South Western Railway Recruitment 2020: 1004 ಅಪ್ರೆಂಟಿಸ್​​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ವಿದ್ಯಾರ್ಹತೆ ಪಡೆದವರಿಗೆ ಅವಕಾಶ

ವಿದ್ಯಾರ್ಹತೆ: ಐಟಿಐ ವಿದ್ಯಾರ್ಹತೆಯನ್ನು ಪಡೆದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ನೈಋತ್ಯ ರೈಲ್ವೆ ಇಲಾಖೆ ಖಾಲಿ ಇರುವ 1004 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದ್ದು, ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಐಟಿಐ ವಿದ್ಯಾರ್ಹತೆಯನ್ನು ಪಡೆದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ:

    ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ಸಿಗಲಿದೆ.

    ಅರ್ಜಿ ಶುಲ್ಕ: ಸಾಮಾನ್ಯ, ಓಬಿಸಿ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

    -ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ ಹೇಗೆ?: ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಕೆ:

    ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://jobs.rrchubli.in/ActApprentice2020-21/ ಗೆ ಭೇಟಿ ನೀಡಿ. ಅಲ್ಲಿ  ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಜನವರಿ 9,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
    Published by:Harshith AS
    First published: