ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾದ ದಿನದಿಂದ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ವಿವಾದಕ್ಕೆ ಗುರಿಯಾಗುತ್ತಲೇ ಬಂದಿರುವ ನಟಿ ಕಂಗನಾ ರಣಾವತ್ ವಿರುದ್ಧ ಇಂದು ಮತ್ತೊಂದು ದೂರು ದಾಖಲಾಗಿದೆ. ಈ ಹಿಂದೆ ನಟ ಸುಶಾಂತ್ ಅವರ ಸಾವಿನ ತನಿಖೆಗೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡಿದ್ದ ನಟಿ ಕಂಗನಾ, "ನನಗೆ ಮುಂಬೈ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು" ಎಂದು ಒತ್ತಾಯಿಸಿದ್ದರು. ಅವರ ಈ ಹೇಳಿಕೆಯನ್ನೇ ಮುಂದಿಟ್ಟು ಇದೀಗ ವಕೀಲರೊಬ್ಬರು ಕಂಗನಾ ವಿರುದ್ಧ ಆಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮತ್ತೊಂದು ಕ್ರಿಮಿನಲ್ ದೂರು ದಾಖಲಿಸಿದ್ದಾರೆ.
ಈ ದೂರಿನಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯ ವೇಳೆ ನಟಿ ಕಂಗನಾ ಮುಂಬೈ ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಟ್ವಿಟರ್ನಲ್ಲಿ ರನೌತ್ ಮಾಡಿದ ಟ್ವೀಟ್‌ಗಳು ನಮ್ಮ ದೇಶದ ಕಾನೂನಿನ ಅಡಿಯಲ್ಲಿ ಸ್ಥಾಪಿಸಲ್ಪಟ್ಟ “ಪೊಲೀಸ್ ವ್ಯವಸ್ಥೆ, ಅಧಿಕೃತ ಸರ್ಕಾರಿ ಸಂಸ್ಥೆಗಳು, ಕಾರ್ಯನಿರ್ವಾಹಕ ಯಂತ್ರೋಪಕರಣಗಳು ಇವೆಲ್ಲವನ್ನೂ ಅವಮಾನಿಸಿದಂತಾಗಿದೆ"ಎಂದು ಆರೋಪಿಸಲಾಗಿದೆ.
Complaint filed in court against Kangana Ranaut for shamelessly terming judiciary as Pappu Sena, creating disharmony amongst Hindus and Muslims, calling mumbai as POK, defaming the @MumbaiPolice
and sitting government of Maharashtra. https://t.co/A8eKhYWhOC
— Ali Kaashif Khan Deshmukh (@AliKaashifKhan) October 22, 2020
ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳ ವಿರುದ್ಧ ದೇಶದಾದ್ಯಂತ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲೂ ಸಹ ಟ್ವೀಟ್ ಮಾಡಿದ್ದ ಕಂಗನಾ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದರು. ಈ ಹೇಳಿಕೆಗೂ ಸಹ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ, ಕರ್ನಾಟಕದ ತುಮಕೂರಿನಲ್ಲಿ ಈ ಸಂಬಂಧ ಕಂಗನಾ ವಿರುದ್ಧ ಒಂದು ಎಫ್ಐಆರ್ ದಾಖಲಾಗಿದೆ.
ಪ್ರಸ್ತುತ ಇಂದು ದಾಖಲಾಗಿರುವ ಎಫ್ಐಆರ್ನಲ್ಲಿ ದೇಶದ್ರೋಹ, ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಚೋದನೆ ಸೇರಿದಂತೆ ರನೌತ್ ವಿರುದ್ಧ ಅನೇಕ ಕಲಂಗಳ ಅಡಿಯಲ್ಲಿ ದೂರು ದಾಖಲಾಗಿದೆ. ನವೆಂಬರ್ 10 ರಂದು ಈ ದೂರಿನ ವಿಚಾರಣೆ ನಡೆಯಲಿದೆ.
जैसे रानी लक्ष्मीबाई का क़िला तोड़ा था मेरा घर तोड़ दिया, जैसे सावरकर जी को विद्रोह केलिए जेल में डाला गया था मुझे भी जेल भेजने की पूरी कोशिश की जा रही है, इंटॉलरन्स गँग से जाके कोई पूछे कितने कष्ट सहे हैं उन्होंने ने इस इंटॉलरंट देश में? @aamir_khan
— Kangana Ranaut (@KanganaTeam) October 23, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ