news18-kannada Updated:November 10, 2020, 2:45 PM IST
ಅರ್ನಾಬ್ ಗೋಸ್ವಾಮಿ.
ನವದೆಹಲಿ (ನವೆಂಬರ್ 10): ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಕಳೆದವಾರ ಅರೆಸ್ಟ್ ಆಗಿರುವ ಬೆಳಗ್ಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೇ ಹೈಕೋರ್ಟ್ ನಿರಕಾರಿಸಿತ್ತು. ಇದಾದ ಬೆನ್ನಲ್ಲೇ ಅರ್ನಬ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್ ಗೋಸ್ವಾಮಿ ಮೇಲಿದೆ. ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು.
“ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ,” ಎಂದು ಡೆತ್ ನೋಟ್ ಬರೆದಿಟ್ಟು ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗ ಸಾವನ್ನಪ್ಪಿರುವುದು ಗೊತ್ತಾಗುತ್ತಿದ್ದಂತೆ ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣದ ವಿಚಾರವಾಗಿ ಕಳೆದ ವಾರ ಅರ್ನಬ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿ ಎಂದು ಅರ್ನಬ್ ಮನವಿ ಮಾಡಿದ್ದರು. ಆದರೆ, ಈ ಮನವಿ ತಿರಸ್ಕರಿಸಿರುವ ನ್ಯಾಯಾಲಯ, ಕೆಳ ಹಂತದ ಕೋರ್ಟ್ಗೆ ತೆರಳಿ ಜಾಮೀನು ಕೋರಬಹುದು ಎಂದು ಹೇಳಿತ್ತು.
Published by:
Rajesh Duggumane
First published:
November 10, 2020, 2:42 PM IST