ಕೋಲ್ಕತ್ತಾ (ಆಗಸ್ಟ್ 31); ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಬೇಕು ಎಂಬುದು ಬಿಜೆಪಿ ಪಕ್ಷದ ಬಹುದೊಡ್ಡ ಮಹತ್ವಾಕಾಂಕ್ಷೆಯಾಗಿತ್ತು. ಇದೇ ಕಾರಣಕ್ಕೆ ಕಳೆದ ವಿಧಾನ ಸಭಾ ಚುನಾವಣೆಗೆ ಮುಂಚೆಯೇ ಅನೇಕ ಟಿಎಂಸಿ ಶಾಸಕರು-ಸಚಿವರನ್ನು ಬಿಜೆಪಿ ಹೈಜಾಕ್ ಮಾಡಿತ್ತು. ಆದರೂ ಸಹ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನ ಗಳಿಸಲು ಸಾಧ್ಯವಾಗಿಲ್ಲ. ಪರಿಣಾಮ ಟಿಎಂಸಿ ಮತ್ತೆ ಅಧಿಕಾರ ಹಿಡಿದದ್ದು, ಮಮತಾ ಬ್ಯಾನರ್ಜಿ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದು ಇಂದು ಇತಿಹಾಸ. ಆದರೆ, ಚುನಾವಣೆ ಮುಗಿಯುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿತ್ತು. ಅನೇಕ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಒಬ್ಬರ ಹಿಂದೆ ಒಬ್ಬರಂತೆ ಟಿಎಂಸಿ ಸೇರ್ಪಡೆಯಾಗುತ್ತಿ ದ್ದಾರೆ. ಈ ನಡುವೆ ಮಂಗಳವಾರ ಮತ್ತೊಬ್ಬ ಬಿಜೆಪಿ ಶಾಸಕ ಟಿಎಂಸಿಗೆ ಸೇರ್ಪಡೆ ಯಾಗಿದ್ದಾರೆ. ಈ ಬೆಳವಣಿಗೆ ಸಾಮಾನ್ಯವಾಗಿ ಬಿಜೆಪಿ ಪಕ್ಷಕ್ಕೆ ಮತ್ತು ಹೈಕಮಾಂಡ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಉತ್ತರ 24 ಪರಗಣಗಳ ಬಾಗ್ದಾದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಇಂದು ಬಿಜೆಪಿ ತೊರೆದು ಟಿಎಂಸಿ ಸೇರಿದ್ದಾರೆ. ಕೊಲ್ಕಾತ್ತಾದ ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜ ಹಿಡಿದಿದ್ದಾರೆ. ಇವರೊಂದಿಗೆ ಕೌನ್ಸಿಲರ್ ಮನೋತೋಶ್ ನಾಥ್ ಮತ್ತು ಸುಬ್ರತಾ ಪಾಲ್ ಎಂಬುವವರು ಸಹ ಇಂದು ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಾಗ್ದಾದ ಶಾಸಕ ಬಿಸ್ವಜಿತ್ ದಾಸ್, ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಗ ಪಕ್ಷಾಂತರಗೊಂಡಿದ್ದರು. ಈಗ ಮತ್ತೆ ಮಾತೃ ಪಕ್ಷವನ್ನು ಸೇರುವ ಮೂಲಕ ಚುನಾವಣೆಯ ನಂತರ ಟಿಎಂಸಿಗೆ ಮರಳಿದ ಮೂರನೇ ಶಾಸಕರಾಗಿದ್ದಾರೆ. ಸೋಮವಾರ ವಿಷ್ಣುಪುರದ ಶಾಸಕ ತನ್ಮಯ್ ಘೋಷ್ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಟಿಎಂಸಿ ಬಿಟ್ಟು ಬಿಜೆಪಿ ಸೇರಿದ ಆರು ತಿಂಗಳ ಒಳಗಾಗಿ ಮತ್ತೆ ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮರಳಿದ್ದರು. ಈ ವೇಳೆ ಬಿಜೆಪಿ ಸೇಡು ತೀರಿಸಿಕೊಳ್ಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದರು.
"ನಾನು ಪಶ್ಚಿಮ ಬಂಗಾಳದ ಕಲ್ಯಾಣಕ್ಕಾಗಿ ಅಭಿವೃದ್ಧಿಗಾಗಿ ಟಿಎಂಸಿ ಪಕ್ಷಕ್ಕೆ ಸೇರಲು ಎಲ್ಲರನ್ನೂ ಕೋರುತ್ತೇನೆ. ಕೇಂದ್ರದ ಬಿಜೆಪಿ ಸರ್ಕಾರ ಕೇಂದ್ರದ ಏಜೆನ್ಸಿಗಳನ್ನು ಬಳಸಿ ಪಶ್ಚಿಮ ಬಂಗಾಳದ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿರನ್ನು ಬೆಂಬಲಿಸುವಂತೆ ಕೇಳಿಕೊಳ್ಳುತ್ತೇನೆ" ಎಂದಿದ್ದರು.
ಬಿಜೆಪಿ ಶಾಸಕ ಮುಕುಲ್ ರಾಯ್ ಮೊದಲು ಟಿಎಂಸಿ ಸೇರುವ ಮೂಲಕ ಪಕ್ಷಾಂತರಕ್ಕೆ ನಾಂದಿ ಹಾಡಿದ್ದರು. ಈಗ ಮುಕುಲ್ ರಾಯ್, ತನ್ಮಯ್ ಘೋಷ್ ಮತ್ತು ಬಿಸ್ವಜಿತ್ ದಾಸ್ ಸೇರಿ ಮೂವರು ಹಾಲಿ ಶಾಸಕರು ಬಿಜೆಪಿ ಬಿಟ್ಟು ಟಿಎಂಸಿಗೆ ಸೇರಿದ್ದಾರೆ. ಇನ್ನು ಅನೇಕ ಬಿಜೆಪಿ ನಾಯಕರು ಟಿಎಂಸಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಹೇಳಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ