ನವದೆಹಲಿ (ಫೆ.12): ಅಭೂತಪೂರ್ವ ಗೆಲುವಿನೊಂದಿಗೆ ದೆಹಲಿ ಗದ್ದುಗೆ ಏರಲು ಸಜ್ಜಾಗಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಭಾನುವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಮೂರನೇ ಬಾರಿ ಮುಖ್ಯಮಂತ್ರಿಯಾಗಲು ಸಜ್ಜಾಗಿರುವ ಅರವಿಂದ್ ಕೇಜ್ರಿವಾಲ್ ಫೆ.16ರ ಭಾನುವಾರ ಬೆಳಗ್ಗೆ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ಬೈಜಲ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.
70 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 62 ಸ್ಥಾನಗಳನ್ನು ಗೆಲ್ಲುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.
ಬಿಜೆಪಿ ಅಬ್ಬರದ ಪ್ರಚಾರದ ನಡುವೆಯೂ ದೆಹಲಿ ಜನರು ಆಪ್ ಪಕ್ಷದ ಕಾರ್ಯಕ್ಕೆ ಮೆಚ್ಚಿ ಮತ ಹಾಕಿದ್ದರು.
ಇದನ್ನು ಓದಿ: ದೆಹಲಿಗರೇ ಐ ಲವ್ ಯೂ; ಇದು ದೇಶದ ಗೆಲುವು: ಫಲಿತಾಂಶದ ಬಳಿಕ ಅರವಿಂದ್ ಕೇಜ್ರಿವಾಲ್ ಭಾವೋದ್ವೇಗ
ಹೊಸದಾಗಿ ಸರ್ಕಾರ ರಚಿಸಲಿರುವ ಆಪ್ ಸರ್ಕಾರದ ಸಿಎಂ ಆಗಿ ಫೆ. 14ರಂದು ಅರವಿಂದ್
ಕೇಜ್ರಿವಾಲ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬದಲಾವಣೆಯಾಗಿದ್ದು, ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ