8 ಸಾವಿರ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

Army Public School Recruitment 2020: ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

news18-kannada
Updated:October 6, 2020, 1:41 PM IST
8 ಸಾವಿರ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಟೀಚರ್​
  • Share this:
ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 8,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿ ಆರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, ಪದವಿ, ಗ್ರಾಜುಯೇಷನ್, ಬಿಎ ಬಿ.ಎಡ್, ಬಿಎಸ್ಸಿ ಬಿ.ಎಡ್, ಡಿ.ಎಡ್, ಬಿ.ಎಡ್ ವಿದ್ಯಾರ್ಹತೆಯನ್ನು ಪಡೆದಿರಬೇಕು. ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕಲಿತ ಅಭ್ಯರ್ಥಿಗಳಿಗೆ ಅರ್ಜಿ ಅಲ್ಲಿಸಲು ಅವಕಾಶ ನೀಡ;ಆಗಿದೆ.

ವಯೋಮಿತಿ:

ಏಪ್ರಿಲ್ 1,2021ರ ಅನ್ವಯ ಹೊಸ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು ವೃತ್ತಿಯಲ್ಲಿ ಅನುಭವ ಹೊಂದಿದ ಗರಿಷ್ಟ 57 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಆಯಾ ವೃತ್ತಿಗೆ ಅನುಸಾರವಾಗಿ ವೇತನ ಸಿಗುವುದು.ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆರ್ಮಿ ಪಬ್ಲಿಕ್​ ಶಾಲೆಯಲ್ಲಿ ಖಾಲಿ ಇರುವ 8 ಸಾವಿರ ಶಿಕ್ಷಕ ಹುದ್ದೆಗಳಿಗೆ ಅರ್ರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://aps-csb.in/College/Index_New.aspx ಗೆ ಭೇಟಿ ನೀಡಿ. ನಂತರ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ, ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
First published: October 6, 2020, 12:15 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading