Arvind Kejriwal| ಮಳೆಯಿಂದ ಹಾನಿಗೀಡಾದ ರೈತರಿಗೆ ಸೂಕ್ತ ಪರಿಹಾರ ನೀಡಿ; ಪಂಜಾಬ್ ಸಿಎಂ ಚನ್ನಿಗೆ ಕೇಜ್ರಿವಾಲ್ ಒತ್ತಾಯ!

Rain-Damaged Crops: ಕಳೆದ ವಾರ ಸುರಿದ ಅಕಾಲಿಕ ಭಾರಿ ಮಳೆ, ಜೊತೆಗೆ ಆಲಿಕಲ್ಲು ಮಳೆ ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಪ್ರಮುಖ ಬೆಳೆಗಳಾದ ಭತ್ತ, ಕಬ್ಬು, ಆಲೂಗಡ್ಡೆ ಮತ್ತು ಬಟಾಣಿಯನ್ನು ನಾಶಗೊಳಿಸಿದೆ.

ಅರವಿಂದ್ ಕೇಜ್ರಿವಾಲ್.

ಅರವಿಂದ್ ಕೇಜ್ರಿವಾಲ್.

 • Share this:
  ಪಂಜಾಬ್ (ಅಕ್ಟೋಬರ್​ 26); ಅಕಾಲಿಕ ಮಳೆಯಿಂದ (Premature Rain) ಬೆಳೆಯನ್ನು ಕಳೆದುಕೊಂಡಿರುವ ಪಂಜಾಬ್‌ನ (Punjab) ರೈತರಿಗೆ ಅಲ್ಲಿನ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ (Delhi) ಅರವಿಂದ್ ಕೇಜ್ರಿವಾಲ್ (Arvind Kejriwal), ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ (charanjit singh channi) ಅವರನ್ನು ಇಂದು ಒತ್ತಾಯಿಸಿದ್ದಾರೆ. ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಅನುಭವಿಸಿದ ರಾಷ್ಟ್ರ ರಾಜಧಾನಿಯ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ (Delhi Government) ಕಳೆದ ವಾರ ಘೋಷಿಸಿತ್ತು.

  "ಅಕಾಲಿಕ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳಲ್ಲಿ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ದೆಹಲಿಯಲ್ಲಿ ಮಳೆಯಿಂದ ನಷ್ಟ ಅನುಭವಿಸಿದ ರೈತರಿಗೆ ನಾವು ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದೇವೆ. ಹೀಗಾಗಿ ಅವರ ರಾಜ್ಯದಲ್ಲಿ ರೈತರಿಗೆ ಸೂಕ್ತ ಮತ್ತು ತಕ್ಷಣದ ಪರಿಹಾರವನ್ನು ನೀಡುವಂತೆ ನಾನು ಪಂಜಾಬ್ ಸಿಎಂ ಚನ್ನಿ ಅವರಿಗೆ ಮನವಿ ಮಾಡುತ್ತೇನೆ" ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.  ದೆಹಲಿಯಲ್ಲಿ ಪರಿಹಾರ ಘೋಷಿಸಿದ ಕೇಜ್ರಿವಾಲ್:

  ದೆಹಲಿಯ ಎಲ್ಲಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಬೆಳೆ ನಾಶವಾಗಿರುವ ಸ್ಥಳಗಳ ಸಮೀಕ್ಷೆ ನಡೆಸುತ್ತಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ. ಮುಂದಿನ ಒಂದೂವರೆ ತಿಂಗಳೊಳಗೆ ರೈತರಿಗೆ ಪರಿಹಾರವನ್ನು ವಿತರಿಸಬಹುದು” ಎಂದು ಅರವಿಂದ್ ಕೇಜ್ರಿವಾಲ್ ಕಳೆದ ವಾರ ಹೇಳಿದ್ದರು.

  ಕಳೆದ ವಾರ ಸುರಿದ ಅಕಾಲಿಕ ಭಾರಿ ಮಳೆ, ಜೊತೆಗೆ ಆಲಿಕಲ್ಲು ಮಳೆ ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಪ್ರಮುಖ ಬೆಳೆಗಳಾದ ಭತ್ತ, ಕಬ್ಬು, ಆಲೂಗಡ್ಡೆ ಮತ್ತು ಬಟಾಣಿಯನ್ನು ನಾಶಗೊಳಿಸಿದೆ.

  ಇದನ್ನೂ ಓದಿ: Pinarayi Vijayan| ಮಹಿಳೆಯರ ಮೇಲಿನ ದೌರ್ಜನ್ಯ ತಡೆ, ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ; ಪಿಣರಾಯಿ ವಿಜಯನ್

  ಪಂಜಾಬ್‌ನಲ್ಲಿ ಮಂಡಿಗಳಲ್ಲಿ ಮಾರಾಟಕ್ಕೆ ತಂದಿದ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುವುದು, ರಸ್ತೆ ಬದಿಗಳಲ್ಲಿ ನೀರಿನಲ್ಲಿ ಬೆಳೆ ಹರಿಯುತ್ತಿರುವ ದೃಶ್ಯಗಳು ವೈರಲ್ ಆಗಿದ್ದವು. ಆಲಿಕಲ್ಲು ಮಳೆಯಿಂದ ಬೆಳೆ ನೆಲಕ್ಕೆ ಒರಗಿ ಹಾಳಾಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು.
  Published by:MAshok Kumar
  First published: