನ್ನು ಸಾಗಿಸುತ್ತಿತ್ತು.

ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದು, ಗಾಯಗೊಂಡವರು ಮತ್ತು ಮೃತ ದೇಹಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಇನ್ನು  ತೀವ್ರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಲಕ್ನೋ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಘಟನೆಯ ಬಗ್ಗೆ ಬೆಸರ ವ್ಯಕ್ತಪಡಿಸಿದ್ದಾರೆ ಹಾಗೂ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.  ಜೊತೆಗೆ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ ಎರಡು ಲಕ್ಷ ಮತ್ತು ಗಾಯಗೊಂಡವರಿಗೆ 50,000 ರೂ ಪರಿಹಾರವನ್ನು ಘೋಷಿಸಿದ್ದಾರೆ.

ಬಾರಾಬಂಕಿಯಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಟ್ರಕ್ ಸರಿಯಾದ ದಾರಿಯಲ್ಲಿ ಬರುತ್ತಿರಲಿಲ್ಲ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ರಸ್ತೆಯಲ್ಲಿದ್ದ ಹಸುವಿಗೆ ಹೊಡೆಯುವುದನ್ನ ತಪ್ಪಿಸಲು ಹೋಗಿ, ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ವಿವಾದದ ಕೇಂದ್ರಬಿಂದು ಕೇಂದ್ರ ಸಚಿವ ಅಜಯ್​ ಮಿಶ್ರಾ ಯಾರು?

ಇದೆಲ್ಲದರ ನಡುವೆ ಉತ್ತರ ಪ್ರದೇಶದಲ್ಲಿ ಕಳೆದ ಭಾನುವಾರಷ್ಟೇ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ಬೆಂಗಾವಲು ವಾಹನ ಹರಿದ ಪರಿಣಾಮ ರೈತರು ಗಾಯಗೊಂಡಿದ್ದರು. ಲಖಿಂಪುರ್ ಖೇರಿಯಲ್ಲಿ ನಡೆದ  ಈ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಗಾಯಳುಗಳು  ಆರೋಪಿಸಿದ್ದಾರೆ.

ಘಟನೆಯ ಬಳಿಕ ಮಗನ ಪರವಾಗಿ ಮಾತನಾಡಿದ ಅಜಯ್​ ಮಿಶ್ರಾ, ಘಟನೆ ಹೇಗೆ ನಡೆದಿದೆ ಎಂಬುದು ನಮಗೆ ತಿಳಿದಿಲ್ಲ. ಘಟನೆ ವೇಳೆ ತೆಗೆದಿರುವ ವಿಡಿಯೋ ನೋಡಿದರೆ, ನಮ್ಮ ಕಾರು ಚಾಲಕನನ್ನು ಕಾರಿನಿಂದ ಎಳೆದು ಸಾಯಿಸಿರುವುದು ಪತ್ತೆಯಾಗಿದೆ. ಒಂದು ವೇಳೆ ನನ್ನ ಮಗ ಕಾರು ಓಡಿಸುತ್ತಿದ್ದರೆ ಸಾವಿರಾರು ಜನ ತುಂಬಿದ್ದ ಆ ಪ್ರದೇಶದಿಂದ ಆಚೆ ಬರುವುದು ಅಸಾಧ್ಯವಾಗಿತ್ತು. ಚಾಲಕನ ಜಾಗದಲ್ಲಿ ನನ್ನ ಮಗನ ಸಾವಾಗಬೇಕಿತ್ತು. ಅದರಲ್ಲೇ ತಿಳಿಯುತ್ತದೆ ಆತ ಅಲ್ಲಿ ಇರಲಿಲ್ಲ ಎಂದು ಸಬೂಬು ಹೇಳಿದ್ದಾರೆ. ಇದಾದ ನಂತರ ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಸಹ ಅಜಯ್​ ಮಿಶ್ರಾ ಭೇಟಿ ಮಾಡಿ ಘಟನೆಯ ಬಗ್ಗೆ ಮಾತನಾಡಿದ್ದಾರೆ.

ಕಳೆದ ಜುಲೈನಲ್ಲಿ ಸಹ  ಉತ್ತರ ಪ್ರದೇಶದಲ್ಲಿ ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಹಿಂಸಾಚಾರದ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಪ್ರಿಯಾಂಕಾ ಗಾಂಧಿ ಬಂಧನ; ಕಾಂಗ್ರೆಸ್​ ಕಿಡಿ

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Sandhya M
First published: